ತಾಲೂಕು ತಂದ ತೃಪ್ತಿ-ಕಚೇರಿಗಳಿಲ್ಲದೇ ಅತೃಪ್ತಿ
ನೂತನ ತಾಲೂಕಾದ್ರೂ ಈಗಲೂ ಈ ಹಿಂದೆ ಹೇಗೆ ಜನದೂರದ ತಾಲೂಕಿಗೆ ಹೋಗ ಬೇಕಿತ್ತೋ ಅದೇ ಸನ್ನಿವೇಶ
Team Udayavani, Sep 10, 2021, 6:22 PM IST
ಶಹಾಬಾದ: ಸಿಮೆಂಟ್ ನಗರಿ, ಫರ್ಸಿ ನಾಡೆಂದು ವಿಶ್ವವಿಖ್ಯಾತವಾಗಿರುವ ಶಹಾಬಾದ ನಗರ ತಾಲೂಕೆಂದು ಘೋಷಣೆಯಾಗಿ ಹಲವು ವರ್ಷಗಳೇ ಕಳೆದರೂ ಬಹುತೇಕ ಇಲಾಖೆಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಸರ್ಕಾರ ಹೊಸ ತಾಲೂಕುಗಳನ್ನು ರಚಿಸಿ ವರ್ಷಗಳೇ ಕಳೆದರೂ, ನಿರೀಕ್ಷಿತ ಫಲ ಸಿಗುತ್ತಿಲ್ಲ.
ರಾಜ್ಯದಲ್ಲೇ ಚಿಕ್ಕದಾದ ತಾಲೂಕು ಶಹಾಬಾದ. ಹಲವು ದಶಕಗಳಿಂದ ಇಲ್ಲಿನ ಜನರು ನಿರಂತರ ಹೋರಾಟ ಮಾಡಿದ ಫಲವಾಗಿ ರಾಜ್ಯ ಸರ್ಕಾರ 50 ಹೊಸ ತಾಲೂಕುಗಳನ್ನು ರಚಿಸಿದ್ದು,ಈಗಾಗಲೇ ಅನೇಕ ಹೊಸ ತಾಲೂಕುಗಳಲ್ಲಿ ವಿವಿಧ ಇಲಾಖೆಗಳ ಕಾರ್ಯ ಚಟುವಟಿಕೆಗಳು ಆರಂಭವಾಗಿವೆ. ಆದರೆ ಶಹಾಬಾದ ತಾಲೂಕು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ತಾಲೂಕಾಡಳಿತದ ಕಟ್ಟಡ ಆರಂಭಿಸಿ ತಹಶೀಲ್ದಾರ್
ಮತ್ತು ಸಿಬ್ಬಂದಿನಿ ಯೋಜಿಸಿದ್ದನ್ನು ಹೊರತುಪಡಿಸಿದರೆ ಇನ್ನುಳಿದ ಇಲಾಖೆಗಳ ಕಚೇರಿಗಳು ಆರಂಭವಾಗಿಯೇ ಇಲ್ಲ.
ಹೀಗಾಗಿ ಅಗತ್ಯ ಕೆಲಸ ಕಾರ್ಯಗಳಿಗೆ ಜನರು ಚಿತ್ತಾಪುರ ತಾಲೂಕಿಗೆ ಅಲೆಯುವುದು ಮಾತ್ರ ತಪ್ಪಿಲ್ಲ. ಒಟ್ಟಿನಲ್ಲಿ ಇನ್ನೂ 20ಕ್ಕೂ ಹೆಚ್ಚು ತಾಲೂಕುಮಟ್ಟದ ಕಚೇರಿಗಳನ್ನು ಇಲ್ಲಿ ಆರಂಭಿಸಬೇಕಿದೆ. ಆಡಳಿತಾತ್ಮಕ ದೃಷ್ಟಿಯಿಂದ ಸಾರ್ವಜನಿಕರ ಬೇಡಿಕೆ ಈಡೇರಿಸುವ ಹಿನ್ನೆಲೆಯಲ್ಲಿ ಅಸ್ತಿತ್ವದಲ್ಲಿರುವ ತಾಲೂಕುಗಳನ್ನು ಪುನರ್ ರಚನೆ ಮಾಡುವ ಸಂಬಂಧ 1973ರಲ್ಲಿ ವಾಸುದೇವ್ ರಾವ್ ಆಯೋಗ, 1984ರಲ್ಲಿ ಟಿ.ಎಂ. ಹುಂಡೇಕಾರ ಸಮಿತಿ, 1986ರಲ್ಲಿ ಪಿ.ಸಿ. ಗದ್ದಿಗೌಡರ ಸಮಿತಿ, 2007ರಲ್ಲಿ ಎಂ.ಬಿ.ಪ್ರಕಾಶ ಅಧ್ಯಕ್ಷತೆಯಲ್ಲಿ ತಾಲೂಕು ಪುನರ್ ರಚನಾ ಸಮಿತಿ ರಚಿಸಲಾಗಿತ್ತು. ಈ ನಾಲ್ಕು ಸಮಿತಿಗಳ ವರದಿ ಪರಿಗಣಿಸಿ 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ ತಮ್ಮ ಅಧಿಕಾರ ಅವಧಿಯಲ್ಲಿ 43 ನೂತನ ತಾಲೂಕು ರಚಿಸುವುದಾಗಿ ಘೋಷಿಸಿದ್ದರು.
ಇದನ್ನೂ ಓದಿ:ಈ ರಾಜ್ಯದ ಸರಕಾರಿ ನೌಕರರಿಗೆ ಜೀನ್ಸ್, ಟಿ- ಶರ್ಟ್ ನಿಷೇಧ : ಸರಕಾರದ ಆದೇಶದಲ್ಲಿ ಏನಿದೆ
ನಂತರ ಈ ಘೋಷಣೆ ಹಾಗೆ ಉಳಿಯಿತು. ನಂತರ 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೆ ಹೊಸ ತಾಲೂಕು ರಚಿಸುವುದಾಗಿ 2017-18ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿತ್ತು. ಭೌಗೋಳಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 49 ಹೊಸ ತಾಲೂಕು ರಚಿಸಲು ರಾಜ್ಯ ಸರ್ಕಾರ ಘೋಷಿಸಿತ್ತು. ನಂತರ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣವನ್ನು
ತಾಲೂಕು ಎಂದು ಘೋಷಿಸಲಾಯಿತು.
2018ರ ಜನವರಿಯಿಂದಲೇ ನೂತನ ತಾಲೂಕು ಕೇಂದ್ರಗಳಲ್ಲಿ ತಾಲೂಕು ಕಚೇರಿಗಳನ್ನು ತೆರೆದು ಕಾರ್ಯಾರಂಭ ಮಾಡಲು ಸರ್ಕಾರ ಆದೇಶ
ಹೊರಡಿಸಿದೆ. ಆದರೆ ಎಲ್ಲ ಹೊಸ ತಾಲೂಕುಗಳಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ಅಧಿಕೃತವಾಗಿ ಆರಂಭವಾಗಿಲ್ಲ. ಹೀಗಾಗಿ ಕಂದಾಯ ಇಲಾಖೆ ವ್ಯವಹಾರಗಳು ಮಾತ್ರ ಹೊಸ ತಾಲೂಕುಗಳಲ್ಲಿ ನಡೆಯುತ್ತಿದ್ದು, ಸಿಬ್ಬಂದಿ ಕೊರತೆಯಿಂದ ಕಾರ್ಯ ನಿರ್ವಹಿಸುತ್ತಿವೆ. ಉಳಿದ ಇಲಾಖೆಗಳ ಕಚೇರಿಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ.
ಶಹಾಬಾದ ತಾಲೂಕು ಏಳು ಗ್ರಾಪಂ ಸ್ಥಾನಹಾಗೂ 20 ಗ್ರಾಮಗಳನ್ನು ಒಳಗೊಂಡಿದೆ. ಇಲ್ಲಿ ಮಿನಿ ವಿಧಾನಸೌಧ ನಿರ್ಮಿಸಬೇಕಿದ್ದು, ಮಿನಿ
ವಿಧಾನಸೌಧ ನಿರ್ಮಾಣಕ್ಕೆ ಸುಮಾರು 10 ಕೋಟಿ ರೂ. ಅನುದಾನವನ್ನು ಸರ್ಕಾರ ಒದಗಿಸಿದೆ. ಮಿನಿ ವಿಧಾನಸೌಧ ನಿರ್ಮಾಣಕ್ಕೆ ನಗರದ ಸಮೀಪ ಜಾಗವಿಲ್ಲ. ಕಾರಣ, ಹಳೆ ಶಹಾಬಾದನ ಹೊರ ವಲಯದಲ್ಲಿರುವ ತರನಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಸುಮಾರು 24 ಎಕರೆ ಸರ್ಕಾರಿ ಜಾಗವಿದ್ದು, ಇಲ್ಲಿಯೇ ಮಿನಿ ವಿಧಾನಸೌಧ ನಿರ್ಮಿಸಲು ತಹಶೀಲ್ದಾರ್ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ತಹಶೀಲ್ದಾರ್ ಕಾರ್ಯಾಲಯ, ಡಿವೈಎಸ್‌ಪಿ ಕಚೇರಿ, ವೃತ್ತ ನಿರೀಕ್ಷಕರ ಕಚೇರಿ, ಅಂಚೆ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ,ತಾಪಂ ಕಚೇರಿ, ಉಪಖಜಾನೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಕೆಲವು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಇತರೆ ಇಲಾಖೆಗಳಾದ ಭೂದಾಖಲೆಗಳ ಇಲಾಖೆ, ಉಪ ಉಪ ನೋಂದಣಾಧಿಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಬಕಾರಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ ಇಲಾಖೆ, ಪಶು ಸಂಗೋಪನಾ ಇಲಾಖೆ, ತಾಲೂಕು ಆರೋಗ್ಯ ಇಲಾಖೆ, ವಿಭಾಗೀಯ ನಿಯಂತ್ರಣ ಇಲಾಖೆ, ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಣ್ಣ ನೀರಾವರಿ ಇಲಾಖೆ, ಜಲಾಯನ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಕೈಗಾರಿಕಾ ವಿಸ್ತೀರ್ಣಾಧಿಕಾರಿ ಇಲಾಖೆ, ಗ್ರಂಥಾಲಯ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಕಾರ್ಯ ನಿರ್ವಹಿಸಬೇಕಿದೆ.
ಇಷ್ಟೆಲ್ಲ ಕಚೇರಿಗಳು ಆರಂಭವಾಗದೇ ಹೆಸರಿಗೆ ಮಾತ್ರ ತಾಲೂಕು ಘೋಷಣೆಯಾಗಿದೆ. ತಾಲೂಕು ರಚನೆಯಾದಾಗ ಈ ಭಾಗದ ಜನರಲ್ಲಿ ಎಷ್ಟು ಖುಷಿಯಿತ್ತೋ ಈಗ ಅಷ್ಟೇ ಬೇಸರವೂ ಆವರಿಸಿದೆ. ನೂತನ ತಾಲೂಕಾದ್ರೂ ಈ ಹಿಂದೆ ಹೇಗೆ ಜನ ದೂರದ ತಾಲೂಕಿಗೆ ಹೋಗ ಬೇಕಿತ್ತೋ ಅದೇ ಸನ್ನಿವೇಶ ಈಗಲೂ ಇದೆ. ಮಿನಿ ವಿಧಾನಸೌಧ ನಿರ್ಮಾಣವಾದರೆ ಒಂದೇ ಸೂರಿನಡಿ ಎಲ್ಲ ಇಲಾಖೆಗಳು ಆರಂಭವಾಗಿ
ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕರು ಹಳೆ ತಾಲೂಕಿಗೆ ಅಲೆದಾಡುವುದು ತಪ್ಪುತ್ತದೆ. ಆದ್ದರಿಂದ ಇಲ್ಲಿನ ಜನರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕಿದೆ.
ಕಾರ್ಯ ನಿರ್ವಹಿಸುತ್ತಿರುವ
ಇಲಾಖೆಗಳು
ತಹಶೀಲ್ದಾರ್‌ಕಾರ್ಯಾಲಯ, ಡಿವೈಎಸ್‌ಪಿ ಕಚೇರಿ, ವೃತ್ತ ನಿರೀಕ್ಷತರ ಕಚೇರಿ, ಅಂಚೆಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತಾಪಂಕಚೇರಿ, ಉಪಖಜಾನೆಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರಕಚೇರಿಗಳುಕಾರ್ಯ
ನಿರ್ವಹಿಸುತ್ತಿವೆ
ಕಾರ್ಯ ನಿರ್ವಹಿಸಬೇಕಾದ
ಇಲಾಖೆಗಳು
ಭೂದಾಖಲೆಗಳ ಇಲಾಖೆ, ಉಪ ನೋಂದಣಾಧಿಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಇಲಾಖೆ, ಅಬಕಾರಿ ಇಲಾಖೆ, ತೋಟಗಾರಿಕೆ ಇಲಾಖೆ,ಕೃಷಿ ಇಲಾಖೆ, ರೇಷ್ಮೆ ಇಲಾಖೆ, ಪಶು ಸಂಗೋಪನಾ ಇಲಾಖೆ, ತಾಲೂಕು ಆರೋಗ್ಯ ಇಲಾಖೆ, ವಿಭಾಗೀಯ ನಿಯಂತ್ರಣ ಇಲಾಖೆ, ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಕುಡಿಯುವ ನೀರು ಸರಬರಾಜು ಇಲಾಖೆ,ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ,ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಣ್ಣ ನೀರಾವರಿ ಇಲಾಖೆ, ಜಲಾಯನ ಇಲಾಖೆ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ,ಕೈಗಾರಿಕಾ ವಿಸ್ತೀರ್ಣಾಧಿಕಾರಿ ಇಲಾಖೆ, ಗ್ರಂಥಾಲಯ ಇಲಾಖೆ, ಮೀನುಗಾರಿಕೆ ಇಲಾಖೆಹಾಗೂ ಇನ್ನಿತರೆ ಇಲಾಖೆಗಳುಕಾರ್ಯ ನಿರ್ವಹಿಸಬೇಕಿದೆ.
ತಾಲೂಕು ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಇಲಾಖೆಗಳು ಇಲ್ಲಿಯೇ ಕಾರ್ಯ ನಿರ್ವಹಿಸಿದರೆ, ಸಾರ್ವಜನಿಕರು ಬೇರೆ ತಾಲೂಕಿಗೆ ಅಲೆಯುವುದು
ತಪ್ಪುತ್ತದೆ. ಈಗಾಗಲೇ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಅಲ್ಲದೇ ರಂಗಮಂದಿರ ನಿರ್ಮಾಣಕ್ಕೆ 3 ಕೋಟಿ ರೂ.
ಅನುದಾನಹಾಗೂ ಗ್ರಂಥಾಲಯ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಬಂದಿದ್ದು ಸ್ಥಳ ಗುರುತಿಸುವ ಕಾರ್ಯ ನಡೆದಿದೆ.
-ಬಸವರಾಜ ಮತ್ತಿಮಡು,
ಶಾಸಕ, ಕಲಬುರಗಿ ಗ್ರಾಮೀಣ ಮತಕ್ಷೇತ್ರ
ಶಹಾಬಾದ ತಾಲೂಕಿನಲ್ಲಿ ಮಿನಿ ವಿಧಾನಸೌಧ ನಿಮಾಣಕ್ಕೆ ಸರ್ಕಾರದಿಂದ 10 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗಾಗಲೇ ಜಾಗ ಗುರುತಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಆದೇಶ ಬಂದ ತಕ್ಷಣವೇ ನಿರ್ಮಾಣಕಾಮಗಾರಿ ಕೈಗೊಳ್ಳಲಾಗುವುದು.
ಇದರಿಂದ ಒಂದೇ ಸೂರಿನಡಿ ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡಲು ಸಾಧ್ಯವಾಗುತ್ತದೆ.
-ಸುರೇಶವರ್ಮಾ,
ತಹಶೀಲ್ದಾರ್, ಶಹಾಬಾದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.