ಚಿಂಚೋಳಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಧರಂ
Team Udayavani, Jul 28, 2017, 1:30 PM IST
ಚಿಂಚೋಳಿ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಚಿಂಚೋಳಿ ತಾಲೂಕಿಗೆ ಅನೇಕ ಅನುಕೂಲ ಮಾಡಿಕೊಟ್ಟಿದ್ದಾರೆ. ಲೋಕೋಪಯೋಗಿ ಖಾತೆ ಸಚಿವರಾಗಿದ್ದಾಗ ತಾಲೂಕಿನ ಕರಚಖೇಡ ಮತ್ತು ಚತ್ರಸಾಲ ಗ್ರಾಮಗಳ ಮಧ್ಯೆ ಹರಿಯುವ
ಮುಲ್ಲಾಮಾರಿ ನದಿಗೆ 1.10 ಕೋಟಿ ರೂ. ವೆಚ್ಚದಲ್ಲಿ ಸೇತುವೆ ಮಂಜೂರು ಮಾಡಿ ಜನರಿಗೆ ಸಾರಿಗೆ ಸಂಪರ್ಕ ವ್ಯವಸ್ಥೆಗೊಳಿಸಿದ್ದರು. ಅಲ್ಲದೇ ಕುಂಚಾವರಂ ಗಡಿಪ್ರದೇಶದಲ್ಲಿ ವಂಟಿಚಿಂತಾ ತಾಂಡಾದಲ್ಲಿ ಆಶ್ರಮ ಶಾಲೆ ಹಾಗೂ ಅಂತಾವರಂ ಗ್ರಾಮಕ್ಕೆ ಸಣ್ಣ ನೀರಾವರಿ ಕೆರೆ
ಮಂಜೂರಾತಿಗೊಳಿಸಿದ್ದಾರೆ . ಗಡಿಪ್ರದೇಶದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿಕೊಟ್ಟಿದ್ದಾರೆ. ಗೃಹ ಖಾತೆ ಸಚಿವರಾಗಿದ್ದಾಗ ಮಿರಿಯಾಣ ಗ್ರಾಮದಲ್ಲಿ ಹೊಸದಾಗಿ ಪೊಲೀಸ್ ಠಾಣೆ ಮತ್ತು ಕುಂಚಾವರಂ ಗ್ರಾಮದಲ್ಲಿ ಪೊಲೀಸ್ ಠಾಣೆ ನವೀಕರಿಸಲು ಅನುದಾನ ನೀಡಿದ್ದರು.
ಪೋಲಕಪಳ್ಳಿಯಲ್ಲಿ ಆಹಾರ ಧಾನ್ಯ ಸಂಗ್ರಹಣೆಗಾಗಿ 5 ಲಕ್ಷ ರೂ. ವೆಚ್ಚದಲಿ ಗೋದಾಮ ನಿರ್ಮಿಸಿ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದರು. 1989ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ತಾಲೂಕಿಗೆ ಆಗಮಿಸಿದ ಪಾಂಚಜನ್ಯ ಯಾತ್ರೆಯಲ್ಲಿ ಧರ್ಮಸಿಂಗ್ ಅವರು ಭಾಗವಹಿಸಿ ಪ್ರಚಾರ ಮಾಡಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೈಲಾಶನಾಥ ಪಾಟೀಲ ಅವರು ಜಯ ಗಳಿಸಲು ಸಾಧ್ಯವಾಯಿತು.
ಬೀದರ ಲೋಕಸಬಾ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆಯಾದ ನಂತರ ಮಿರಿಯಾಣ-ಚಿಂಚೋಳಿ ರಸ್ತೆ ಸುಧಾರಣೆಗೆ ಕೇಂದ್ರ ಸರಕಾರದಿಂದ 21 ಕೋಟಿ ರೂ. ಮಂಜೂರು ಮಾಡಿಸಿದ್ದರು. ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ತಾಲೂಕಿಗೆ ಧರ್ಮಸಿಂಗ್ ಅವರ ಕೊಡುಗೆ ಅಪಾರ ಮತ್ತು ಕಾಂಗ್ರೆಸ ಕಾರ್ಯಕರ್ತರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ನಿಧನಕ್ಕೆ ತಾಲೂಕಿನ ಕಾರ್ಯಕರ್ತರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಸಂತಾಪ: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಶಾಸಕರ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ದಿ| ಎನ್. ಧರ್ಮಸಿಂಗ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಜಿಪಂ ಸದಸ್ಯ ಗೌತಮ ಪಾಟೀಲ, ಮುಖಂಡರಾದ ಗೋಪಾಲರಾವ ಕಟ್ಟಿಮನಿ, ಕೆ.ಎಂ. ಬಾರಿ, ಆರ್. ಗಣಪತರಾವ, ಲಕ್ಷ್ಮಣ ಆವಂಟಿ, ಅಮರ ಲೊಡನೊರ, ಶಿವನಾಗಯ್ಯ ಸ್ವಾಮಿ, ಉಮಾ ಪಾಟೀಲ, ನರಸಪ್ಪ ಕಿವಣೋರ, ಜಗನ್ನಾಥ ಕಟ್ಟಿ, ಅಯ್ಯೂಬ್ ಖಾನ್, ಬಸವಣ್ಣ ಪಾಟೀಲ, ಸದ್ದಾಂ ಹುಸೇನ್, ಸಂಗಯ್ಯ ಸ್ವಾಮಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.