ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರ ಮಾಹಿತಿ
Team Udayavani, Feb 17, 2019, 8:18 AM IST
ಕಲಬುರಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದ್ದು, ನಾವು ಮಾಡುವ ಮತದಾನ ಅದೇ ಅಭ್ಯರ್ಥಿಗೆ ಸೇರುತ್ತದೆ ಎನ್ನುವುದನ್ನು ತಿಳಿಯುವುದು ಅತೀ ಮುಖ್ಯವಾಗಿದೆ. ಇದಕ್ಕಾಗಿ ಸಾರ್ವಜನಿಕರು ವಿದ್ಯುನ್ಮಾನ ಮತ ಯಂತ್ರದ ಮಾಹಿತಿ ಪಡೆಯುವುದು ಅವಶ್ಯಕ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ವಿದ್ಯುನ್ಮಾನ ಮತ ಯಂತ್ರದ ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಹ್ಯಾಂಡ್ಸ್ ಆನ್ ತರಬೇತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಾರಂಭಿಕವಾಗಿ ಯುವ ಮತದಾರರಿಗೆ,
ಶಿಕ್ಷಕರಿಗೆ ವಿದ್ಯುನ್ಮಾನ ಮತಯಂತ್ರದ ಕುರಿತು ತರಬೇತಿ ನೀಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಮತದಾರರಿಗೆ ತರಬೇತಿ ನೀಡಲು 10 ಮತಗಟ್ಟೆಗೊಬ್ಬರಂತೆ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿರುವ 200 ಸೆಕ್ಟರ್ ಅಧಿಕಾರಿಗಳು ಎಲ್ಲ ಗ್ರಾಮಗಳಲ್ಲಿ ವಿದ್ಯುನ್ಮಾನ ಮತಯಂತ್ರದೊಂದಿಗೆ ವಿವಿ ಪ್ಯಾಟ್ ಯಂತ್ರದ ತರಬೇತಿ ಮತ್ತು ಮಾಹಿತಿ ನೀಡುವರು ಎಂದರು.
2019ರ ಜ. 1ಕ್ಕೆ ಹದಿನೆಂಟು ವರ್ಷ ಪೂರ್ಣವಾಗಿರುವ ಯುವ ಮತದಾರರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಸರು ನೋಂದಣಿಗಾಗಿ ಪಾಲಕರ ಅಥವಾ ಸಂಬಂಧಿಕರ ಮತದಾರರ ಚೀಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಎಲ್ಲ ಶಾಲೆ-ಕಾಲೇಜುಗಳಲ್ಲಿ ಯುವ ಮತದಾರರನ್ನು ನೊಂದಾಯಿಸಿಕೊಳ್ಳಲು ಅರ್ಜಿಗಳನ್ನು ವಿತರಿಸಲಾಗಿದೆ. ಆಯಾ ಕಾಲೇಜುಗಳ ಪ್ರಾಂಶುಪಾಲರು ಮುತುವರ್ಜಿವಹಿಸಿ ಯುವ ಮತದಾರರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರಿ ಪಪೂ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದ ವಿದ್ಯಾರ್ಥಿ ಪ್ರಕಾಶ ದತ್ತು ಗೌಳಿ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ವೀಕ್ಷಿಸಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಚುನಾವಣಾ ವ್ಯವಸ್ಥೆಯ ಸುಧಾರಣೆಗಳು ಪಠ್ಯವಿದ್ದು, ಅದರಲ್ಲಿ ಮತಯಂತ್ರಗಳ ಮಾಹಿತಿ ನೀಡಲಾಗಿದೆ. ಇಂದು ಪ್ರತ್ಯಕ್ಷವಾಗಿ ನಕಲು ಮತದಾನ ಮಾಡುವ ಮೂಲಕ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ವೀಕ್ಷಿಸಿರುವುದು ಉಪಯುಕ್ತವಾಗಿದೆ ಎಂದರು.
ಮತದಾರರ ಯಾದಿಯಲ್ಲಿ ನನ್ನ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲು ಅನುಕೂಲವಾಗಿದೆ ಎಂದು ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿ ಅಮ್ರಿನ್ ಶೇಖ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.