ಜೀವ ಉಳಿಸಲು ರಕ್ತದಾನ ಮಾಡಿ
Team Udayavani, Oct 31, 2018, 5:10 PM IST
ಗದಗ: ರಕ್ತದಾನ ಅತ್ಯಂತ ಪವಿತ್ರ ಕೆಲಸ. ರಕ್ತದಾನದಿಂದ ಒಂದು ಜೀವ ಉಳಿಯುತ್ತದೆ ಎಂದು ಜಿ.ಪಂ. ಅಧ್ಯಕ್ಷ ಶಿವಲಿಂಗಪ್ಪ ಬಳಿಗಾರ ಹೇಳಿದರು. ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕನಕದಾಸ ಶಿಕ್ಷಣ ಸಮಿತಿಯ ಎಂಎಸ್‌ಡಬ್ಲ್ಯೂ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ ಸಂಶೋಧನೆಗಳ ಫಲವಾಗಿ ಮಾನವನ ಅಂಗಾಂಗ ಬದಲಾವಣೆ ಸಾಧ್ಯವಾಗಿದ್ದರೂ ಕೃತಕವಾಗಿ ರಕ್ತವನ್ನು ತಯಾರಿಸುವಷ್ಟು ವಿಜ್ಞಾನ ಬೆಳೆದಿಲ್ಲ. ಅಪಘಾತ, ಹೆರಿಗೆ, ಗಂಭೀರ ಕಾಯಿಲೆಗಳ ಶಸ್ತ್ರ ಚಿಕಿತ್ಸೆ ವೇಳೆ ರೋಗಿಗಳಿಗೆ ರಕ್ತ ಅಗತ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ರಕ್ತಕ್ಕಾಗಿ ಪರದಾಡುವಂತಾಗುತ್ತದೆ. 18ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತರು ರಕ್ತದಾನ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಯುವ ಸಮೂಹ ಮೇಲಿಂದ ಮೇಲೆ ರಕ್ತದಾನದ ಮೂಲಕ ಸಾವು-ಬದುಕಿನ ಹೋರಾಟ ನಡೆಸುವವರಿಗೆ ಜೀವದಾನ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಜಿ.ಪಂ. ಸಿಇಒ ಮಂಜುನಾಥ ಚವ್ಹಾಣ ಮಾತನಾಡಿ, ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ರಕ್ತದಾನದ ಅವಶ್ಯಕತೆ ಉಂಟಾಗುತ್ತದೆ. ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುತ್ತದೆ. ದೇಹದಲ್ಲಿನ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಬೇಕು ಎಂದು ಹೇಳಿದರು.
ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ ಮಾತನಾಡಿ, ದಾನಗಳಲ್ಲೇ ರಕ್ತದಾನ ಶ್ರೇಷ್ಠವಾದದ್ದು. ರಕ್ತದಾನದ ಬಗ್ಗೆ ಗ್ರಾಮೀಣ ಜನರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಕನಕದಾಸ ಶಿಕ್ಷಣ ಸಮಿತಿ ಅಧ್ಯಕ್ಷ ಬಿ.ಎಫ್. ದಂಡಿನ ಮಾತನಾಡಿ, ಅನ್ನದಾನ, ವಿದ್ಯಾದಾನ ಹಾಗೆಯೇ ರಕ್ತದಾನವೂ ಮಹತ್ವದ್ದಾಗಿದೆ. ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. ರಕ್ತವನ್ನು ಮತ್ತೊಬ್ಬರ ದಾನದಿಂದ ಮಾತ್ರ ಪಡೆಯಬಹುದು. ವಿದ್ಯಾರ್ಥಿಗಳು ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಅ ಧಿಕಾರಿ ಡಾ| ಚಂದ್ರಕಲಾ ಜೆ. ಮಾತನಾಡಿ, ಜಿಲ್ಲೆಯಲ್ಲಿ ಮಾಸಿಕ 10,000 ಯುನಿಟ್ ರಕ್ತದ ಅವಶ್ಯಕತೆಯಿದ್ದು, ಈಗ ಶೇ. 90ಕ್ಕಿಂತ ಹೆಚ್ಚಿಗೆ ರಕ್ತ ಸಂಗ್ರಹಣೆಯಾಗುತ್ತಿದೆ. ಎಲ್ಲ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಕೆಎಸ್‌ಎಸ್ ಸಮಾಜಕಾರ್ಯ ಸ್ನಾತಕೋತ್ತರ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಅಂಬರೀಶ ಕಂಪ್ಲಿ, ಕೆ.ಎಸ್.ಎಸ್. ಸ್ನಾತಕೋತ್ತರ ಕೇಂದ್ರದ ಮುಖ್ಯ ಸಂಯೋಜಕ ಜೆ.ಸಿ. ಜಂಪಣ್ಣವರ, ಸಿ.ಎಸ್. ಬೊಮ್ಮನಹಳ್ಳಿ, ವಸಂತ ಅಗಸಿಮನಿ, ಶೇಖರ ಅಡಗಿ, ಪಿ.ಎಸ್. ಗಾಣಿಗೇರ, ಎಸ್.ಎಸ್. ಬೆನಕನಾಳ, ಜ್ಯೋತಿ ಅಂದಪ್ಪನವರ, ಗಿರೀಶ ಪಂತರ, ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಆರೋಗ್ಯ ಇಲಾಖೆಯ ಗೀತಾ ಕಾಂಬಳೆ ಉಪಸ್ಥಿತರಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಪ್ರಭಾರಿ ಅಧಿಕಾರಿ ವೈ.ಕೆ. ಭಜಂತ್ರಿ ಸ್ವಾಗತಿಸಿದರು. ಪ್ರಕಾಶ ಗಾಣಿಗೇರ ನಿರೂಪಿಸಿದರು. ಆರೋಗ್ಯ ಇಲಾಖೆಯ ಬಸವರಾಜ ಲಾಳಗಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.