ಮಕ್ಕಳ ಆತ್ಮಹತ್ಯೆಗೆ ಪಾಲಕರೇ ಕಾರಣರಾಗದಿರಲು ಡಾ| ನಾ. ಸೋಮೇಶ್ವರ ಸಲಹೆ
Team Udayavani, Mar 14, 2022, 3:31 PM IST
ಡಾ| ನಾ. ಸೋಮೇಶ್ವರ
ಕಲಬುರಗಿ:ಈ ನಡುವೆ ಮಕ್ಕಳ ಆತ್ಮಹತ್ಯೆಗಳಿಗೆ ಅವರ ಪಾಲಕರೇ ಕಾರಣರಾಗುತ್ತಿರುವುದು ಕಳವಳಕಾರಿ ಸಂಗತಿ. ಎಂದಿಗೂ ಮಕ್ಕಳ ಮೇಲೆ ತಮ್ಮ ಅಭಿಪ್ರಾಯ, ಒತ್ತಡ ಹೇರಬಾರದು ಎಂದು ಡಾ| ನಾ. ಸೋಮೇಶ್ವರ ಸಲಹೆ ನೀಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತು, ಬಿ.ಎಸ್. ದೇಸಾಯಿ ಗೆಳೆಯರ ಬಳಗದ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಎಸ್‌ಎಸ್ ಎಲ್‌ಸಿ-ಪಿಯುಸಿ ಪರೀಕ್ಷಾ ಸಿದ್ಧತೆ: ಕೊನೆಯ ಕ್ಷಣದ ಟಿಪ್ಸ್ ಕುರಿತ ದೂರದರ್ಶನ ಚಂದನ ವಾಹಿನಿಯ ಥಟ್ಟಂತ್ ಹೇಳಿ! ಖ್ಯಾತಿಯ ಕ್ವಿಜ್ ಮಾಸ್ಟರ್ ಡಾ| ನಾ. ಸೋಮೇಶ್ವರ ಸಂವಾದ ನಡೆಸಿ, ಎಸ್‌ಎಸ್‌ಎಲ್ ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಸಲಹೆ ನೀಡಿದರು.
ಎಸ್‌ಎಸ್‌ಎಲ್‌ಸಿ-ಪಿಯುಸಿ ಫಲಿತಾಂಶದ ರ್‍ಯಾಂಕಿಂಗ್ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೆಳಸ್ಥಾನದಲ್ಲಿರಲು ಶಿಕ್ಷಕರ ಕೊರತೆಯೂ ಒಂದು ಕಾರಣ. ಈ ನಿಟ್ಟಿನಲ್ಲಿ ಸರ್ಕಾರ ಆದ್ಯತೆ ಮೇರೆಗೆ ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕಾತಿಗೆ ಶೀಘ್ರ ಮುಂದಾಗಬೇಕು ಎಂದರು. ಪ್ರಮುಖವಾಗಿ ಮಕ್ಕಳ ಬೌದ್ಧಿಕ ಮಟ್ಟದ ಜೊತೆ ಜೊತೆಗೆ ಶಿಕ್ಷಕರಷ್ಟೇ ಪಾಲಕರ ಜವಾಬ್ದಾರಿ ಹೆಚ್ಚಿದೆ. ಮಕ್ಕಳಿಗೆ ಮನೆಯಲ್ಲಿ ಪಾಠ ಪ್ರವಚನ ಮಾಡಿಸಬೇಕು. ಗಣಿತ ಮತ್ತು ವಿಜ್ಞಾನ ವಿಷಯಗಳು ಕಬ್ಬಿಣದ ಕಡಲೆಗಳಲ್ಲ. ಸ್ಪರ್ಧಾ ಮನೋಭಾವ, ನಿರಂತರ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಕಲಿಕೆಯಲ್ಲಿ ತೊಡಗಿದ್ದರೆ ಎಂಥವುಗಳನ್ನು ಎದುರಿಸಬಹುದು ಎಂದು ಹೇಳಿದರು.
ಬಿ.ಎಸ್. ದೇಸಾಯಿ ಗೆಳೆಯರ ಬಳಗದ ಪ್ರಮುಖ ಬಿ.ಎಸ್. ದೇಸಾಯಿ, ವೈದ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಡಾ| ಎಸ್. ಎಸ್. ಹಿರೇಮಠ ಇದ್ದರು. ಹಿರಿಯ ಪತ್ರಕರ್ತ ಭವಾನಿಸಿಂಗ್ ಠಾಕೂರ ಸ್ವಾಗತಿಸಿದರು. ದೇವಿಂದ್ರಪ್ಪ ಆವಂಟಿ ವಂದಿಸಿದರು. ಹಿರಿಯ-ಕಿರಿಯ ಪತ್ರಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.