ಸಮಾನ ವೇತನಕ್ಕೆ ಆಗ್ರಹ
Team Udayavani, Feb 23, 2018, 11:42 AM IST
ಜೇವರ್ಗಿ: ಕೇಂದ್ರಿಯ ವಿದ್ಯಾಲಯಗಳಲ್ಲಿ ಶಿಕ್ಷಕರಿಗೆ ನೀಡುವ ವೇತನದಂತೆ ರಾಜ್ಯ ಸರ್ಕಾರ ಧೀನದ ಶಿಕ್ಷಕರಿಗೂ ಸಮಾನ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ದೇಶದ ಬಹುತೇಕ ರಾಜ್ಯಗಳು ಕೇಂದ್ರ ಸರ್ಕಾರ ನಡೆಸುವ ಕೇಂದ್ರಿಯ ವಿದ್ಯಾಲಯ, ನವೋದಯ ವಿದ್ಯಾಲಯಗಳಲ್ಲಿ ಶಿಕ್ಷಕರಿಗೆ ನೀಡುವ ವೇತನವನ್ನು ರಾಜ್ಯ ಸರ್ಕಾರದ ಅಧೀನ ಶಾಲೆಗಳ ಶಿಕ್ಷಕರಿಗೂ ನೀಡುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಇದನ್ನು ಜಾರಿಗೆ ತರುವಂತೆ ಮಾಧ್ಯಮಿಕ ಶಿಕ್ಷಕರ ಒತ್ತಾಯಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗಿಲ್ಲ. 6ನೇ ವೇತನ ಆಯೋಗ ಕರ್ನಾಟಕ ಸರ್ಕಾರಿ ನೌಕರರಿಗೂ ಶೇ.30ರಷ್ಟು ವೇತನ ಹೆಚ್ಚಳ ಮಾಡಲು ವರದಿ ನೀಡಿದೆ ಎಂದು ಹೇಳಲಾಗುತ್ತಿದ್ದರೂ ಕೇಂದ್ರ ಹಾಗೂ ರಾಜ್ಯದ ಶಿಕ್ಷಕರ ವೇತನದಲ್ಲಿ ಶೇ.67ರಷ್ಟು ವ್ಯತ್ಯಾಸವಿದೆ. ಆದ್ದರಿಂದ ಶಿಕ್ಷಕರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೆ ನೀಡುವ ವೇತನವನ್ನು ರಾಜ್ಯ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೂ ನೀಡಲು ಮನವಿ ಪತ್ರದ ಮೂಲಕ ಆಗ್ರಹಿಸಲಾಯಿತು.
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ತಾಲೂಕು ಘಟಕದ ಅಧ್ಯಕ್ಷ ಅಶೋಕ ಜೋಶಿ, ವಿಭಾಗ ಪ್ರಮುಖ ಮಹೇಶ ಬಸರಕೋಡ, ಎಸ್.ಬಸಣ್ಣ, ಬಸವರಾಜ ಹದಗಲ್, ಪಂಡಿತ ನೆಲ್ಲಗಿ, ಧನಸಿಂಗ್ ರಾಠೊಡ, ಅಮೋಪ್ಪ, ಮಲ್ಲಿಕಾರ್ಜುನ, ಎಸ್.ಎಸ್.ಗೊಂಬಿಮಠ, ಎಸ್.ಆರ್. ಪರಸಗೊಂಡ, ಸಿದ್ದಪ್ಪ ಕಕ್ಕಳಮೇಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.