ಒಡಕಿನ ಮಾತಿನಿಂದ ಒಗ್ಗಟ್ಟಿಗೆ ಧಕ್ಕೆ: ಪಾಳಾ ಶ್ರೀ
Team Udayavani, Jul 26, 2017, 8:49 AM IST
ವಾಡಿ: ಲಿಂಗಾಯತ ಹಾಗೂ ವೀರಶೈವ ಲಿಂಗಾಯತ ಎನ್ನುವ ಚರ್ಚೆ ರಾಜ್ಯದಲ್ಲಿ ಬಿರುಸಿನಿಂದ ನಡೆದಿದೆ.ಲಿಂಗಾಯತ-ವೀರಶೈವ ಲಿಂಗಾಯತ ಎರಡೂ ಒಂದೇ. ಇವುಗಳ ಮಧ್ಯೆ ಕಚ್ಚಾಟಕ್ಕೆ ಇಳಿಯುವುದರಲ್ಲಿ ಅರ್ಥವಿಲ್ಲ. ಇದರಿಂದ ಒಗ್ಗಟ್ಟಿಗೆ ಧಕ್ಕೆಯುಂಟಾಗುತ್ತಿದೆ ಎಂದು ಪಾಳಾ ಕಟ್ಟಿಮನಿ ಸಂಸ್ಥಾನದ ಪೂಜ್ಯ ಶ್ರೀಗುರುಮೂರ್ತಿ ಸ್ವಾಮೀಜಿ ನುಡಿದರು.
ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವೀರಶೈವ ಸಮಾಜದ ವತಿಯಿಂದ ಏರ್ಪಡಿಸಲಾಗಿದ್ದ ಶ್ರಾವಣ ಮಾಸ ನಿಮಿತ್ತದ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು. ನೀತಿ ಕಲಿಸಿಕೊಡುವ ಧರ್ಮದಲ್ಲಿ ಜಾತಿ ಜಗಳ ತಂದಿಟ್ಟು ಅಶಾಂತಿ ಸ್ಥಾಪಿಸುವ ಹುನ್ನಾರ ಕೆಲವರು ನಡೆಸುತ್ತಿದ್ದಾರೆ. ಒಡಕು ಮೂಡಿಸುವ ಇಂತಹ ಚರ್ಚೆಗಳಿಗೆ ಹೆಚ್ಚು ಮಹತ್ವ ನೀಡಬಾರದು. ಧರ್ಮ ಕಾಯಕದಲ್ಲಿ ತೊಡಗುವ ಮೂಲಕ ಶಿವನ ಆರಾಧನೆಗೆ ಸಮಯ ಮೀಸಲಿಡಬೇಕು ಎಂದು ಹೇಳಿದರು.
ಪ್ರಾಸ್ತಾವಿಕ ಮಾತನಾಡಿದ ವೀರಶೈವ ಸಮಾಜದ ಅಧ್ಯಕ್ಷ ಸಿದ್ಧಣ್ಣ ಕಲಶೆಟ್ಟಿ, ಪ್ರತಿ ಸೋಮವಾರ ಸಂಜೆ ಪಲ್ಲಕ್ಕಿ ಉತ್ಸವ ನಡೆಸುವ ಮೂಲಕ ಶ್ರಾವಣ ಮಾಸ ಆಚರಿಸಲಾಗುತ್ತಿದೆ. ಅಲ್ಲದೆ ಪ್ರತಿ ಸೋಮವಾರ ಒಬ್ಬೊಬ್ಬ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ
ನೀಡಲಿದ್ದಾರೆ ಎಂದು ತಿಳಿಸಿದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಶಾಂತಪ್ಪ ಶೆಳ್ಳಗಿ, ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕಲ್ಯಾಣರಾವ ಶೆಳ್ಳಗಿ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕ್ರಯ್ಯಸ್ವಾಮಿ ಮದರಿ, ಪುರಸಭೆ ಸದಸ್ಯ ಭೀಮಶಾ ಜಿರೊಳ್ಳಿ, ಸಮಾಜದ ಹಿರಿಯರಾದ ಮಲ್ಲಣ್ಣಗೌಡ ಗೌಡಪನೋರ, ಶರಣಗೌಡ ಚಾಮನೂರ, ಶಾಂತಪ್ಪ ಬಣಮಗಿ, ಅಣ್ಣಾರಾವ್ ಪಸಾರೆ, ಈರಣ್ಣ ಪಂಚಾಳ, ಕಾಶೀನಾಥ ಶೆಟಗಾರ, ನಿಂಗಣ್ಣ ದೊಡ್ಡಮನಿ, ದಾನಪ್ಪ ಕಲಶೆಟ್ಟಿ, ರಾಜಶೇಖರ ದೂಪದ, ಮಹಾಲಿಂಗ ಶೆಳ್ಳಗಿ, ಅರೂಣಕುಮರ ಪಾಟೀಲ, ಮಹಾಂತಗೌಡ, ನಾಗರಾಜ ಗೌಡಪನೋರ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ದೇವಸ್ಥಾನದೊಳಗಿನ ಶಿವಲಿಂಗಕ್ಕೆ ಕ್ಷೀರಾಭಿಷೇಕ ನಡೆಸಲಾಯಿತು. ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಜನ ಭಕ್ತರು, ಭಕ್ತಿಯಿಂದ ದೇವಸ್ಥಾನ ಸುತ್ತಲೂ ಪ್ರದಕ್ಷಿಣೆ ಹಾಕಿದರು. ಡೊಳ್ಳು ಹಾಗೂ ತಾಳ ಮೇಳಗಳ ಸಂಗೀತ ಶ್ರಾವಣ ಆರಂಭೋತ್ಸವಕ್ಕೆ ಮೆರಗು ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.