ದೇವೇಗೌಡ-ಸಿದ್ದರಾಮಯ್ಯ ಬರ ಅಧ್ಯಯನ ಮಾಡಲಿ: ಈಶ್ವರಪ್ಪ


Team Udayavani, Dec 4, 2018, 10:47 AM IST

bid-3.jpg

ಕಲಬುರಗಿ: ಬರಗಾಲದಿಂದ ತತ್ತರಿಸಿರುವ ರೈತರ ಹೊಲಗಳಿಗೆ ಮಣ್ಣಿನ ಮಗ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಅಹಿಂದ ನಾಯಕ ಸಿದ್ದರಾಮಯ್ಯ ಒಟ್ಟಾಗಿ ಭೇಟಿ ಕೊಟ್ಟ ಬರ ಅಧ್ಯಯನ ನಡೆಸಲಿ ಎಂದು ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು. ಹೈದ್ರಾಬಾದ್‌ ಕರ್ನಾಟಕ ಭಾಗದಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದವರು ಬೀದರನಿಂದ ಬಂದು ಜೇವರ್ಗಿಗೆ ಬರ ಪರಿಶೀಲನೆಗೆ ತೆರಳುವ ಮುನ್ನ ನಗರದ ಐವಾನ್‌ ಇ ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 

ರಾಜ್ಯದಲ್ಲಿ ಭೀಕರ ಬರ ಆವರಿಸಿರುವುದರಿಂದ ಅಧ್ಯಯನಕ್ಕಾಗಿ ಬಿಜೆಪಿ ಪ್ರವಾಸ ಮಾಡುತ್ತಿದೆ. ರೈತರ ಹೊಲ, ಗದ್ದೆಗಳಿಗೆ ಹೋದರೆ ತೀವ್ರ ನೋವಾಗುತ್ತದೆ. ಪ್ರತಿ ವರ್ಷ ಬೆಳೆಯುತ್ತಿದ್ದ ಬೆಳೆಯಲ್ಲಿ ಪ್ರತಿಶತ ಹತ್ತರಷ್ಟೂ ಇಳುವರಿ ಬರುತ್ತಿಲ್ಲ. ದೇವೇಗೌಡ ಮತ್ತು ಸಿದ್ದರಾಮಯ್ಯ ಒಟ್ಟಿಗೆ ರಾಜ್ಯ ಪ್ರವಾಸ ಮಾಡಲಿ. ಆಗ ಬರದ ಬಗ್ಗೆ ಮನವರಿಕೆ ಆಗುತ್ತಿದೆ. ಅಲ್ಲದೇ, ಮುಖ್ಯಮಂತ್ರಿ ಕುಮಾರಸ್ವಾ,ಮಿ ಮತ್ತು ಉಪ ಮುಖ್ಯಮಂತ್ರಿ ಪರಮೇಶ್ವರ ಕೂಡ ಬರ ಪರಿಸ್ಥಿತಿ ತಿಳಿಯಲು ಹೊರಗೆ ಬರುತ್ತಾರೆ ಎಂದರು.

ಉಸ್ತುವಾರಿ ಸಚಿವರು ಕೂಡ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸುತ್ತಿಲ್ಲ. ನೀವು ರಾಜಕೀಯ ಮಾಡುವುದಕ್ಕೆ ಸರ್ಕಾರ ನಡೆಸುವುದಕ್ಕೆ ಮೈತ್ರಿ ಮಾಡಿಕೊಳ್ಳಿ. ಆದರೆ, ಜನರ ಸಂಕಷ್ಟಗಳಲ್ಲಿ ಮೈತ್ರಿ ಮಾಡಿಕೊಳ್ಳಬೇಡಿ. ಸರ್ಕಾರದವರು ರೈತರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಬರ ಪರಿಹಾರಕ್ಕಾಗಿ ರೈತರು ಜಾತಕ ಪಕ್ಷಿಗಳಂತೆ ಕಾದುಕುಳಿತಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುಂಚೆ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಅವರು ಒತ್ತಾಯಿಸಿದರು.

1,743 ಕೋಟಿ ರೂಪಾಯಿಯಷ್ಟು ಬೆಳೆ ನಷ್ಟವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಸಾವಿರ ರೂ. ಬಿಡುಗಡೆ ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇವಲ 25 ಲಕ್ಷ ರೂ. ಮಾತ್ರ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಸಾಲ ಮನ್ನಾ ಮಾಡಿದ್ದೇವೆ ಎಂದು ಪುಟ್ಟಗಟ್ಟಲೆ ಜಾಹೀರಾತು ಕೊಡಲಾಗುತ್ತಿದೆ. ರೈತರ ಸಾಲದಲ್ಲಿ ಒಂದೇ ಒಂದು ರೂಪಾಯಿ ಮನ್ನಾ ಆಗಿಲ್ಲ ಎಂದು ಚಾಟಿ ಬೀಸಿದರು.

ಜೆಡಿಎಸ್‌ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾಗಿ ಹೇಳಿಕೊಳ್ಳುತ್ತಿದ್ದಾರೆ. ಅಂದರೆ ರಾಜಕೀಯ ಪ್ರಣಾಳಿಕೆಗೆ ಬೆಲೆಯೇ ಇಲ್ವಾ? ಮುಂದಿನ ಬಾರಿ ಸಹ ಬಹುಮತ ಕೊಟ್ಟರೆ ಪ್ರಣಾಳಿಕೆಯಲ್ಲಿನ ಅಂಶಗಳು ಜಾರಿ ಮಾಡುವುದಾಗಿ ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಾಕಲಿ. ಇಂತಹ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಜೆಎಸ್‌ಎಸ್‌ ನವರು ಸರ್ಕಾರ, ಸಿಎಂ ಪದವಿ ಮತ್ತು ಬಜೆಟ್‌ನ ಪಾವಿತ್ರತೆಯನ್ನೇ ಕಳೆಯುತ್ತಿದ್ದಾರೆ ಎಂದು ಈಶ್ವರಪ್ಪ ಅಕ್ರೋಶ ವ್ಯಕ್ತಪಡಿಸಿದರು. 

ಸುದ್ದಿಗೋಷ್ಠಿ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಆರ್‌.ವೆಂಕಟೇಶಕುಮಾರ ಅವರನ್ನು ಭೇಟಿ ಮಾಡಿ ಬರ ಪರಿಸ್ಥಿತಿ ಬಗ್ಗೆ ಈಶ್ವರಪ್ಪ ಚರ್ಚಿಸಿದರು. ಕೃಷಿ ಇಲಾಖೆ ಅಧಿಕಾರಿಗಳು, ಬೀದರ ಸಂಸದ ಭಗವಂತ ಖೂಬಾ, ಜಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ, ಎಂಎಲ್‌ಸಿ ಬಿ.ಜಿ. ಪಾಟೀಲ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತ ಮಾಲಾಜಿ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ಇದ್ದರು. 

ರಾಜಕೀಯವಾಗಿ ಬೆತ್ತಲೆ
ರಾಮನಗರದಲ್ಲಿ ಅಭ್ಯರ್ಥಿಯನ್ನು ಅಪಹರಿಸಿ ವಾಮಮಾರ್ಗ ಹಿಡಿದಿದ್ದನ್ನು ಬಹಿರಂಗವಾಗಿ ಕಾಂಗ್ರೆಸ್‌ ಒಪ್ಪಿಕೊಂಡು ರಾಜಕೀಯವಾಗಿ ಬೆತ್ತಲೆಯಾಗಿದೆ. ನಾವೂ ರಾಜಕೀಯ ಮಾಡುತ್ತೇವೆ. ಆದರೆ, ನಮ್ಮದು ಕಾಂಗ್ರೆಸ್‌ನಂತಹ ರಾಜಕೀಯವಲ್ಲ. ನಮ್ಮ ರಾಜಕೀಯ ಓಪನ್‌ ಸಿಕ್ರೆಟ್‌.

ಖರ್ಗೆ ಸೋಲಿಸುವುದು ಖಚಿತ 
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ. ಖರ್ಗೆ ಅವರನ್ನು ಸೋಲಿಸಲು ಹುರಿಯಾಳು ಬೇಕಿಲ್ಲ. ಬಿಜೆಪಿ ವ್ಯಕ್ತಿ ಕೇಂದ್ರೀಕೃತ ಪಕ್ಷವಲ್ಲ. ಕಾರ್ಯಕರ್ತರ ಪಕ್ಷ. ಖರ್ಗೆ ಅವರನ್ನು ಸೋಲಿಸಲು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾದರೇ ಸಾಕು. 
 ಕೆ.ಎಸ್‌.ಈಶ್ವರಪ್ಪ, ಬಿಜೆಪಿ ಮುಖಂಡ

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.