ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಬೇಡಿ
Team Udayavani, Dec 5, 2017, 10:26 AM IST
ಕಲಬುರಗಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿವೃದ್ಧಿ ಸಲುವಾಗಿ ಒಮ್ಮೆಯಾದರೂ ಕಲಬುರಗಿಗೆ ಬಂದಿದ್ದಾರೆಯೇ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಾರವಾಗಿ ಪ್ರಶ್ನಿಸಿದರು.
ಕಮಲಾಪುರ ಪಟ್ಟಣದಲ್ಲಿ ಸೋಮವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ತಮ್ಮ ಸರ್ಕಾರ ಇದ್ದಾಗ ಕಲಬುರಗಿಯಲ್ಲಿ ಸತತ ಮೂರು ವರ್ಷಗಳ ಕಾಲ ಸಚಿವ ಸಂಪುಟ ಸಭೆ ನಡೆಸಿ ಸುವರ್ಣ ಗ್ರಾಮೋದಯ ಸೇರಿದಂತೆ ಹಲವಾರು ಯೋಜನೆಗಳಿಗೆ ಸಾವಿರಾರು ಕೋಟಿ ರೂ. ನೀಡಿ ಈ ಭಾಗದ ಅಭಿವೃದ್ಧಿಗೆ ಕೈ ಜೋಡಿಸಲಾಗಿದೆ. ಈಗಿನ ಕಾಂಗ್ರೆಸ್ ಸರಕಾರ ನಾಮಕಾವಾಸ್ತೆ ಎನ್ನುವಂತೆ ಒಮ್ಮೆ ಸಚಿವ ಸಂಪುಟ ಸಭೆ ನಡೆಸಿದ್ದನ್ನು ಬಿಟ್ಟರೆ ಇನ್ನಾವುದಕ್ಕೂ ಕಲಬುರಗಿಗೆ ಬಂದಿಲ್ಲ. ಬಂದಿದ್ದರೂ ಒಂದೆರಡು ಸಲ ಬೇರೆಯದಕ್ಕೆ ಬಂದಿದ್ದಾರೆ. ಒಟ್ಟಾರೆ ಇದು ಸಿಎಂರಿಗೆ ಈ ಭಾಗದ ಅಭಿವೃದ್ಧಿ ಬೇಕಿಲ್ಲ ಎಂಬುದು ನಿರೂಪಿಸುತ್ತದೆ. ತಾವೆಷ್ಟು ಸಲ ಬಂದಿದ್ದೇವೆ
ಎಂಬುದನ್ನು ತಮ್ಮ ಕಾರ್ಯಕರ್ತರಿಂದಲೇ ತಿಳಿದುಕೊಳ್ಳಿ ಎಂದು ಹೇಳಿದರು.
ವಿಮಾನ ನಿಲ್ದಾಣವಾದರೆ ಈ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಅಡಿಗಲ್ಲು ಹಾಕಲಾಗಿದೆ. ಆದರೆ ಇಂದಿನ ದಿನದವರೆಗೂ ಪೂರ್ಣಗೊಳ್ಳುತ್ತಿಲ್ಲ. ತಾವು ಸಿಎಂ ಆಗಿದ್ದಾಗ ಬಂಜಾರ-ಭೋವಿ ಸಮಾಜ ಅಭಿವೃದ್ಧಿ ನಿಗಮ
ಸೇರಿದಂತೆ ಇತರ ಅಭಿವೃದ್ಧಿ ನಿಗಮಗಳ ಸ್ಥಾಪನೆ, ಕಾಗಿನೆಲೆ ಅಭಿವೃದ್ಧಿಗೆ ಚಾಲನೆ, ಬೆಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 40 ಕೋಟಿ ರೂ., ಸರ್ವ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಹೆಣ್ಣು ಮಕ್ಕಳಿಗೆ ಸಹಾಯವಾಗಲಿ ಎಂದು ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ ಜಾರಿಗೆ ತರಲಾಗಿ ಸರ್ವ ಜನರಿಗೆ ಸ್ಪಂದಿಸಲಾಗಿದೆ. ಈಗ ಭಾಗ್ಯಲಕ್ಷ್ಮೀ ಬಾಂಡ್ ಗೆ ಷರತ್ತು ವಿಧಿಸಿ ಸಾರ್ವಜನಿಕರಿಗೆ ತಲುಪದಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಆಪ್ತರನ್ನು ರಕ್ಷಿಸುತ್ತಾ ಬರೀ ಉಡಾಫೆ ಮಾತಿಗಳಲ್ಲಿಯೇ ಸಿದ್ಧರಾಮಯ್ಯ ಕಾಲ ಕಳೆಯುತ್ತಿದ್ದಾರೆ. ಅಲ್ಲದೇ ಬರೀ ಭ್ರಷ್ಟಾಚಾರದಲ್ಲಿ ಮುಳುಗಿ ಸಿಒಡಿ ಹಾಗೂ ಎಸಿಬಿಯಿಂದ ಕ್ಲಿನ್‌ಚೀಟ್ ಪಡೆದುಕೊಳ್ಳುತ್ತಿದ್ದಾರೆ. ಆದರೆ ತಾವು ಅಧಿಕಾರಕ್ಕೆ ಬಂದ ತಕ್ಷಣ ಕ್ಲಿನ್‌ಚೀಟ್ ನೀಡಲಾಗಿರುವ ಎಲ್ಲ ಪ್ರಕರಣಗಳನ್ನು ಮರು ತನಿಖೆಗೆ ಆದೇಶಿಸಲಾಗುವುದು ಎಂದು ಯಡಿಯೂರಪ್ಪ ಗುಡುಗಿದರು.
ಕೇಂದ್ರದತ್ತ ಬೊಟ್ಟು ಮಾಡಬೇಡಿ: ರಾಜ್ಯದ ಖಜಾನೆ ದಿವಾಳಿಯಾಗಿದ್ದರಿಂದ ಸಿಎಂ ಸಿದ್ಧರಾಮಯ್ಯ ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿನ ರಾಜ್ಯ ಸರ್ಕಾರಗಳು ಅಲ್ಲಿನ ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಸಾಲ ಮನ್ನಾ ಮಾಡಿವೆ. ಆದರೆ ನಮ್ಮ ಸಿದ್ರಾಮಣ್ಣವರು ಈ ಬಗ್ಗೆ ಕೇಳಿದರೆ ಕೇಂದ್ರದತ್ತ ಬೊಟ್ಟು ಮಾಡ್ತಾರೆ. 14ನೇ ಹಣಕಾಸು ಆಯೋಗದಲ್ಲಿ ಕೋಟ್ಯಾಂತರ ರೂ. ಆರ್ಥಿಕ ಸಹಾಯ ಹರಿದು
ಬಂದರೂ ಇನ್ನೂ ಬೊಟ್ಟು ಮಾಡುವುದನ್ನು ನಿಲ್ಲಿಸಿಲ್ಲ ಎಂದು ಟೀಕಿಸಿದರು.
ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ ಮಾತನಾಡಿದರು. ಸಂಸದರಾದ ಶ್ರೀರಾಮುಲು, ಮಾಜಿ ಸಚಿವರಾದ ರೇವು ನಾಯಕ ಬೆಳಮಗಿ, ಬಾಬುರಾವ ಚವ್ಹಾಣ, ಸುನೀಲ ವಲ್ಲಾಪುರೆ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಕೆ.ಬಿ. ಶಾಣಪ್ಪ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ ಹೆಬ್ಟಾಳ, ಶಶೀಲ ನಮೋಶಿ, ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಈಶಾನ್ಯ ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಕೆ.ಬಿ.ಶ್ರೀನಿವಾಸ, ಮುಖಂಡರಾದ ಸುಭಾಷ ಬಿರಾದಾರ, ಬಸವರಾಜ ಮತ್ತಿಮೂಡ, ನಾಮದೇವ ರಾಠೊಡ ಕರಹರಿ ಸೇರಿದಂತೆ ಮುಂತಾದವರಿದ್ದರು.
ಕಲಬುರಗಿ ಗ್ರಾಮೀಣ ಘಟಕದ ವತಿಯಿಂದ ಬಸವರಾಜ ಪಾಟೀಲ, ರವಿ ಬಿರಾದಾರ, ಬಸವರಾಜ ಮತ್ತಿಮೂಡ ಹಾಗೂ ಇತರರ ನೇತೃತ್ವದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭಾರಿ ಗಾತ್ರದ ಹಾರ ಹಾಕುವ ಮುಖಾಂತರ ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಬಿರಾದಾರ ನಿರೂಪಿಸಿದರು. ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಶರಣು ಸಲಗರ ಸ್ವಾಗತಿಸಿದರು.
ಟಿಕೆಟ್ ಯಾರಿಗೆ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡಿ ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಪೈಪೋಟಿ ಇರುವುದು ತಮ್ಮ ಗಮನಕ್ಕೆ ಬಂದಿದೆ. ಸ್ಪರ್ಧಾ ಆಕಾಂಕ್ಷಿಗಳಲ್ಲಿ ಯಾರಿಗಾದರೂ ಟಿಕೆಟ್ ನೀಡಿದರೂ ಉಳಿದವರೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಕಮಲವನ್ನು ಪುನಃ ಅರಳಿಸಬೇಕು. ಟಿಕೆಟ್ ವಂಚಿತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು.
ಬಿ.ಎಸ್.ಯಡಿಯೂರಪ್ಪ ರಾಜ್ಯಾಧ್ಯಕ್ಷರು, ಬಿಜೆಪಿ
ಅಂಬೇಡ್ಕರ್ ಅವರಿಗೆ ಭಾರತ ರತ್ನ ಸಹ ನೀಡಲಿಲ್ಲ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷದವರು ಐದು ದಶಕಗಳ ಕಾಲ ಅಧಿಕಾರ ನಡೆಸಿದ್ದರೂ ಮರಣೋತ್ತರವಾಗಿಯಾದರೂ ಭಾರತ ರತ್ನ ಪ್ರಶಸ್ತಿ ನೀಡಲಿಲ್ಲ. ಬಿಜೆಪಿ ಬೆಂಬಲಿತದ ವಿ.ಪಿ.ಸಿಂಗ್ ಸರ್ಕಾರವಿದ್ದಾಗ ಭಾರತ ರತ್ನ ನೀಡಿ ಗೌರವಿಸಲಾಯಿತು. ಇದು ಕಾಂಗ್ರೆಸ್ ಪರಿಶಿಷ್ಟರ ಬಗ್ಗೆ ಹೊಂದಿರುವ ಕಾಳಜಿ ನಿರೂಪಿಸುತ್ತದೆ.
ಗೋವಿಂದ ಕಾರಜೋಳ ಮಾಜಿ ಸಚಿವ
ರಸ್ತೆಯುದ್ದಕ್ಕೂ ಕಟೌಟ್ ಕಲಬುರಗಿಯಿಂದ ಹಿಡಿದು ಯಾತ್ರೆ ನಡೆಯುವ ಕಮಲಾಪುರ ಪಟ್ಟಣದ ರಸ್ತೆಯುದ್ದಕ್ಕೂ ಸ್ವಾಗತದ ಕಟೌಟ್‌ಗಳೇ ರಾರಾಜಿಸುತ್ತಿದ್ದವು. ಜಿ.ಪಂ ಸದಸ್ಯ ಬಸವರಾಜ ಮತ್ತಿಮೂಡ ಅವರ ಕಟೌಟ್‌ಗಳೇ ಹೆಚ್ಚಿನ
ಸಂಖ್ಯೆಯಲ್ಲಿದ್ದವು. ಇನ್ನುಳಿದಂತೆ ಮಾಜಿ ಸಚಿವ ಬಾಬುರಾವ ಚವ್ಹಾಣ, ರೇವು ನಾಯಕ ಬೆಳಮಗಿ, ನಾಮದೇವ ರಾಠೊಡ ಕರಹರಿ ಕಟೌಟ್‌ಗಳು ಕಂಡು ಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.