ಬೆಳೆದ ಎಲ್ಲ ತೊಗರಿ ಖರೀದಿಸಲು ಆಗ್ರಹ
Team Udayavani, Feb 21, 2018, 10:20 AM IST
ಕಲಬುರಗಿ: ರೈತರು ಬೆಳೆದ ಎಲ್ಲ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎತ್ತಿನ ಬಂಡಿಗಳೊಂದಿಗೆ ಬೃಹತ್ ಪ್ರತಿಭಟನೆಗೆ ಮುಂದಾದ ಮಾರುತಿ ಮಾನ್ಪಡೆ ಸೇರಿದಂತೆ ರೈತ ಮುಖಂಡರನ್ನು ಬಂಧಿಸಿದ ಘಟನೆ ಮಂಗಳವಾರ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆಯಿತು.
ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಎತ್ತಿನ ಬಂಡಿಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬೇಡಿಕೆ ಈಡೇರುವವರೆಗೆ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಲು ಹೋಗುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘ, ಅಖೀಲ ಕಿಸಾನ್ ಸಭಾ, ಸಹಕಾರಿ ಸಂಘಗಳ ಒಕ್ಕೂಟ, ರೈತ ಉತ್ಪಾದಕರ ಸಂಘಟನೆ, ತೊಗರಿ ಬೆಳೆಗಾರರ ಹೋರಾಟ ಸಮಿತಿ ಚಿತ್ತಾಪೂರ, ಹೈ.ಕ. ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೈನ್ಯ, ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ತಡೆದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ತೊಗರಿ ಬೆಳೆಗಾರರ ನೋಂದಣಿ ಅವಧಿ ಇನ್ನೊಂದು ತಿಂಗಳು ವಿಸ್ತರಿಸಬೇಕು, ಎಫ್‌ಪಿಒ, ಟಿಎಪಿಸಿಎಂಎಸ್ ಒಳಗೊಂಡಂತೆ ಇನ್ನು ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರೆಯಬೇಕು, ಹೊರದೇಶದಿಂದ ಆಮದಾಗುವ ಬೇಳೆಕಾಳುಗಳ ಮೇಲೆ ಶೇ.35ರಷ್ಟು ಆಮದು ಶುಲ್ಕ ಹಾಕಬೇಕು, ಡಾ| ಎಂ.ಎಸ್. ಸ್ವಾಮಿನಾಥನ್ ವರದಿಯಂತೆ 7500 ರೂ.ಗಳ ಬೆಂಬಲ ಬೆಲೆ ನೀಡಬೇಕು. 2015-16ರಲ್ಲಿ ಬಾಕಿ ಉಳಿದ ಬೆಳೆವಿಮೆ ಮಂಜೂರು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮಾರುತಿ ಮಾನ್ಪಡೆ, ಮೌಲಾಮುಲ್ಲಾ, ಬಸವರಾಜ ಪವಾಡಶೆಟ್ಟಿ, ಮೊಬಿನ್ ಅಹ್ಮದ್, ಮಲ್ಲಿಕಾರ್ಜುನ ಸತ್ಯಂಪೇಟ್, ಮಂಜುನಾಥಗೌಡ, ಮಲ್ಲಣ್ಣಗೌಡರು, ಪಾಂಡುರಂಗ ಮಾವಿನಕರ್, ಶಂಕರಗೌಡ ಭಂಕೂರ, ಶರಣಬಸಪ್ಪ ಮಮಶೆಟ್ಟಿ, ಶರಣಬಸಪ್ಪ ಹಾಗೂ ಇತರರನ್ನು ಪೊಲೀಸರು ವಶಕ್ಕೆ ಪಡೆದರು.
20 ಕ್ವಿಂಟಲ್ ತೊಗರಿ ಖರೀದಿಗೆ ಆಗ್ರಹ
ಕಲಬುರಗಿ: ರಾಜ್ಯ ಸರಕಾರದ ನಿರ್ಧಾರಗಳು ತೊಗತಿ ಬೆಳೆಗಾರರನ್ನು ಸಂಪೂರ್ಣ ಅಧೀರರನ್ನಾಗಿಸಿವೆ. ಬೆಂಬಲ ಬೆಲೆಯಂತೆ ಖರೀದಿ ಆರಂಭಿಸಿತು. ಅದನ್ನು ಕೂಡಲೇ ನಿಲ್ಲಿಸಿಬಿಟ್ಟತು. ಈಗ ಪುನಃ ಖರೀದಿ ಮಾಡುವುದಾಗಿ ಹೇಳಿದ್ದರೂ 10 ಕ್ವಿಂಟಲ್ ಮಿತಿ ಹೇರಿದೆ. ಆದ್ದರಿಂದ ಇಂತಹ ಮೇಲಾಟದಿಂದ ಹಿಂದೆ ಸರಿದು ಕೂಡಲೇ ಮಾತು ಕೊಟ್ಟಂತೆ 20 ಕ್ವಿಂಟಲ್ ತೊಗರಿ ಖರೀದಿ ಮಾಡಬೇಕು ಎಂದು ಎಂಎಲ್‌ಸಿ ಅಮರನಾಥ ಪಾಟೀಲ ಆಗ್ರಹಿಸಿದ್ದಾರೆ.
ಈ ನಿಟ್ಟಿನಲ್ಲಿ ಸಭಾಪತಿಗಳಿಗೆ ಪತ್ರ ಬರೆದ ಅವರು, ರಾಜ್ಯ ಸರಕಾರದ ಬೇಜವಾಬ್ದಾರಿತನದಿಂದಾಗಿ ಇವತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. 9 ಜಿಲ್ಲೆಗಳಲ್ಲಿ ತೊಗರಿ ಖರೀದಿ ಕೇಂದ್ರಗಳಲ್ಲಿ ಒಟ್ಟು 3.15 ಲಕ್ಷ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಿದ್ದಾರೆ. ಈ ಪೈಕಿ ಕೇವಲ 91 ಸಾವಿರ ರೈತರಿಂದ ಮಾತ್ರವೇ ತೊಗರಿ ಖರೀದಿ ಮಾಡಲಾಗಿದೆ. ಇನ್ನುಳಿದ ತೊಗರಿ ಖರೀದಿ ಮಾಡಲು ಸರಕಾರ ಮೀನಾಮೇಷ ಎಣಿಸುತ್ತಿದೆ. ಇನ್ನೊಂದೆಡೆ ತೊಗರಿ ಖರೀದಿ ಮಾಡಿ ತಿಂಗಳಾದರೂ ಇನ್ನೂ ರೈತರ ಖಾತೆಗಳಿಗೆ ಹಣ ಹಾಕಿಲ್ಲ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.