ಶಹಾಬಾದಲ್ಲಿ ಡೆಂಘೀ ಭೀತಿ: ಆತಂಕದಲ್ಲಿ ಜನತೆ
Team Udayavani, Jul 11, 2021, 5:03 PM IST
ಶಹಾಬಾದ: ಕಳೆದ ವಾರದಿಂದ ಸುಮಾರು 11ಕ್ಕೂ ಹೆಚ್ಚು ಡೆಂಘೀ ಪ್ರಕರಣಗಳು ನಗರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿವೆ. ಪ್ರಕರಣಗಳನ್ನು ನಗರದ ಖಾಸಗಿ ಲ್ಯಾಬ್‌ಗಳು ದೃಢಪಡಿಸಿವೆ. ಹೊನಗುಂಟಾ ಗ್ರಾಮದಲ್ಲಿ ಇಬ್ಬರು ಬಾಲಕರಿಗೆ ಡೆಂಘೀ ಪತ್ತೆಯಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪಾಲಕರು ತಿಳಿಸಿದ್ದಾರೆ. ಇನ್ನು ಕೆಲವರು ಕಲಬುರಗಿ ಸಂಗಮೇಶ್ವರ ಆಸ್ಪತ್ರೆ, ಯಶೋಧರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಳೆಗಾಲ ಆರಂಭವಾಗಿದ್ದು ಮುಂಜಾಗ್ರತಾ ಕ್ರಮವಾಗಿ ನಗರಸಭೆ ಅಧಿ ಕಾರಿಗಳು ಸ್ವತ್ಛತೆ ಕಡೆ ಗಮನಹರಿಸಬೇಕಿತ್ತು. ಆದರೆ ಅ ಧಿಕಾರಿಗಳು ಮಾತ್ರ ಕಸ ವಿಲೇವಾರಿ ಬಿಟ್ಟರೆ ಚರಂಡಿ ಸ್ವತ್ಛತೆ ಕಡೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. ಇದರಿಂದ ಚರಂಡಿಗಳಲ್ಲಿ ಕಸ ತುಂಬಿಕೊಂಡು ನೀರು ಸರಾಗವಾಗಿ ಹರಿಯದೇ ಎಲ್ಲೆಂದರಲ್ಲಿ ನೀರು ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ. ನಗರಸಭೆ ಅಧಿ ಕಾರಿಗಳು ಕೂಡಲೇ ಚರಂಡಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈಗಾಗಲೇ ಡೆಂಘೀ ಪೀಡಿತರು ಸರ್ಕಾರಿ ಆಸ್ಪತ್ರೆಯತ್ತ ಮುಖ ಮಾಡದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ನಗರಸಭೆ, ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ನಗರದ ವಿವಿಧ ಬಡಾವಣೆಯಲ್ಲಿ ತೀವ್ರ ಗತಿಯಲ್ಲಿ ಹರಡುತ್ತಿರುವ ಡೆಂಘೀ ಕುರಿತು ಜನರಿಗೆ ತಿಳಿವಳಿಕೆ, ಮುಂಜಾಗ್ರತಾ ಕ್ರಮ ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕಾಗಿದೆ. ಅಲ್ಲದೇ ಡೆಂಘೀ ಹರಡದಂತೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ. ಅಲ್ಲದೇ ಹೊನಗುಂಟಾ ಗ್ರಾಮದಲ್ಲೂ ಎಲ್ಲೆಂದರಲ್ಲಿ ಕೊಳಚೆ ನೀರು ನಿಲ್ಲುತ್ತಿದೆ. ಆದ್ದರಿಂದ ಸೊಳ್ಳೆಗಳು ಹೆಚ್ಚಾಗಿ ರೋಗಕ್ಕೆ ಕಾರಣವಾಗಿದೆ. ಗ್ರಾಪಂ ಪಿಡಿಒ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.