ಮೀಸಲಾತಿಗೆ ಸೀಮಿತವಾಗಬೇಡಿ

Team Udayavani, Apr 23, 2018, 3:47 PM IST

g1-misalati.jpg

ಶಹಾಬಾದ: ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಕೊಟ್ಟ ಮೀಸಲಾತಿಗೆ ಮಾತ್ರ ದಲಿತರಾಗುವುದು ಬೇಡ. ಅಂಬೇಡ್ಕರ್‌ ಕರುಣಿಸಿದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದರು. 

ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಜಯಂತ್ಯುತ್ಸವ ಸಮಿತಿ ಆಯೋಜಿಸಿದ್ದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 127ನೇ ಜಯಂತ್ಯುತ್ಸವ ಕಾರ್ಯಕ್ರಮದ  ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಂವಿಧಾನ, ಶಿಕ್ಷಣ, ಮತದಾನ, ನಾಯಕತ್ವ ಪರ ನಡೆಸಿದ ಹೋರಾಟ, ಮೂಢನಂಬಿಕೆ ವಿರುದ್ಧ ಅರಿವು ಜಾಗೃತಿ ಮೂಡಿಸಿದ ಬಗೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. 

ಚಾತುರ್ವರ್ಣ ವಿರುದ್ಧ  ಹೋರಾಟ ಮಾಡಲು ಅರಮನೆ ತೊರೆದ ಬುದ್ಧ, ಸಮಾಜದಲ್ಲಿನ ಅನಿಷ್ಟ ಪದ್ಧತಿಗಳ ವಿರುದ್ಧ ಸಿಡಿದೆದ್ದು ಮನೆ ತೊರೆದು ಬಂದ ಬಸವಣ್ಣ, ದಲಿತರ ಹಕ್ಕು  ಪ್ರತಿಪಾದಿಸಲು ಹುಟ್ಟಿ ಬಂದ ಅಂಬೇಡ್ಕರ್‌ ದೇಶದ ನಿಜವಾದ ಪ್ರವಾದಿಗಳು ಎಂದರು. ಅಂಬೇಡ್ಕರ್‌ ಅವರ ಬದುಕು, ಬರಹ ಹಾಗೂ ಭಾಷಣಗಳನ್ನು ಓದಬೇಕು. 

ಅದರಂತೆ ನಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು. ಮುಖ್ಯ ಭಾಷಣಕಾರರಾಗಿದ್ದ ಪತ್ರಕರ್ತ, ಸಾಹಿತಿ ಶಿವರಂಜನ್‌ ಸತ್ಯಂಪೇಟೆ  ಮಾತನಾಡಿ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಧಕ್ಕೆ ಬಂದಿರುವ ಈ ದಿನಮಾನಗಳಲ್ಲಿ ಎಲ್ಲ ಪ್ರಜಾಪ್ರಭುತ್ವವಾದಿಗಳು ಒಂದಾಗಿ “ನಮ್ಮ ನಡೆ  ಅಂಬೇಡ್ಕರ್‌ ಕಡೆ’ ಎನ್ನುವ ಘೋಷ ವಾಕ್ಯದೊಂದಿಗೆ ಮುನ್ನಡೆದು ಕೋಮುವಾದ ಮತ್ತು ಉಗ್ರವಾದವನ್ನು ಹಿಮ್ಮೆಟ್ಟಿಸಬೇಕಿದೆ ಎಂದು ಕರೆ ನೀಡಿದರು. 

ಹಿರಿಯ ದಲಿತ ಮುಖಂಡ ವಿಠuಲ್‌  ದೊಡ್ಡಮನಿ ಉದ್ಘಾಟಿಸಿದರು. ಅಣದೂರು ವರಜ್ಯೋತಿ ಬಂತೇಜಿ ಬುದ್ಧ ವಂದನೆ ನೆರವೇರಿಸಿದರು.  ನಗರಸಭೆ ಸದಸ್ಯ ಗಿರೀಶ ಕಂಬಾನೂರ ಅಧ್ಯಕ್ಷತೆ ವಹಿಸಿದ್ದರು. ಜೇವರ್ಗಿ ಬಸವ ಕೇಂದ್ರದ ಶರಣಬಸವ ಕಲ್ಲಾ, ಸೂರ್ಯಕಾಂತ ನಿಂಬಾಳಕರ್‌, ನಗರಸಭೆ  ಧ್ಯಕ್ಷೆ ಗೀತಾ ಸಾಹೇಬಗೌಡ ಬೋಗುಂಡಿ, ಉಪಾಧ್ಯಕ್ಷೆ ಲಕ್ಷೀಬಾಯಿ ಕುಸಾಳೆ, ಡಾ| ರಶೀದ ಮರ್ಚಂಟ್‌, ಮರಿಯಪ್ಪ ಹಳ್ಳಿ,  ಹಾಷಮ್‌ ಖಾನ,

ಸುರೇಶ ಮೆಂಗನ್‌, ನಿಂಗಣ್ಣ ಹುಳಗೋಳಕರ್‌, ಸತೀಶ ಕಂಬಾನೂರ, ಶರಣು ಪಗಲಾಪುರ, ಕಾಶಿನಾಥ ಜೋಗಿ ಹಾಜರಿದ್ದರು. ಪ್ರವೀಣ  ರಾಜನ್‌ ನಿರೂಪಿಸಿದರು. ಲೋಹಿತ್‌ ಕಟ್ಟಿ ಸ್ವಾಗತಿಸಿದರು. ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಸ್ನೇಹಿಲ್‌ ಜಾಹಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಯೋಗಿ ಕಟ್ಟಿ ವಂದಿಸಿದರು. ಸುಧಾರಾಣಿ ಸಜ್ಜನ್‌ ಪ್ರಾರ್ಥಿಸಿದರು. ಶಂಕರ ಜಾನಾ, ಗುರುನಾಥ ಪೋತನಕರ್‌ ಹಾಗೂ ಸಂಗಡಿಗರು  ಕ್ರಾಂತಿಗೀತೆಗಳನ್ನು ಹಾಡಿದರು. 

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.