ಬೆಂಬೆಲೆ ಕಾನೂನು ಬದ್ದಕ್ಕೆ ಆಗ್ರಹ
Team Udayavani, Sep 21, 2022, 3:34 PM IST
ವಾಡಿ: ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನುಬದ್ಧಕ್ಕೆ ಆಗ್ರಹಿಸಿ ವಿವಿಧ ಗ್ರಾಮಗಳ ರೈತರು, ಅಖೀಲ ಭಾರತ ರೈತ-ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ನೇತೃತ್ವದಲ್ಲಿ ಸಂಘಟಿತರಾಗುವ ಮೂಲಕ ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಯಿತು.
ಈ ಕುರಿತು ಮಂಗಳವಾರ ಚಿತ್ತಾಪುರ ತಾಲೂಕಿನ ಹಳಕರ್ಟಿ, ಲಾಡ್ಲಾಪುರ, ಕಮರವಾಡಿ ಸೇರಿದಂತೆ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಏಕಕಾಲದಲ್ಲಿ ಮನವಿಪತ್ರ ಸಲ್ಲಿಸಿ, ಅಖೀಲ ಭಾರತ ಪ್ರತಿಭಟನಾ ದಿನವನ್ನಾಗಿ ಆಚರಿಸಲಾಯಿತು.
ಈ ವೇಳೆ ರೈತರನ್ನು ಉದ್ದೇಶಿಸಿ ಮಾತನಾಡಿದ ಎಐಕೆಕೆಎಂಎಸ್ ತಾಲೂಕು ಉಪಾಧ್ಯಕ್ಷ ಗುಂಡಣ್ಣ ಎಂ.ಕೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಗ್ರಾಮೀಣ ಬಡ ಜನತೆ ಬದುಕಿನ ಮೇಲೆ ಸರ್ಕಾರವೇ ಬರೆ ಎಳೆದಿದೆ. ಬೀಜ, ರಸಗೊಬ್ಬರ ಬೆಲೆ ದುಬಾರಿಗೊಳಿಸಿ ಸಬ್ಸಿಡಿ ಹಿಂದಕ್ಕೆ ಪಡೆದು ಕೃಷಿಯನ್ನೇ ಕಡೆಗಣಿಸಲಾಗಿದೆ. ಆದ್ದರಿಂದ ಸರ್ಕಾರವೇ ಬೆಳೆ ಖರೀದಿಸಬೇಕು. ಎಂಎಸ್‌ಪಿ ಕಾನೂನು ಬದ್ಧ ಮಾಡಬೇಕು ಎಂದು ಆಗ್ರಹಿಸಿದರು.
ರೈತರಾದ ಮಲ್ಲಣ್ಣ ಗಂಜಿ, ನಾಗಪ್ಪ ದಂಡಬಾ, ಈರಣ್ಣ ನರಿಬೋಳ, ಶರಣು ಗಂಜಿ, ಸಾಬಣ್ಣ ಚಿನ್, ಬಸಣ್ಣ ಗಜ್ಜ, ಮಾಶಪ್ಪ ಆನೇಮಿ, ಮರೆಪ್ಪ ಆನೇಮಿ, ಅಯ್ಯಪ್ಪ ಆನೇಮಿ, ಮಲ್ಲಪ್ಪ ಹಡಪದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಮರವಾಡಿ ಗ್ರಾಪಂ: ಎಐಕೆಕೆಎಂಎಸ್ ಕರೆ ನೀಡಿದ ಅಖೀಲ ಭಾರತ ಪ್ರತಿಭಟನಾ ದಿನದ ನಿಮಿತ್ತ ಮರವಾಡಿ ರೈತರು ಗ್ರಾಪಂ ಪಿಡಿಒ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸಿದರು. ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ರೈತರು ಬೆಳೆದ ಬೆಳೆಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಬದ್ಧಗೊಳಿಸುವಂತೆ ಆಗ್ರಹಿಸಿದರು.
ರೈತ-ಕೃಷಿ ಕಾರ್ಮಿಕ ಸಂಘಟನೆ ತಾಲೂಕು ಕಾರ್ಯದರ್ಶಿ ಶಿವುಕುಮಾರ ಅಂದೋಲಾ, ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಕರದಳ್ಳಿ, ಕಾರ್ಯದರ್ಶಿ ಸೂರ್ಯಕಾಂತ ಶಿರವಾಳ, ರೈತ ಮುಖಂಡರಾದ ಹಣಮಂತ ತಳವಾರ, ರಾಯಪ್ಪ ಕೊಟಗಾರ, ಮರೆಪ್ಪ ಮಾಂಗ್, ಬಸವರಾಜ ಸ್ವಾಮಿ, ಮರೆಪ್ಪ ಕರಕನೋರ, ಮಹಾಂತೇಶ ಹುಳಗೋಳ, ಶರಣಪ್ಪ ಪೂೂಜಾರಿ, ಮಹೆಮೂದ್ ಗುಡುಸಾಬ, ಗುರುಪ್ರಸಾದ ಕರಕನೋರ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.