ಮತಗಟ್ಟೆ ಸುತ್ತ ನಿರ್ಬಂಧ ಘೋಷಣೆ

•200 ಮೀಟರ್‌ ವ್ಯಾಪ್ತಿ ಪ್ರದೇಶ ನಿರ್ಬಂಧಿತವೆಂದು ಜಿಲ್ಲಾಧಿಕಾರಿ ಆದೇಶ

Team Udayavani, May 14, 2019, 4:24 PM IST

Udayavani Kannada Newspaper

ಕಲಬುರಗಿ: ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೇ 19ರಂದು ಮತದಾನ ನಡೆಯಲಿದೆ. ಈ ಉಪಚುನಾವಣೆ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಮೇ 19ರ ಬೆಳಗಿನ 6ರಿಂದ ಸಂಜೆ 6ರ ವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯಗೊಂಡು ಮತಗಟ್ಟೆ ಸಿಬ್ಬಂದಿಗಳು ಮತಗಟ್ಟೆಯಿಂದ ತೆರಳುವವರೆಗೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಸುತ್ತಮುತ್ತಲು 200 ಮೀಟರ್‌ ವ್ಯಾಪ್ತಿ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಆದೇಶ ಹೊರಡಿಸಿದ್ದಾರೆ.

ಮೆರವಣಿಗೆ ಅಥವಾ 5 ಜನರಿಂಗಿತ ಹೆಚ್ಚು ಜನ ಸೇರುವುದು, ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಫೊಧೀಟಕ ವಸ್ತುಗಳನ್ನು ಒಯ್ಯುವುದನ್ನು, ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದನ್ನು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿ ಸಲಾಗಿದೆ. ಸಾರ್ವಜನಿಕ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಹಾಗೂ ಸಾರ್ವಜನಿಕರ ಗಾಂಭಿರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ಚುನಾವಣಾ ಕರ್ತವ್ಯನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸ್‌ ಅಧಿಕಾರಿಗಳಿಗೆ, ನೇಮಕಗೊಂಡಿರುವ ಚುನಾವಣಾ ಏಜೆಂಟ್ಸ್‌ಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ.

ಈ ಆದೇಶವು ಅಂತ್ಯಕ್ರಿಯೆ ಮೆರವಣಿಗೆ ಮತ್ತು ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಬೇಕೆಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.