ಬೇಡ ಜಂಗಮರಿಗೆ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹ
Team Udayavani, Jul 12, 2022, 6:05 PM IST
ರಾಯಚೂರು: ಬೇಡ ಜಂಗಮ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸಾಂವಿಧಾನಿಕ ಕರ್ತವ್ಯದಡಿ ರಾಜ್ಯ ಸರ್ಕಾರ ವಿತರಿಸಬೇಕು ಎಂದು ಆಗ್ರಹಿಸಿ ತಾಲೂಕು ಬೇಡ ಜಂಗಮ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಡಿಸಿ ಕಚೇರಿ ಎದುರಿನ ಉದ್ಯಾನವನದಲ್ಲಿ ಧರಣಿ ನಡೆಸಿದ ಸಮಾಜ ಬಾಂಧವರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ಬೇಡ ಜಂಗಮರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಲು ಹೊರಟಿದೆ. ಆ ಮೂಲಕ ಸಂವಿಧಾನಕ್ಕೆ ಸಂವಿಧಾನ ಶಿಲ್ಪಿಗೆ ಅಪಚಾರ ಎಸಗುತ್ತಿರುವುದು ಖೇದನೀಯ. ಬೇಡ ಜಂಗಮ ಪ್ರಮಾಣಪತ್ರ ವಿತರಣೆ ವಿಚಾರವಾಗಿ ಸಮಾಜದ ಹಿರಿಯ ನಾಯಕ ಬಿ.ಡಿ. ಹಿರೇಮಠ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಪ್ರತಿಪಾದನಾ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ ಎಂದು ವಿವರಿಸಿದರು.
ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸೋಮವಾರ ಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯರು, ಖಾನಾಪುರ ಮಠದ ಶ್ರೀಗಳು, ಸಮಾಜದ ಮುಖಂಡರಾದ ವೀರಯ್ಯ ಸ್ವಾಮಿ, ಶರಣಬಸವ ಹಿರೇಮಠ, ಪ್ರಭು ಶಾಸ್ತ್ರಿ, ರಾಜಶೇಖರಯ್ಯ ಸ್ವಾಮಿ, ಸಂಗಯ್ಯ ಸ್ವಾಮಿ, ಶರಣಬಸವ ಹಿರೇಮಠ, ಜಗದೀಶ ಸ್ವಾಮಿ, ಬಸಯ್ಯ ಸ್ವಾಮಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.