ಕಾಂಗ್ರೆಸ್ ಬೆಂಬಲಿಸಲು ನಿರ್ಣಯ: ಕಮಕನೂರ
Team Udayavani, Apr 17, 2019, 4:17 PM IST
ಕಲಬುರಗಿ: ಎಲ್ಲ ವರ್ಗಗಳನ್ನು ಜತೆಗೆ ತೆಗೆದುಕೊಂಡು ಹೋಗುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಏ. 18ರಂದು ಮಧ್ಯಾಹ್ನ 3ಕ್ಕೆ ಗಂಗಾನಗರದ ಅಂಬಿಗರ ಚೌಡಯ್ಯ ಸಭಾ ಮಂಟಪದ ಎದರುಗಡೆ ಸ್ಥಳದಲ್ಲಿ ಕೋಲಿ, ಕಬ್ಬಲಿಗ ಹಾಗೂ ಗಂಗಾಮತ ಸಮಾಜದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೋಲಿ ಸಮಾಜದ ಹಿರಿಯ ನಾಯಕ, ಕಾಂಗ್ರೆಸ್ ಪಕ್ಷದ ಮುಖಂಡ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.
ಕೋಲಿ ಸಮಾಜದ ಮುಖಂಡರುಗಳೊಂದಿಗೆ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಿ ಸಮಾಜದ ಬೆಂಬಲವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಲೇ ಬಂದಿದೆ. ಆದರೆ ಈ ಸಲ ಮತ ವಿಭಜನೆಯಾಗುತ್ತವೆ ಎಂಬುದಾಗಿ ಹೇಳುವುದನ್ನು ತಳ್ಳಿ ಹಾಕಲು ಸಮಾವೇಶ ಸಂಘಟಿಸಲಾಗಿದೆ. ಈ ಸಮಾವೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳಲಿದ್ದಾರೆ ಎಂದರು.
ಸಮಾವೇಶದಲ್ಲಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾಜಿ ಸಚಿವರಾದ ಕೆ.ಬಿ. ಶಾಣಪ್ಪ, ಬಾಬುರಾವ ಚವ್ಹಾಣ, ವಿಧಾನ ಪರಿಷತ್ ಸದಸ್ಯರಾದ ಅಲ್ಲಮವೀರಭದ್ರಪ್ಪ, ಕೆ.ಸಿ. ಕೊಂಡಯ್ಯ, ಯು.ಬಿ. ವೆಂಕಟೇಶ ಹಾಗೂ ಇತರ ಶಾಸಕರು ಮುಖಂಡರು ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ 60 ಲಕ್ಷ ಕೋಲಿ ಸಮಾಜದ ಜನಸಂಖ್ಯೆಯಿದ್ದು, ಜಿಲ್ಲೆಯಲ್ಲಿ ನಾಲ್ಕು ಲಕ್ಷ ಸಮೀಪ ಇದ್ದಾರೆ. ಕಾಂಗ್ರೆಸ್ ಗೆಲುವಿನಲ್ಲಿ ಸಮಾಜದ ಬೆಂಬಲವೇ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಹೀಗಾಗಿ ಈ ಸಲವೂ ಮಲ್ಲಿಕಾರ್ಜುನ ಖರ್ಗೆ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿಯಾಗುವ ಅರ್ಹತೆಯಿದೆ. ಹೀಗಾಗಿ ರಾಷ್ಟ್ರಮಟ್ಟದ ನಾಯಕರನ್ನು
ಗೆಲ್ಲಿಸುವ ಮುಖಾಂತರ ಈ ಭಾಗದ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸುವುದು ಅಗತ್ಯವಾಗಿದೆ ಎಂದರು. ಮಾಜಿ ಸಚಿವ ಬಾಬುರಾವ ಚಿಂಚನಸೂರ ಚುನಾವಣೆ ಬಂದಾಗೊಮ್ಮೆ ಕೋಲಿ ಸಮಾಜ ಪರಿಶಿಷ್ಟ ಜಾತಿ ಸೇರ್ಪಡೆ ಬಗ್ಗೆ ಮಾತನಾಡುತ್ತಾರೆ. ತಮಗೆ ಮಕ್ಕಳು-ಮರಿ ಯಾರೂ ಇಲ್ಲ. ಸಮಾಜವೇ ಮುಖ್ಯವಾಗಿದೆ ಎನ್ನುತ್ತಾರೆ.
ಸಮಾಜಕ್ಕೆ ಅವರ ಕೊಡುಗೆ ಏನು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ ಎಂದು ವ್ಯಂಗ್ಯವಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಎರಡು ಸಲ ಎಸ್ಟಿಗೆ ಸೇರಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಮಾನ್ಯ ಮಾಡದೇ ಎರಡು ಸಲ ವಾಪಸ್ಸು ಕಳುಹಿಸಿದೆ. ಅಂತಹ ಪಕ್ಷಕ್ಕೆ ಈಗ ಚಿಂಚನಸೂರ ಸೇರ್ಪಡೆಯಾಗಿದ್ದಾರೆ. ಸಮಾಜದ ಜನತೆಗೆ ಯಾರಿಗೆ ಬೆಂಬಲಿಸಿದರೆ ಅನುಕೂಲ ಎನ್ನುವ ಮನವರಿಕೆಯಿದೆ. ಎಲ್ಲರಿಗೂ ಈ ವಿಷಯ ತಲುಪಿಸುವ ಅಂಗವಾಗಿ ಸಮಾವೇಶ ಸಂಘಟಿಸಲಾಗಿದೆ ಎಂದು ತಿಳಿಸಿದರು.
11 ಸಲ ಗೆದ್ದಿರುವ ಮಲ್ಲಿಕಾರ್ಜುನ ಖರ್ಗೆ ಈಗ 12ನೇ ಸಲವೂ ಗೆಲ್ಲಲಿದ್ದಾರೆ. ಕೋಲಿ ಸಮಾಜದ ಸಂಪೂರ್ಣ ಬೆಂಬಲ ಅವರಿಗಿದೆ. ಸಮಾಜಕ್ಕೂ ಬೆಂಬಲ ನೀಡುತ್ತಾ ಬಂದಿದ್ದಾರೆ. ಅವರನ್ನು ಆಯ್ಕೆಗೊಳಿಸುವ ಮುಖಾಂತರ ಋಣ ತೀರಿಸಬೇಕಾಗಿದೆ.
ತಿಪ್ಪಣ್ಣಪ್ಪ ಕಮಕನೂರ, ಕೋಲಿ ಸಮಾಜ ಹಾಗೂ ಕಾಂಗ್ರೆಸ್ ಮುಖಂಡರು
ಕೋಲಿ ಸಮಾಜದ ಹಿರಿಯ ನಾಯಕ ತಿಪ್ಪಣ್ಣಪ್ಪ ಕಮಕನೂರ ಅವರನ್ನು ವಿಧಾನ ಪರಿಷತ್
ಗೆ ನಾಮನಿರ್ದೇಶನ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಒಮ್ಮತದಿಂದ ನಿರ್ಣಯ ಕೈಗೊಂಡು ಸರ್ಕಾರದಿಂದ ಪ್ರಸ್ತಾವನೆ ಅಂತಿಮವಾಗಿ ಸಂಬಂಧಪಟ್ಟವರಿಗೆ ಸಲ್ಲಿಕೆಯಾಗಿದೆ. ಯಾವುದೇ ಸಂದರ್ಭದಲ್ಲೂ ಒಪ್ಪಿಗೆ ದೊರೆತು ಆದೇಶ ಹೊರ ಬೀಳುವ ಸಾಧ್ಯತೆಗಳಿವೆ.
ರಾಜಗೋಪಾಲರೆಡ್ಡಿ, ಕೋಲಿ ಸಮಾಜ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.