ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಕಿಟ್ ವಿತರಣೆ
Team Udayavani, Jun 30, 2021, 5:35 PM IST
ಚಿತ್ತಾಪುರ: ತಾಲೂಕಿನಲ್ಲಿ ಒಟ್ಟು 5000 ಕ್ಕೂ ಅಧಿ ಕ ಮಕ್ಕಳು ಅಪೌಷ್ಟಿಕಾಂಶ ಹೊಂದಿದ್ದಾರೆ. ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರ ಕಿಟ್‌ಗಳನ್ನು ವಿತರಿಸಲು ಸಂಬಂಧಪಟ್ಟ ಇಲಾಖೆಯ ಅ ಧಿಕಾರಿಗಳು ಸರ್ವ ಸನ್ನದ್ಧ ಮಾಡಿಕೊಳ್ಳಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಅಧಿ ಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಬಹುತೇಕ ಎಲ್ಲ ವಯೋಮಾನದವರು ಸಮಸ್ಯೆ ಎದುರಿಸಿದ್ದಾರೆ. ಇದೀಗ ಮೂರನೇ ಅಲೆಯು ಜುಲೈ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ಬರಲಿದೆ. ಇದು ಅಪೌಷ್ಟಿಕಾಂಶ ಹೊಂದಿದ ಮಕ್ಕಳಿಗೆ ಜಾಸ್ತಿ ಸೋಂಕು ತಗುಲಲಿದೆ ಎಂದು ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಅಪೌಷ್ಟಿಕಾಂಶ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಕಿಟ್ ವಿತರಿಸಲಾಗುವುದು ಎಂದು ಹೇಳಿದರು.
ತಾಲೂಕು ವೈದ್ಯಾ ಧಿಕಾರಿ ದೀಪಕ್ ಮಾತನಾಡಿ, ಅಪೌಷ್ಟಿಕಾಂಶ ಹೊಂದಿದ ಮಕ್ಕಳನ್ನು ತೀವ್ರ ಅಪೌಷ್ಟಿಕತೆ ಹಾಗೂ ಮ್ಯಾಮ್ ಮಧ್ಯಮ ತೀವ್ರ ಅಪೌಷ್ಟಿಕತೆ ಎಂದು ಗುರುತಿಸಲಾಗುತ್ತಿದೆ. ಚಿತ್ತಾಪುರ ತಾಲೂಕಿನಲ್ಲಿ ಒಟ್ಟು 146 ತೀವ್ರ ಅಪೌಷ್ಟಿಕತೆ ಹಾಗೂ 6578 ಮಧ್ಯಮ ತೀವ್ರ ಅಪೌಷ್ಟಿಕತೆ ಹೀಗೆ ಒಟ್ಟು 6724 ಮಕ್ಕಳಿಗೆ ಕಿಟ್ ವಿತರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕಿಟ್ ವಿತರಣೆ ಜತೆಗೆ ಚಿತ್ತಾಪುರ ತಾಲೂಕಿನ ವಿವಿಧ ಪ್ರದೇಶದ 18 ವಯಸ್ಸು ದಾಟಿದ ಒಟ್ಟು 1000 ಜನರಿಗೆ ಕೋವಿಡ್ ಲಸಿಕೆ ಕೂಡ ಹಾಕಲಾಗುತ್ತಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗುವಂತೆ ನೋಡಿಕೊಳ್ಳಬೇಕು ಎಂದರು. ತಹಶೀಲ್ದಾರ್ ಉಮಾಕಾಂತ ಹಳ್ಳೆ ಮಾತನಾಡಿ, ಕಿಟ್ ವಿತರಣೆ ಹಾಗೂ ಲಸಿಕೆ ಹಾಕುವ ಕಾರ್ಯಕ್ರಮವನ್ನು ಸೂಕ್ತ ರೀತಿಯಲ್ಲಿ ನಡೆಸಿಕೊಂಡು ಯಶಸ್ವಿಗೊಳಿಸಲು ಒಟ್ಟು 800 ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ.
ಜತೆಗೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸೇವೆಗೆ ನಿಯೋಜಿಸಲಾಗುತ್ತಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮಧ್ಯೆ ಪ್ರವೇಶಿಸಿ ನಮ್ಮನ್ನು ಸಹ ಸಹಾಯಕರಾಗಿ ಕಾರ್ಯನಿರ್ವನಿರ್ವಹಿಸಲು ಮನವಿ ಮಾಡಿದರು. ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಪಕ್ಷದ ಕಾರ್ಯಕರ್ತರನ್ನು ಸಹ ವಿಶ್ವಾಸಕ್ಕೆ ತೆಗೆದುಕೊಂಡು ಸಹಾಯಕರಾಗಿ ಕಾರ್ಯನಿರ್ವಹಿಸಲು ಬಳಸಿಕೊಳ್ಳಬೇಕು.
ನಾಳೆಯ ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಒದಗಿಸಿ ಜನರು ಒಟ್ಟಾಗಿ ಸೇರದಂತೆ ನೋಡಿಕೊಳ್ಳಬೇಕು ಎಂದು ಪಿಎಸ್‌ಐಗೆ ಸೂಚಿಸಿದರು. ಜಿಪಂ ಮಾಜಿ ಸದಸ್ಯ ಶಿವರುದ್ರ ಭೀಣಿ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲ್‌ಪುರಕರ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ತಹಶೀಲ್ದಾರ್ ಸುರೇಶ ವರ್ಮಾ, ತಾಪಂ ಇಒ ನೀಲಗಂಗಾ, ಲಕ್ಷ್ಮಣ ಶೃಂಗೇರಿ, ರಾಜಕುಮಾರ ರಾಠೊಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.