ಭೂಸ್ವಾಧೀನ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ
Team Udayavani, Sep 10, 2017, 11:02 AM IST
ಕಲಬುರಗಿ: ಭೂಸ್ವಾಧಿಧೀನ ಪ್ರಕರಣಗಳಲ್ಲಿ ಹೆಚ್ಚಿನ ವ್ಯಾಜ್ಯಗಳಿದ್ದು, ಹೈಕೋರ್ಟ್‌ಗಳಲ್ಲಿರುವ ಭೂಸ್ವಾಧೀನ
ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯದ
ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ
ಜಯಂತ ಪಟೇಲ್ ತಿಳಿಸಿದರು.
ನಗರದ ಹೈಕೋರ್ಟ್ ಪೀಠದಲ್ಲಿ ಲೋಕ ಅದಾಲತ್‌ನಲ್ಲಿ ಭಾಗವಹಿಸುವ ನ್ಯಾಯಾಧೀಶರು, ವಿಮಾ ಕಂಪನಿಗಳು,
ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಭೂಸ್ವಾಧೀನ ಪ್ರಕರಣಗಳಿಗೆ ನೀಡುವ ಪರಿಹಾರ ವಿಳಂಬ ಮಾಡಿದಲ್ಲಿ
ಬಡ್ಡಿ ಭರಿಸಬೇಕಾಗುತ್ತದೆ. ಕೆಲವು ಪ್ರಕರಣಗಳಲ್ಲಿ ಪರಿಹಾರಕ್ಕಿಂತ ಬಡ್ಡಿ ಮೊತ್ತವೇ ಹೆಚ್ಚಿಗೆ ಆಗಿರುತ್ತದೆ. ಎಲ್ಲರೂ
ಮುತುವರ್ಜಿವಹಿಸಿ ಭೂಸ್ವಾಧೀನ ಪ್ರಕರಣಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಶೀಘ್ರವೇ ಪರಿಹಾರ ದೊರಕಿಸಬೇಕು
ಎಂದರು.
ಹೈಕೋರ್ಟ್‌ಗಳಲ್ಲಿ ಭೂಸ್ವಾಧೀನ ವಿಷಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಅನುಕೂಲವಾಗುವ ಹಾಗೆ ಅಡಿಶನಲ್ ಅಡ್ವೋಕೇಟ್ ಜನರಲ್ ಕಚೇರಿಯಿದೆ. ಅವರು ಸರ್ಕಾರಿ ಅಡ್ವೋಕೇಟ್‌ಗಳ ಸಹಾಯ ಪಡೆದು ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಜಿಲ್ಲಾ ಧಿಕಾರಿಗಳು ತಮ್ಮ ವಿಭಾಗದ ಸಹಾಯಕ ಆಯುಕ್ತರುಗಳಿಗೆ ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಜವಾಬ್ದಾರಿ ವಹಿಸಬೇಕು ಎಂದು ಹೇಳಿದರು.
ಯಾವುದಾದರೂ ಒಂದು ಪ್ರದೇಶದ ಭೂಸ್ವಾಧೀನದ ದರ ನಿಗದಿಪಡಿಸಿ ಈ ಹಿಂದೆ ಪರಿಹಾರ ನೀಡಿದ್ದರೆ ಅದೇ
ಪ್ರದೇಶದ ಭೂಸ್ವಾ ಧೀನ ಪ್ರಕರಣಗಳು ಬಾಕಿ ಇದ್ದಲ್ಲಿ ಅವುಗಳಿಗೂ ಈ ಹಿಂದೆ ನೀಡಿರುವ ಪರಿಹಾರ ನೀಡಿ
ಇತ್ಯರ್ಥಗೊಳಿಸಬೇಕೆಂದು ಸರ್ಕಾರ ಅಧಿಸೂಚನೆ ಜಾರಿಗೊಳಿಸಿದೆ. ಅದರಂತೆ ಭೂಸ್ವಾಧೀನ ಪ್ರಕರಣಗಳನ್ನು
ಇತ್ಯರ್ಥಗೊಳಿಸಬೇಕು ಎಂದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾತನಾಡಿ, 2015ರಿಂದ ಜಾರಿಗೊಳಿಸಲಾದ ಹೊಸ ಭೂಸ್ವಾ ಧೀನ
ನೀತಿಯಿಂದ ಭೂಸ್ವಾ ಧೀನ ಪ್ರಕರಣಗಳಲ್ಲಿ ಪರಿಹಾರ ನೀಡಲು ಯಾವುದೇ ತೊಂದರೆಯಾಗುತ್ತಿಲ್ಲ. ಆದರೆ 2015ಕ್ಕಿಂತ ಹಿಂದಿನ ಪ್ರಕರಣಗಳಲ್ಲಿ ಪರಿಹಾರ ಇತ್ಯರ್ಥವಾಗದೆ ಹೈಕೋರ್ಟ್ ಪೀಠಗಳಲ್ಲಿ ಮೊಕದ್ದಮೆ ದಾಖಲಾಗುತ್ತಿವೆ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು.
ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಪೀಠದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರರಾವ್, ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರರಾವ್, ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕೆ.ಬಿ. ಅಸೂದೆ, ಉಚ್ಚ ನ್ಯಾಯಾಲಯ
ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಎಸ್.ಆರ್.ಮಾಣಿಕ್ಯ, ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ಹಿರೇಮಠ,
ಉಪಾಧ್ಯಕ್ಷ ಎಸ್.ಜಿ.ಮಠ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲ ಯಾದವ್, ಖಜಾಂಚಿ
ಅಮರೇಶ ರಾವೂರ, ಕಾರ್ಯದರ್ಶಿ ಬಿ.ಎನ್. ಪಾಟೀಲ, ಉಪಕಾರ್ಯದರ್ಶಿ ಸತೀಶ ಪಾಟೀಲ, ಜಂಟಿ ಕಾರ್ಯದರ್ಶಿ
ಅಮರೇಶ ಉಡಚಣ, ವೈಜನಾಥ ಝಳಕಿ, ಹೈಕೋರ್ಟ್ ಪೀಠದ ಇತರ ನ್ಯಾಯಾ ಧೀಶರು, ನ್ಯಾಯಾಲಯದ
ಅ ಧಿಕಾರಿಗಳು, ಸಿಬ್ಬಂದಿಗಳು, ಬಾರ್ ಅಸೋಶಿಯೇಶನ್ ಸದಸ್ಯರು, ನ್ಯಾಯವಾದಿಗಳು, ಸರ್ಕಾರಿ ನ್ಯಾಯವಾದಿಗಳು ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ
Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ
Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.