ವೈಮನಸ್ಸು ಬಿಟ್ಟು ಸಂಘಟಿತರಾದರೆ ಸಮಾಜದ ಅಭಿವೃದ್ಧಿ: ಡಾ| ಅರಿಕೇರಿ
Team Udayavani, Feb 12, 2018, 11:44 AM IST
ಕಾಳಗಿ: ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕೋಲಿ ಸಮಾಜಕ್ಕೆ ರಾಜಕೀಯ ಸ್ಥಾನಮಾನ ದೊರೆತಿಲ್ಲ. ಆಂತರಿಕ ಭಿನ್ನಾಭಿಪ್ರಾಯ ಮತ್ತು ವೈಮನಸ್ಸು ತೊರೆದು ಎಲ್ಲರು ಒಗ್ಗೂಡಿ ಸಂಘಟನೆ ಮಾಡಿದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ ಎಂದು ಉಪನ್ಯಾಸಕ ಡಾ| ಭೀಮರಾವ ಅರಿಕೇರಿ ಹೇಳಿದರು. ಇಲ್ಲಿನ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಪ್ರಚಾರ ಸಮಿತಿ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋಲಿ ಸಮಾಜ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ತೀರಾ ಹಿಂದುಳಿದೆ. ಸಮಾಜ ಮುಖ್ಯವಾಹಿನಿಗೆ ಬರಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ರೀತಿಯ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಹೇಳಿದರು.
ತೊನಸನಳ್ಳಿ ಅಲ್ಲಮಪ್ರಭು ಮಠದ ಪೂಜ್ಯ ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಗೌರಿಗುಡ್ಡ ರಟಕಲ್‌ನ ಪೂಜ್ಯ ರೇವಣಸಿದ್ದ ಶರಣರು, ದತ್ತಾತ್ರೇಯ ಮಹಾಸ್ವಾಮಿಗಳು, ಸಾಲಹಳ್ಳಿ ಸಂತಾಶ್ರಮದ ಬಾಲಯೋಗಿನಿ ಅಕ್ಕಮಹಾದೇವಿ ಅಮ್ಮನವರು, ಕೋಲಿ ಸಮಾಜದ ಯುವ ನಾಯಕ ವಿಕ್ರಮ ನಾಮದಾರ, ಪ್ರಭು ರಟಕಲ್, ಭೀಮರಾಯ ಚಿತ್ತಾಪುರ, ಪೃಥ್ವಿರಾಜ ನಾಮದಾರ, ಮಾರುತಿ ನಾಯಿಕೊಡಿ,
ರಮೇಶ ನಾಮದಾರ, ಭಾಗಣ್ಣ ಪೊಲೀಸ್, ಶರಣು ತಳವಾರ, ಅಮೃತಪ್ಪ ಹುಸೇನಗೋಳ, ಸಿದ್ದು ಹಲಚೇರಾ, ಮಾರುತಿ ಕೋಡ್ಲಿ ಇದ್ದರು.
ಪ್ರವೀಣ ನಾಮದಾರ ಸ್ವಾಗತಿಸಿದರು. ನಾಗಣ್ಣ ಕಮಕನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಪಂಗರಗಾ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.