ಮಾಲಿಕಯ್ಯ ರಿಂದ ಬಿಜೆಪಿಗೆ ಆನೆ ಬಲ

Team Udayavani, May 11, 2018, 11:20 AM IST

gul-3.jpg

ಅಫಜಲಪುರ: ದೇಶಾದ್ಯಂತ ಮೋದಿ ಅಲೆಯಲ್ಲಿ ಬಿಜೆಪಿ ಅಮೋಘ ಗೆಲುವು ಸಾಧಿಸುತ್ತಾ ಸರ್ಕಾರ ರಚಿಸುತ್ತಿದೆ, ಈಗ ಕರ್ನಾಟಕದಲ್ಲೂ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. ಹೈಕ ಭಾಗದಲ್ಲಿ ಮಾಲಿಕಯ್ಯ ಪಕ್ಷಕ್ಕೆ ಬಂದಿದ್ದು ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶಹನವಾಜ್‌ ಹುಸೇನ್‌ ಹೇಳಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಗುರುವಾರ ನಡೆದ ಬೈಕ್‌ ರ್ಯಾಲಿಯಲ್ಲಿ ಪಾಲ್ಗೊಂಡು, ಪಟ್ಟಣದ ನಿಚೇ ಗಲ್ಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಲಿಕಯ್ಯ ಗುತ್ತೇದಾರ ಒಬ್ಬ ಹಿರಿಯ ರಾಜಕಾರಣಿ. ಆರು ಬಾರಿ ಗೆದ್ದಿದ್ದಾರೆ, ಅಂಥವರನ್ನು ಹೇಗೆ ನಡೆಸಿಕೊಳ್ಳಬೇಕೆಂಬ ಪರಿಜ್ಞಾನ ಕಾಂಗ್ರೆಸ್‌ ಪಕ್ಷಕ್ಕಿರಲಿಲ್ಲ, ಅಲ್ಲದೆ ಅವರನ್ನು
ಕಡೆಗಣಿಸಿದ ಕಾಂಗ್ರೆಸ್‌ನ್ನು ಇಲ್ಲಿನ ಮತದಾರರು ಕಡೆಗಣಿಸಲಿದ್ದಾರೆ ಎಂದರು.

ಮಾಲಿಕಯ್ಯ ನಾಯಕತ್ವದಲ್ಲಿ ಅವರಿಗೆ ನೀಡಿದ ಜವಾಬ್ದಾರಿಯ 24 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮಾಲಿಕಯ್ಯ ಅವರನ್ನು ಗೆಲ್ಲಿಸಿದರೆ ನಾನು ಮತ್ತೂಮ್ಮೆ ಅಫಜಲಪುರಕ್ಕೆ ಬಂದು ನಿಮಗೆಲ್ಲ ಧನ್ಯವಾದ ಹೇಳಲಿದ್ದೇನೆ ಎಂದರು. ಬಿಜೆಪಿ ಅಲ್ಪಸಂಖ್ಯಾತರನ್ನು ಕಡೆಗಣಿಸುವ ಪಕ್ಷವಲ್ಲ, ದೇಶ ದ್ರೋಹಿಗಳನ್ನು ವಿರೋಧಿಸುತ್ತದೆ. ನಾನು ಅಲ್ಪಸಂಖ್ಯಾತನಾಗಿದ್ದರೂ ನನಗೆ ಸಚಿವ ಸ್ಥಾನ ನೀಡಿತ್ತು ಎಂದರು.

ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಬಿಜೆಪಿ ಅಲ್ಪಸಂಖ್ಯಾತರನ್ನು ಕಡೆಗಣಿಸಿಲ್ಲ, ನಾನು ಕೂಡ ನಿಮ್ಮನ್ನು ಯಾವತ್ತು ಕಡೆಗಣಿಸಲ್ಲ. ತಾಲೂಕಿನಾದ್ಯಂತ ಮತದಾರರು ಗೊಂದಲದಲ್ಲಿದ್ದರು. ಮತದಾರರ ಗೊಂದಲ ಶಹನವಾಜ್‌ ಹುಸೇನ್‌ ಆಗಮನದಿಂದ ದೂರವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಮತ್ತು ನನ್ನನ್ನು ತಾಲೂಕಿನ ಮತದಾರರು ಗೆಲ್ಲಿಸಿದರೆ ಮುಸ್ಲಿಂ ಸಮುದಾಯದ ಮೇಲೆ ಒಂದೂ ಹಲ್ಲೆ ಪ್ರಕರಣವಾಗಲು ಬಿಡುವುದಿಲ್ಲ, ಎಲ್ಲರೂ ಒಂದಾಗಿ ಅಣ್ಣ ತಮ್ಮಂದಿರಂತೆ ಇರೋಣ ಎಂದರು.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ನನ್ನ ಮೇಲೆ ಆರೋಪ ಮಾಡುವ ಅರುಣಕುಮಾರ ಪಾಟೀಲ ಅವರು ಅವರ ಚಿಕ್ಕಪ್ಪ ಎಸ್‌.ವೈ. ಪಾಟೀಲ ಅವರೊಂದಿಗೆ ಸೇರಿಕೊಂಡು ಅಕ್ರಮ ಮರಳುಗಾರಿಕೆ ಮಾಡುತ್ತಿದ್ದಾರೆ. ಬೇಕಿದ್ದರೆ ಅವರಿಗೂ ನನಗೂ ಮಂಪರು ಪರೀಕ್ಷೆ ಮಾಡಿಸಲಿ. ಸತ್ಯ ತಾನಾಗೇ ಗೊತ್ತಾಗುತ್ತದೆ ಎಂದರು.

ಮಂಡಲ ಅದ್ಯಕ್ಷ ಸೂರ್ಯಕಾಂತ ನಾಕೇದಾರ, ನಿತೀನ್‌ ಗುತ್ತೇದಾರ, ಗೋವಿಂದ ಭಟ್‌, ಜ್ಯೋತಿ ಪಾಟೀಲ, ಸುನೀಲ ಶೆಟ್ಟಿ, ಧಾನು ಪತಾಟೆ, ಸಚೀನ್‌ ರಾಠೊಡ, ಬಸವರಾಜ ಮಲಘಾಣ, ಶಿವು ಘಾಣೂರ, ಅಮೀರ್‌ ಬೀ ಶೇಕ್‌, ಮಂಜೂರ್‌ ಅಹ್ಮದ್‌, ಶಾಮರಾವ್‌ ಪ್ಯಾಟಿ, ಅರವಿಂದ್‌ ಹಾಳಕಿ, ಶಂಕು ಮ್ಯಾಕೇರಿ, ಪಾಶಾ ಮಣೂರ, ಅನ್ವರ ಶೇಕ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.