ಪಿಎಸ್ಐ ನೇಮಕಾತಿ ಅಕ್ರಮ : ದಿವ್ಯಾ ಹಾಗರಗಿ ಸೇರಿ ಆರು ಮಂದಿಗೆ ಬಂಧನ ವಾರೆಂಟ್ ಜಾರಿ
Team Udayavani, Apr 26, 2022, 10:19 PM IST
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ತಲೆಮರೆಸಿಕೊಂಡಿರುವ ಮಾಸ್ಟರ್ ಮೈಂಡ್ ಆಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ ಆರು ಜನರಿಗೆ ಅರೆಸ್ಟ್ ವಾರಂಟ್ ಜಾರಿಗೊಂಡಿದೆ. ಇದರಿಂದ ಅವರಿಗೆ ಹೊಸ ಕಂಟಕ ಎದುರಾದಂತಾಗಿದೆ.
ದೇಶದ ಗಮನ ಸೆಳೆದಿದ್ದ ಮುಂಬೈ ಸ್ಫೋಟ ಪ್ರಕರಣದಲ್ಲಿ ದಾವೂದ್ ಇಬ್ರಾಹಿಂಗೆ ಜಾರಿಗೊಳಿಸಿದ ಮಾದರಿಯಲ್ಲಿಯೇ ತಲೆ ಕರೆಸಿಕೊಂಡು ಓಡಾಡುವ ಮೂಲಕ ತನಿಖೆಗೆ ಅಸಹಕಾರ ತೋರುತ್ತಿರುವ ಆರು ಜನ ಆರೋಪಿತರಿಗೆ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ.
ರಾಜ್ಯದಲ್ಲಿ ಜರಗಿದ ಕ್ರಿಮಿನಲ್ ಕೇಸ್ ಗಳಲ್ಲಿ ಈ ತೆರನಾದ ಅರೆಸ್ಟ್ ವಾರೆಂಟ್ ಜಾರಿ ಮಾಡುವುದು ತೀರಾ ವಿರಳ.
ಅದರಲ್ಲೂ ತನಿಖಾ ಹಂತದಲ್ಲಿ ವಾರೆಂಟ್ ಜಾರಿಯಾದರೆ ಆರೋಪಿತರು ಎಲ್ಲಿದ್ದರೂ ಬಂದು ಸಿಐಡಿಗೆ ಇಲ್ಲವೇ ನ್ಯಾಯಾಲಯದ ಹಾಜರಾಗಲೇಬೇಕಾಗುತ್ತದೆ. ಇಲ್ಲದಿದ್ದರೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವಿದೆ.
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಮಾಸ್ಟರ್ ಮೈಂಡ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ರವೀಂದ್ರ ಮೇಳಕುಂದಿ, ಅರ್ಚನಾ, ಕಾಶಿನಾಥ್, ಶಾಂತಿಬಾಯಿಗೆ ಕಲಬುರಗಿಯ 3ನೇ ಜೆಎಂಎಫ್ಸಿ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.
ಇದನ್ನೂ ಓದಿ : ಕರುಣಾನಿಧಿ ಬರ್ತ್‌ಡೇ ಇನ್ನು ಸರ್ಕಾರಿ ಕಾರ್ಯಕ್ರಮ: ಎಂ.ಕೆ.ಸ್ಟಾಲಿನ್
ಮುಂಬೈ ಸ್ಫೋಟ ಪ್ರಕರಣ ಉಲ್ಲೇಖಿಸಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಅದನ್ನು ಮನ್ನಿಸಿ ನ್ಯಾಯಾಲಯವು ವಾರಂಟ್ ಜಾರಿ ಮಾಡಿದೆ.
ವಾರದೊಳಗಡೆ ಆರೋಪಿತರು ಶರಣಾಗದಿದ್ದರೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
ಕಳೆದ 15 ದಿನಗಳಿಂದ ದಿವ್ಯಾ ಸೇರಿ ಆರು ಜನ ಆರೋಪಿಗಳು ಸಿಐಡಿಯಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ.
ಸಿಐಡಿಯಿಂದ 6 ವಿಶೇಷ ತಂಡ ರಚನೆ: ದಿವ್ಯಾ ಹಾಗರಗಿ ಮತ್ತಿತರರ ಬಂಧನಕ್ಕೆ ಸಿಐಡಿ ತೀವ್ರ ಶೋಧ ಕಾರ್ಯಾರಂಭಿಸಿದೆ. ಡಿಜಿಪಿ ಪಿ.ಎಸ್. ಸಂಧು ಸೂಚನೆಯಂತೆ ಬಂಧನಕ್ಕೆ ಆರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.
ಸಿಐಡಿಯ ಆರು ತಂಡಗಳು ಕೆಲಸ ಮಾಡುತ್ತಿವೆ. ಶೋಧ ನಡೆಸುತ್ತಿದ್ದರೂ ಇದುವರೆಗೂ ದಿವ್ಯಾ ಎಲ್ಲಿ ಇದ್ದಾರೆ ಸುಳಿವು ಇದುವರೆಗೂ ಪತ್ತೆ ಆಗಿಲ್ಲ. ಇದು ಸಿಐಡಿಗೆ ತಲೆ ನೋವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.