ಪಾಲಿಕೆ ಅಧಿಕಾರಿಗಳ ವರ್ಗಾವಣೆಗೆ ಆಗ್ರಹ
Team Udayavani, Apr 7, 2018, 11:40 AM IST
ಕಲಬುರಗಿ: ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, 10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಅಹಿಂದ ಚಿಂತಕರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸಾಯಬಣ್ಣ ಜಮಾದಾರ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಾಮಾನ್ಯ ಜನರಿಗೆ ಸರಿಯಾದ ರೀತಿಯಲ್ಲಿ ಸೇವೆ ನೀಡುತ್ತಿಲ್ಲವಾದ್ದರಿಂದ ಇವರನ್ನು ವರ್ಗಾವಣೆ ಮಾಡಬೇಕು. ಸಂವಿಧಾನದ ಆದೇಶದಂತೆ ಸರ್ಕಾರಿ ನೌಕರಿ ಮಾಡುವವರಿಗೆ ಮೂರು ವರ್ಷದ ಅವಧಿ ಮುಗಿದ ನಂತರ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡಲು ಅವಕಾಶವಿದ್ದರೂ ಪಾಲಿಕೆಯ ಅಧಿಕಾರಿಗಳನ್ನು 10 ವರ್ಷವಾದರೂ ವರ್ಗಾವಣೆ ಮಾಡಿಲ್ಲ ಎಂದರು . ಪಾಲಿಕೆ ಅಧಿಕಾರಿಗಳಾದ ಆರ್.ಪಿ. ಜಾಧವ್, ವಿಜಯಲಕ್ಮೀ ಪಟ್ಟೇದಾರ, ರಿಯಾಜ್, ಸೌಭಾಗ್ಯ, ಅಕ್ರಮ್, ದಿರಾಬಾಯಿ, ಜೈರಾಮ ಕುಲಕರ್ಣಿ ಸೇರಿದಂತೆ ಹಲವು ಅಧಿಕಾರಿಗಳನ್ನು ಒಂದು ವಾರದೊಳಗೆ ವರ್ಗಾವಣೆ ಮಾಡದಿದ್ದರೇ ಅಹಿಂದ ಚಿಂತಕರ ವೇದಿಕೆ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ಅಹಿಂದ ಚಿಂತಕರ ವೇದಿಕೆ ಕಾರ್ಯದರ್ಶಿ ರಾಜೇಂದ್ರ ರಾಜವಾಳ, ಜಿಲ್ಲಾ ಖಜಾಂಚಿ ಸಂಜು ಹೊಡಲಕರ್, ರಮೇಶ ಹಡಪದ, ವೀರಥಾ ಪೂಜಾರಿ, ಸಿದ್ದರಾಮ ಘಾಳೆ, ಸಾಯಬಣ್ಣ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು
ಹೈಸ್ಕೂಲ್‌ನಲ್ಲಿ ಹಿಂದಿ ಬದಲಿಗೆ ಕೌಶಲ ವಿಷಯ ಆಯ್ಕೆಗೆ ಒತ್ತಡ
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್