ತೆರೆದ ಬಾವಿ ನಿರ್ಮಾಣ ಕಾಮಗಾರಿಗೆ ಚಾಲನೆ
Team Udayavani, Apr 28, 2017, 2:54 PM IST
ಆಳಂದ: ಸರ್ಕಾರದ ಯೋಜನೆಗಳಂತೆ ನಿಗದಿತ ಅವದಿಯಲ್ಲಿ ಕಾಮಗಾರಿಗಳನ್ನು ಕೈಗೊಂಡರೆ ಜನರಿಗೆ ಅನಕೂಲವಾಗುತ್ತದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ. ರಾಮಕೃಷ್ಣ ಹೇಳಿದರು.
ತಾಲೂಕಿನ ಹೊಡಲ್ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಲ್ಲಿ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ತೆರೆದ ಬಾವಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕೈಗೊಂಡು ನಂತರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ತೆರೆದ ಬಾವಿ ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ಬಾವಿ ನಿರ್ಮಾಣದಿಂದ ಹೊಡಲ್, ಜವಳಗಾ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ. ಪೈಪಲೈನ್, ವಿದ್ಯುತ್ ಸಂಪರ್ಕ ಒದಗಿಸಿ ಗ್ರಾಮದ ಜನರ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗುತ್ತದೆ ಎಂದು ಹೇಳಿದರು.
ಗ್ರಾಮದ ಇತರೆ ಸಮಸೆಗಳಿಗೂ ಬರುವ ದಿನಗಳಲ್ಲಿ ಆದ್ಯತೆ ಅನುಸಾರ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಚಿಂಚನಸೂರ ಜಿಪಂ ಸದಸ್ಯ ಶರಣಗೌಡ ಪಾಟೀಲ ಮಾತನಾಡಿ, ಗ್ರಾಮೀಣ ಮತಕ್ಷೇತ್ರದಲ್ಲಿ ಜನರ ನಾಗರಿಕ ಮೂಲಭೂತ ಸಮಸ್ಯೆಗಳಿಗೆ ಶಾಸಕ ರಾಮಕೃಷ್ಣ ಹಲವು ಯೋಜನೆಗಳಲ್ಲಿ ಅನುದಾನ ಮಂಜೂರು ಮಾಡಿಸುವ ಮೂಲಕ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ತಾಪಂ ಸದಸ್ಯ ಗೋರಕನಾಥ ಸಜ್ಜನ, ಕಮಲಾನಗರ ಗ್ರಾಪಂ ಮಾಜಿ ಅಧ್ಯಕ್ಷ ಸಂಜೀವಕುಮಾರ ಶಟ್ಟಿ, ಶ್ರೀಚಂದ ಗ್ರಾಪಂ ಅಧ್ಯಕ್ಷ ಬಸವರಾಜ ವರನಾಳ, ವಿಜಯಕುಮಾರ ರಾಮಕೃಷ್ಣ ಮಾತನಾಡಿದರು. ಪ್ರಮುಖರಾದ ದೀಪಕ ಹೊಡಲ್, ಪರಮೇಶ್ವರ ಅಪಚಂದ, ಅಂಬಾರಾಯ ಜವಳಗಿ, ಹಣಮಂತ ಚೂರಿ ಭಾಗವಹಿಸಿದ್ದರು.
ಬಳಿಕ ಶಾಸಕ ಜಿ.ರಾಮಕೃಷ್ಣ ಮುರುಡಿ ಗ್ರಾಮದಲ್ಲಿ ಎಸ್ ಇಪಿ ಯೋಜನೆಯಲ್ಲಿ 10 ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ಹಾಗೂ ಶಾಸಕರ ಅನುದಾನದ 4 ಲಕ್ಷ ರೂ.ದಲ್ಲಿ ಮುಸ್ಲಿಂ ಸ್ಮಶಾನ ಭೂಮಿ ಸುತ್ತುಗೋಡೆ ಕಾಮಗಾರಿಗೆ ಚಾಲನೆ ನೀಡಿದರು. ಜಿಪಂ ಸದಸ್ಯ ಶರಣಗೌಡ ಪಾಟೀಲ, ಮುಖಂಡ ವಿಜಯಕುಮಾರ ರಾಮಕೃಷ್ಣ, ಮುನಾವರ ಪಟೇಲ್, ಕಲ್ಯಾಣಿ ಮುರಡಿ ಇತರರು ಪಾಲ್ಗೊಂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.