ಸರ್ಕಾರಿ ಯೋಜನೆ ಜನರಿಗೆ ತಲುಪಿಸಿ: ಜಾಧವ
Team Udayavani, Aug 25, 2020, 5:16 PM IST
ಕಾಳಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.
ಇಲ್ಲಿನ ಸಾಗರ ಮಹಲ್‌ನ ನೆಲ ಮಹಡಿಯಲ್ಲಿ ಭಾರತೀಯ ಜನತಾ ಪಕ್ಷದ ನೂತನ ತಾಲೂಕು ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕರ್ತರು ಪಕ್ಷದ ಕಾರ್ಯಾಲಯವನ್ನು ದಿನದ 24 ಗಂಟೆಯೂ ತೆರೆದಿಟ್ಟು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಚಾರ ಮಾಡಿ ಜನರಿಗೆ ಮುಟ್ಟುವಂತೆ ಮಾಡಬೇಕು ಎಂದರು.
ನಂತರ ನಡೆದ ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಮಾಜದ ತಾಲೂಕು ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಂಸದರು, ದೇಶದ ವಲಯದ ಕಾರ್ಮಿಕರೆಂದು ಗುರುತಿಸಿ ಹಡಪದ ಸಮಾಜಕ್ಕೆ ಅಗತ್ಯವಿರುವ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಎಲ್ಲ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಚಿಕ್ಕಗುರುನಂಜೇಶ್ವರ ಸ್ವಾಮಿಗಳು, ಶಿವಬಸವ ಶಿವಾಚಾರ್ಯರು, ಶಾಸಕರಾದ ಬಿ.ಜಿ. ಪಾಟೀಲ, ಡಾ| ಅವಿನಾಶ ಜಾಧವ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ, ಸಂತೋಷ ಗಡಂತಿ, ರಾಮಚಂದ್ರ ಜಾಧವ, ಸಂತೋಷ ಪಾಟೀಲ ಮಂಗಲಗಿ, ಲಕ್ಷ್ಮಣ ಆವಂಟಿ, ಜಗದೀಶ ಪಾಟೀಲ, ಸುಧಾಕರ ಪಾಟೀಲ, ಚಂದ್ರಕಾಂತ ಜಾಧವ, ಪ್ರಶಾಂತ ಕದಂ, ರಮೇಶ ಕಿಟ್ಟದ, ತುಳಸಿರಾಮ ಕೋಡ್ಲಿ, ಈರಣ್ಣ ಸಣ್ಣೂರ, ಶ್ರೀಮಂತ ಮಳಗಿ ಇದ್ದರು. ರೇವಣಸಿದ್ದಪ್ಪ ಮೊಘ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.