ರೈತರಿಗೆ ಸಮರ್ಪಕ ಗೊಬ್ಬರ ವಿತರಿಸಿ
Team Udayavani, Jul 12, 2022, 3:34 PM IST
ಜೇವರ್ಗಿ: ರೈತರಿಗೆ ಸಮರ್ಪಕ ಗೊಬ್ಬರ ಸಿಗುವಂತೆ ಒತ್ತಾಯಿಸಿ ಜೆಡಿಎಸ್ ನಗರ ಘಟಕದ ವತಿಯಿಂದ ಸೋಮವಾರ ಪಟ್ಟಣದ ಕೃಷಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ತಾಲೂಕಿನಲ್ಲಿ ಸಮರ್ಪಕ ಮಳೆಯಾಗಿದ್ದು, ತೊಗರಿ, ಹತ್ತಿ ಸೇರಿದಂತೆ ಮುಂಗಾರು ಬೆಳೆಗಳ ಬಿತ್ತನೆ ಆರಂಭವಾಗಿದೆ. ಆದರೆ, ರೈತರಿಗೆ ಸಮರ್ಪಕ ಡಿಎಪಿ ಗೊಬ್ಬರ ಸಿಗದೇ ಪರದಾಡುವಂತಾಗಿದೆ. ರೈತರಿಗೆ ಕಳೆದ ಐದಾರು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ, ಕೊರೊನಾ ಸೇರಿದಂತೆ ಒಂದಿಲ್ಲೊಂದು ಸಮಸ್ಯೆಗಳಿಂದ ಸಾಕಷ್ಟು ತೊಂದರೆಯಲ್ಲಿದ್ದಾರೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆಯಿಂದ ಬಿತ್ತಿದ ಬೀಜ, ಗೊಬ್ಬರ ನೆಲಪಾಲಾಗಿದೆ. ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೃಷಿ ಇಲಾಖೆ ಅಧಿಕಾರಿ ಪವನಕುಮಾರ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಸ್.ಎಸ್. ಸಲಗರ, ಜಿಲ್ಲಾ ಉಪಾಧ್ಯಕ್ಷ ಶಂಕರ ಕಟ್ಟಿಸಂಗಾವಿ, ಜೆಡಿಎಸ್ ನಗರ ಘಟದ ಅಧ್ಯಕ್ಷ ರೌಫ ಹವಾಲ್ದಾರ್, ಮುಖಂಡರಾದ ಇಮ್ರಾನ್ ಇನಾಂದಾರ, ಶಬ್ಬೀರ ಇನಾಂದಾರ, ಬಬ್ಲು ಇನಾಂದಾರ, ಮಾಜೀದ್ ಪಟೇಲ, ಮುಖೀದ್ ಗುತ್ತೆದಾರ, ಮಹಿಬೂಬ್ ಗುತ್ತೆದಾರ, ಖಯೂಮ್ ಜಮಾದಾರ, ಬಾವೂದ್ದೀನ್ ಇನಾಮದಾರ, ಎಂ.ಡಿ. ಶಫಿಕ್, ಅಫ್ರೂಜ್ ಗುತ್ತೆದಾರ, ಭೀಮು ತಳವಾರ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.