ಶಾಲೆಗೆ ಹೊಸ ಕಟ್ಟಡ ನಿರ್ಮಿಸಿಕೊಡಲು ಆಗ್ರಹ
Team Udayavani, Jul 4, 2022, 12:52 PM IST
ಚಿಂಚೋಳಿ: ಸೇಡಂ ಮತಕ್ಷೇತ್ರಕ್ಕೆ ಒಳಪಟ್ಟಿರುವ ಕರ್ಚಖೇಡ ಗ್ರಾಮದಲ್ಲಿ ಅನೇಕ ವರ್ಷಗಳ ಹಿಂದೆ ನಿರ್ಮಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತುಂಬಾ ಶಿಥಿಲಾವಸ್ಥೆ ಇದೆ. ಶಾಲೆಗೆ ಹೊಸ ಕಟ್ಟಡ ನಿರ್ಮಿಸಿಕೊಡಿರಿ ಎಂದು ಗ್ರಾಮದ ಶಾಲಾ ಮಕ್ಕಳು ಪೋಷಕರು ಚಿಂಚೋಳಿ-ಸೇಡಂ ರಾಜ್ಯ ಹೆದ್ದಾರಿ (ನಿಡಗುಂದಾ) ಕ್ರಾಸ್ ಹತ್ತಿರ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.
ತಾಲೂಕಿನ ಕರ್ಚಖೇಡ ಗ್ರಾಮದಲ್ಲಿ ಆಗಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲರು 1966ರಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 5 ಶಾಲೆ ಕೋಣೆಗಳನ್ನು ನಿರ್ಮಿಸಿಕೊಟ್ಟಿದ್ದರು. ಅನೇಕ ವರ್ಷಗಳಿಂದ ಶಿಥಿಲಾವ್ಯವಸ್ಥೆಯಲ್ಲಿಯೇ 1ರಿಂದ 8ನೇ ತರಗತಿ ನಡೆಸಲಾಗುತ್ತಿದೆ. ಒಟ್ಟು 250 ಮಕ್ಕಳನ್ನು ಹೊಂದಿದೆ. ಮಳೆಗಾಲದಲ್ಲಿ ತುಂಬಾ ಸೋರಿಕೆ ಯಾಗುತ್ತಿರುವುದರಿಂದ ಮಕ್ಕಳಿಗೆ ನೆಲದ ಮೇಲೆ ಕುಳಿತುಕೊಳ್ಳಲು ಆಗುತ್ತಿರಲಿಲ್ಲ. ಇದರಿಂದಾಗಿ ಅನೇಕ ವರ್ಷಗಳಿಂದ ಶಾಲೆ ನಿರ್ಮಿಸಿಕೊಡಬೇಕೆಂದು ಸೇಡಂ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಶಾಸಕರು ನಿರ್ಲಕ್ಷತನ ಮಾಡಿದ್ದರಿಂದ ನಿಡಗುಂದಾ ಗ್ರಾಮದ ಕ್ರಾಸ್ ಹತ್ತಿರ ಪೋಷಕರು, ಶಾಲೆ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು.
ಸುಲೇಪೇಟ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರು ಸುದ್ದಿ ತಿಳಿದ ನಂತರ ಪ್ರತಿಭಟನೆ ಸ್ಥಳಕ್ಕೆ ಹೋಗಿ ಶಾಲೆ ವಿದ್ಯಾರ್ಥಿಗಳ ಸಮಸ್ಯೆ ತಿಳಿದುಕೊಂಡರು. ನಾನು ಇನ್ನೆರಡು ದಿನಗಳಲ್ಲಿ ಖುದ್ದಾಗಿ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ನೀಡುವೆ. ಹೊಸ ಶಾಲೆ ನಿರ್ಮಿಸಿ ಕೊಡುತ್ತೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.
ತಹಶೀಲ್ದಾರ್ ಅಂಜುಮ್ ತಬಸುಮ್, ಬಿಇಒ ರಾಚಪ್ಪ ಭದ್ರಶೆಟ್ಟಿ, ಸಿಪಿಐ ಮಹಾಂತೇಶ ಕೆ.ಜಿ. ಮನವಿ ಸ್ವೀಕರಿಸಿದರು. ಕರ್ಚಖೇಡ ಗ್ರಾಮಸ್ಥರಾದ ಸಂಗಾರೆಡ್ಡಿ ಪಾಟೀಲ, ಸಲೀಮಪಾಶಾ, ಚಾಂದಪಾಶಾ, ಆನಂದ, ಪ್ರಕಾಶ,ಬಾಲಪ್ಪ, ಕರವೇ ಮುಖಂಡ ಪಂಡಿತ ಪವಾರ, ಅರವಿಂದ, ಅಂಬರೀಶ, ಅವಿನಾಶ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.