ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ನಿರಶನ


Team Udayavani, Sep 25, 2020, 5:04 PM IST

gb-tdy-4

ಸಾಂದರ್ಭಿಕ ಚಿತ್ರ

ಜೇವರ್ಗಿ: ಅತೀವೃಷ್ಟಿಯಿಂದ ಬೆಳೆಹಾನಿಯಾದ ರೈತರಿಗೆ ಹಾಗೂ ಪ್ರವಾಹ ಸಂತ್ರಸ್ತರಿಗೆ ಶೀಘ್ರದಲ್ಲಿ ಪರಿಹಾರ ನೀಡುವಂತೆ ಒತ್ತಾಯಿಸಿ ಕರವೇ ನೆಲೋಗಿ ವಲಯ ಘಟಕದ ವತಿಯಿಂದ ಗುರುವಾರ ತಾಲೂಕಿನ ಜೇರಟಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-50 ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ನೆಲೋಗಿ ವಲಯ ಘಟಕದ ಅಧ್ಯಕ್ಷ ಯಲ್ಲಪ್ಪ ಬಂಕಲಗಿ ಮಾತನಾಡಿ, ಕೋಚಿಡ್ ಮಹಾಮಾರಿಯಿಂದ ಲಾಕ್‌ ಡೌನ್‌ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗಲಿಲ್ಲ. ಈಗ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ನೂರಾರು ರೈತರ ಬೆಳೆಗಳು ಹಾಗೂ ಫಲವತ್ತಾದ ಜಮೀನು ಹಾಳಾಗಿದೆ. ಆದ್ದರಿಂದ ರೈತರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಕೋವಿಡ್ ವಾರಿಯರ್ಸ್‌ಗಳಾಗಿ ಹಗಲಿರುಳು ಶ್ರಮವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ದಿನಗೂಲಿಯಂತೆ ತಿಂಗಳಿಗೆ 12 ಸಾವಿರ ರೂ. ನೀಡಬೇಕು. ಅಂಕಲಗಾ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ವಸತಿ ನಿಲಯ ಸ್ಥಾಪನೆ ಮಾಡಬೇಕು. ನೆಲೋಗಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಸಿದರಾಯ ಭೋಸಗಿ ಬೇಡಿಕೆ ಈಡೇರಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಹಾಗೂ ಶಾಸಕರ ಗಮನಕ್ಕೆ ತಂದು ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಗೋರಗುಂಡಗಿಯ ವರಲಿಂಗೇಶ್ವರ ಸ್ವಾಮೀಜಿ, ಕರವೇ ತಾಲೂಕು ಅಧ್ಯಕ್ಷ ಶಿವಲಿಂಗ ಹಳ್ಳಿ, ಮುಖಂಡರಾದ ಗುರುಪ್ರಸಾದ ಹುಲ್ಲೂರ, ಮಲ್ಲಿಕಾರ್ಜುನ ಬಿರಾದಾರ, ಸುರೇಶ ಬೇಲೂರ, ಶರಣಪ್ಪ ಜೇರಟಗಿ, ರಾಜು ಮುದ್ದಾ, ಪ್ರಭಾಕರ ಬಂಡಗಾರ, ಮಹೇಶ ಕೂಡಲಗಿ, ರಫೀಕ ಜೇರಟಗಿ, ರಮೇಶ ಯಾತನೂರ, ಚಿದಾನಂದ ಇಟಗಾ ಸೇರಿದಂತೆ ಕರವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.