![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 9, 2022, 8:23 PM IST
ಕಲಬುರಗಿ: ದಕ್ಷಿಣ ಭಾರತದ ಪ್ರಸಿದ್ದ ಯಾತ್ರಾಸ್ಥಳ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ್ ಗಾಣಗಾಪುರ ದೇವರ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿರುವ ದೇವಾಲಯದ ಐವರು ಅರ್ಚಕರು ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ.
ಅರ್ಚಕರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಈ ಹಿಂದೆ ಎರಡು ನೋಟಿಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ.
ವಂಚನೆ ಸಂಬಂಧ ದೇವಾಲಯದ ಐವರ ಅರ್ಚಕರ ವಿರುದ್ದ ಮೊದಲು ದೇವಲ್ ಗಾಣಗಾಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ ತದನಂತರ ಜಿಲ್ಲಾ ಸೈಬರ್ ಕ್ರೈಂ ( ಸಿಇಎನ್) ಠಾಣೆಗೆ ವರ್ಗಾವಣೆಯಾಗಿದ್ದರಿಂದ ಠಾಣಾ ಇನ್ಸಪೆಕ್ಟರ್ ಸೋಮಲಿಂಗ ಕಿರದಳ್ಳಿ ಈ ಮೊದಲು ಕಳೆದ ಜೂನ್ 27ರಂದು ವಿಚಾರಣೆಗೆ ಹಾಜರಾಗುವಂತೆ ಮೊದಲ ನೋಟೀಸ್ ನೀಡಿದ್ದರು. ಆದರೆ ಅರ್ಚಕರು ವಿಚಾರಣೆಗೆ ಗೈರು ಹಾಜರಾಗಿದ್ದರು.ತದನಂತರ ನೀಡಲಾಗಿದ್ದ ಎರಡನೇ ನೋಟಿಸ್ ಗೂ ಗೈರು ಹಾಜರಾಗಿದ್ದರು.
ಮೂರನೇ ನೋಟೀಸ್ ನೀಡಿ ಜುಲೈ 9 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಹೀಗಾಗಿ ಅರ್ಚಕರು ಶನಿವಾರ ವಿಚಾರಣೆಗೆ ಹಾಜರಾದರು. ನಕಲಿ ವೆಬ್ ಸೈಟ್ ವಿಳಾಸ ಹಾಗೂ ಖಾತೆಗಳ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಮತ್ತೆ ಎರಡ್ಮೂರು ದಿನದೊಳಗೆ ವಿಚಾರಣೆಗೆ ಕರೆಯಲಾಗುವುದು ಎಂದು ತಿಳಿಸಿ ವಾಪಸ್ಸು ಕಳುಹಿಸಲಾಯಿತು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.