ಗ್ರಾಪಂ ಕಾಮಗಾರಿ ವೀಕ್ಷಿಸಿದ ಸಿಇಒ ಡಾ| ಸಸಿ
Team Udayavani, Jul 2, 2021, 5:01 PM IST
ಕಲಬುರಗಿ: ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಡಿಹಾಳ ತಾಂಡಾ ಮತ್ತು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ| ದಿಲೀಷ್ ಸಸಿ ಗುರುವಾರ ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಗಳ ಮೂಲಭೂತ ಸೌಕರ್ಯ ವೀಕ್ಷಿಸಿದ ಅವರು, ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರ ಸಮ್ಮುಖದಲ್ಲಿ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ಅರಣ್ಯ ಇಲಾಖೆಯಿಂದ ಈಗಾಗಲೇ ವಿಮಾನ ನಿಲ್ದಾಣದ ಆವರಣದಲ್ಲಿ ಸುಮಾರು 980 ಸಸಿಗಳನ್ನು ನೆಟ್ಟಿದ್ದು, ಅವುಗಳನ್ನು ವೀಕ್ಷಿಸಿದ ಸಿಇಒ ಗ್ರಾಪಂ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಇದೇ ವೇಳೆ ಗ್ರಾಪಂ ಅಧ್ಯಕ್ಷ ಪ್ರವೀಣ ಬಿ.ಆಡೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕೆಂದು ಮನವಿ ಸಲ್ಲಿಸಿದರು. ಜತೆಗೆ ಸುವರ್ಣ ಗ್ರಾಮೋದಯ ಯೋಜನೆಯಡಿ ಅನೇಕ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಈ ಕಾಮಗಾರಿಗಳನ್ನು ಮುಂದುವರಿಸಬೇಕೆಂದು ಮಾಜಿ ಅಧ್ಯಕ್ಷ ಸಂತೋಷ ಆಡೆ ಒತ್ತಾಯಿಸಿದರು.
ಗ್ರಾಪಂ ಸದಸ್ಯರಾದ ಶಾಮ್ ಆಡೆ, ರಾಜು ಚವ್ಹಾಣ, ರವಿ ರಾಠೊಡ, ಅಶೋಕ ರಾಠೊಡ, ಗುರುನಾಥ ಪವಾರ, ಕಾರ್ಯನಿರ್ವಾಹಕ ಅಭಿಯಂತರ ಮೊಹಮ್ಮದ್ ಅಜಿಜೊjàದ್ದೀನ್, ತಾಪಂ ಇಒ ಮಾನಪ್ಪ ಕಟ್ಟಿಮನಿ, ಪಿಡಿಒ ಮಲ್ಲಿನಾಥ ರಾವೂರ, ಸಂಗಯ್ಯ ಸ್ವಾಮಿ ಹಿರೇಮಠ, ಹೋರಾಟಗಾರರಾದ ಸಂಗಯ್ಯ ಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಕಿಳ್ಳಿ, ರಮೇಶ ಮೀಸಿ, ಶಿವಾನಂದ ಕಿಳ್ಳಿ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.