ಪಕ್ಷ ಸಂಘಟನೆಗೆ ಒತ್ತು ನೀಡಿ: ಡಾ| ಶೈಲಜಾನಾಥ


Team Udayavani, Aug 5, 2017, 1:00 PM IST

05-GUB-2.jpg

ಚಿಂಚೋಳಿ: ರಾಜ್ಯದಲ್ಲಿ 2018ರಲ್ಲಿ ನಡೆಯುವ ವಿಧಾನಸಭೆ ಚುನಾವಣೆ ವಿಶೇಷ ಪ್ರಾಮುಖ್ಯತೆ ಇರುವುದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಹಾಗೂ ಬಲಪಡಿಸಿ ಮತ್ತೂಮ್ಮೆ ಬಿಜೆಪಿಯನ್ನು ಸೋಲಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಕಲಬುರಗಿ ವಿಭಾಗದ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ| ಶೈಲಜಾನಾಥ ಕರೆ ನೀಡಿದರು. 

ಪಟ್ಟಣದ ಗಂಗಮ್ಮ ಭೀಮಶೆಟ್ಟಿ ಪಾಟೀಲ ಕಲ್ಯಾಣಮಂಟಪದಲ್ಲಿ ಶುಕ್ರವಾರ ಚಿಂಚೋಳಿ-ಕೋಡ್ಲಿ-ಕಾಳಗಿ ಬ್ಲಾಕ ಕಾಂಗ್ರೆಸ ಕಾರ್ಯಕರ್ತರು ಸಮಾವೇಶ ಉದ್ಘಾಟಿಸಿ ಅವರು  ಮಾತನಾಡಿದರು. ದೇಶದಲ್ಲಿ ದಲಿತರ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿವೆ ಕೇಂದ್ರ ಬಿಜೆಪಿ ಆಡಳಿತ ವಿಫಲವಾಗಿದೆ ಎಂದು ಹೇಳಿದರು. ಜಿಲ್ಲಾಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ರಾಜ್ಯ ಇಂಧನ ಸಚಿವರ ಮೇಲೆ ಐಟಿ ದಾಳಿ ಹಿಂದೆ ಬಿಜೆಪಿ ಕುತಂತ್ರ ಅಡಗಿದೆ ಇದೊಂದು ದ್ವೇಷ ರಾಜಕಾರಣವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಆಗಿನ ಮುಖ್ಯಮಂತ್ರಿ ಬಿ.ಎಸ್‌
.ಯಡಿಯೂರಪ್ಪ ಜೈಲಿಗೆ ಹೋಗಿರುವುದನ್ನು ರಾಜ್ಯದ ಜನತೆ ಇನ್ನು ಮರೆತಿಲ್ಲ ಎಂದು ಟೀಕಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸದೀಯ ಕಾರ್ಯದರ್ಶಿ ಡಾ|ಉಮೇಶ ಜಾಧವ್‌ ಮಾತನಾಡಿ, ಕಾರ್ಯಕರ್ತರು ಪಕ್ಷವನ್ನು ಬಲಪಡಿಸಬೇಕೆಂದು ನುಡಿದರು. ಮಾಜಿ ಸಚಿವ ವೈಜನಾಥ ಪಾಟೀಲ ಮಾತನಾಡಿ, ಬಿಜೆಪಿ ರಾಜಕೀಯ ಕುತಂತ್ರದಿಂದಾಗಿ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಪರಸ್ಥಿತಿ ನಿರ್ಮಾಣವಾಗಿದೆ ಎಂದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಮಾತನಾಡಿದರು. ಜಿಪಂ ಸದಸ್ಯ ಗೌತಮ್‌ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ, ಎಂ.ಎಸ್‌.ಐ.ಎಲ್‌ ಮಾಜಿ ಅಧ್ಯಕ್ಷ ಡಾ| ವಿಕ್ರಮ ಪಾಟೀಲ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪುರಸಭೆ ಅಧ್ಯಕ್ಷೆ ಇಂದುಮತಿ ದೇಗಲಮಡಿ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಗೋಪಾಲರಾವ್‌ ಕಟ್ಟಿಮನಿ, ಜಗದೀಶಸಿಂಗ್‌ ಠಾಕೂರ, ಬಸವಣ್ಣ ಪಾಟೀಲ, ಅಜೀತ ಪಾಟೀಲ, 
ರವೂಫ ಮಿರಿಯಾಣ ಇದ್ದರು.

ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅನೀಲಕುಮಾರ ಜಮಾದಾರ ಸ್ವಾಗತಿಸಿದರು. ಆರ್‌. ಗಣಪತರಾವ್‌ ನಿರೂಪಿಸಿದರು. ಕೆ.ಎಂ.ಬಾರಿ ವಂದಿಸಿದರು.

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.