ಭೀಮಾ ನೀರು ಅಮರ್ಜಾಕ್ಕೆ ಹರಿಸಬೇಡಿ

Team Udayavani, Mar 25, 2017, 3:06 PM IST

gul3.jpg

ಅಫಜಲಪುರ: ಕಳೆದ ವರ್ಷ ತಾಲೂಕಿನಲ್ಲಿ ಭೀಕರ ಬರಗಾಲ ಆವರಿಸಿ ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವರ್ಷ ಸ್ವಲ್ಪ ಮಳೆಯಾಗಿ ಭೀಮಾ ಬ್ಯಾರೇಜ್‌ನಲ್ಲಿ ನೀರು ನಿಲುಗಡೆಯಾಗಿದೆ. ಆ ನೀರನ್ನಿಗ ಆಳಂದ ತಾಲೂಕಿನ ಅಮರ್ಜಾ ಬ್ಯಾರೇಜ್‌ಗೆ ಬಿಡುತ್ತಿರುವ ಕ್ರಮ ಸರಿಯಲ್ಲ.

ಭೀಮಾ ನೀರನ್ನು ಅಮರ್ಜಾಗೆ ಹರಿಸಬಾರದು ಎಂದು ಮಾಜಿ ಶಾಸಕ ಎಂ.ವೈ. ಪಾಟೀಲ ಒತ್ತಾಯಿಸಿದರು. ತಾಲೂಕಿನ ಚವಡಾಪುರದಲ್ಲಿ ಬಿಜೆಪಿ ತಾಲೂಕು ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ತಾಲೂಕಿನ ಸೊನ್ನ ಗ್ರಾಮದ ಹತ್ತಿರ ಭೀಮಾ ನದಿಗೆ ಬ್ಯಾರೇಜ್‌ ನಿರ್ಮಿಸಲಾಗಿದೆ.

ಯೋಜನೆಯಿಂದ ತಾಲೂಕಿನ 60 ಸಾವಿರ ಎಕರೆ ಕೃಷಿ ಭೂಮಿ ನೀರಾವರಿಯಾಗಬೇಕು. ಯೋಜನೆ ಪ್ರಾರಂಭವಾಗಿ 25 ವರ್ಷ ಕಳೆದರೂ ಇಲ್ಲಿವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಯೋಜನೆ ವ್ಯಾಪ್ತಿಯಲ್ಲಿ ಬರುವ 11 ಹಳ್ಳಿಗಳು ಸ್ಥಳಾಂತರವಾಗಿಲ್ಲ. ಡ್ಯಾಂನಲ್ಲಿ ಪೂರ್ಣ ಪ್ರಮಾಣದ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. 

ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಮುಂಗಡ ಪತ್ರದಲ್ಲಿ ಭೀಮಾನದಿಯಿಂದ ಆಳಂದ ತಾಲೂಕಿನ ಅಮರ್ಜಾ ಡ್ಯಾಮ್‌ಗೆ ನೀರು ಹರಿಸುವ ತೀರ್ಮಾನ ಕೈಗೊಂಡಿದೆ. ಸರಕಾರದ ಈ ಕ್ರಮದಿಂದಾಗಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಕರಜಗಿ-ಹೊಸುರ ರಾಜ್ಯ ಹೆದ್ದಾರಿ ಮಾಡಿದ ವರ್ಷದಲ್ಲಿಯೇ ಕಿತ್ತು ಹೋಗಿದೆ. 

ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿ ತಾಲೂಕಾಧ್ಯಕ್ಷ ಸೂರ್ಯಕಾಂತ ನಾಕೇದಾರ, ಜಿಪಂ ಸದಸ್ಯ ಅರುಣಕುಮಾರ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜಮಾದಾರ, ಮತೀನ್‌ ಪಟೇಲ, ಸಿದ್ದು ಶಿರಸಗಿ, ಬಾಷಾ ಪಟೇಲ್‌ ಹಸರಗುಂಡಿ, ಸಿದ್ದಾರ್ಥ ಬಸರಿಗಿಡ, ಬೀರಣ್ಣ ಕಲ್ಲೂರ, ಶರಣು ಕುಂಬಾರ ಮಾತನಾಡಿದರು. 

ತೊಗರಿ ಕೇಂದ್ರಗಳನ್ನು ತೆರೆದು ಅವುಗಳಿಗೆ ತಕ್ಕಂತೆ ಚೀಲಗಳ ಪೂರೈಕೆ ಮಾಡಬೇಕು. ಬಂದರವಾಡ ಗ್ರಾಮದ ಹತ್ತಿರ ಬಿ ಸ್ಕೀಮ್‌ ಅನ್ವಯ ಏತ ನೀರಾವರಿ ಯೋಜನೆ ಕಾಮಗಾರಿ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ ಮೂಲಕ ರಾಜ್ಯ ಪಾಲರಿಗೆ ಮನವಿಪತ್ರ ಸಲ್ಲಿಸಿದರು. 

ಜಿಪಂ ಉಪಾಧ್ಯಕ್ಷೆ ಶೋಭಾ ಶಿರಸಗಿ, ಮುಖಂಡರಾದ ಶಿವಾನಂದ ಗಾಡಿಸಾಹುಕಾರ, ಸುಭಾಷ ರೂಗಿ, ಮಲ್ಲಿಕಾರ್ಜುನ ನಿಂಗದಳ್ಳಿ, ಚಂದಮ್ಮ ಪಾಟೀಲ, ಸಂತೋಷ ವಾಗರಗಿ, ಚಂದು ಕರಜಗಿ ಹಾಗೂ ಪಕ್ಷದ ವಿವಿಧ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.