ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ
Team Udayavani, Jan 29, 2019, 7:20 AM IST
ಕಲಬುರಗಿ: ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಜಾರಿಗೊಳಿಸುವ ರಾಜ್ಯ ಸರ್ಕಾರ ನಿರ್ಧಾರ ಉತ್ತಮವಾಗಿದ್ದು, ಇದರಿಂದ ಬಡವರು, ಹಿಂದುಳಿದ ಭಾಗಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತೀಕರಣಕ್ಕೆ ಎಲ್ಲರೂ ಒಗ್ಗಿಕೊಂಡಿದ್ದು, ಎಲ್ಲ ಕ್ಷೇತ್ರಗಳಲ್ಲಿ ಇಂಗ್ಲಿಷ್ ಕೌಶಲ್ಯದ ಬೇಡಿಕೆ ಇದೆ. ಈಗಾಗಲೇ ರಾಜ್ಯದ ಅರ್ಧ ಭಾಗಕ್ಕಿಂತ ಹೆಚ್ಚು ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರು ಮಕ್ಕಳು ಹಾಗೂ ಪ್ರಾದೇಶಿಕವಾಗಿ ಹಿಂದುಳಿದ ಹೈದ್ರಾಬಾದ ಕರ್ನಾಟಕ, ಹಳೆ ಮೈಸೂರು ಭಾಗದ ಮಕ್ಕಳು ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಇದು ಶೈಕ್ಷಣಿಕ ಅಸಮತೋಲನಕ್ಕೆ ಕಾರಣವಾಗಿದೆ ಎಂದರು.
ಶೈಕ್ಷಣಿಕ ಅಸಮತೋಲನೆ ನಿವಾರಿಸಲು ಸರ್ಕಾರಿ ಶಾಲೆಗಳಲ್ಲಿ ಕನ್ನಡ ಉಳಿಸಿಕೊಂಡು ಇಂಗ್ಲಿಷ್ ಕಲಿಸುವುದು ಅನಿರ್ವಾಯ ಮತ್ತು ಅಗತ್ಯವಾಗಿದೆ. ಆದರೆ, ಸರ್ಕಾರದ ನಿರ್ಧಾರದ ವಿರುದ್ಧ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು ನಿರ್ಣಯ ತೆಗೆದುಕೊಂಡಿರುವುದು ಸೂಕ್ತವಲ್ಲ. ಈ ಬಗ್ಗೆ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕುಸಿದಿದೆ ಎಂದು ಶಾಲೆಗಳ ವಿಲೀನ ಹಾಗೂ ಮುಚ್ಚುವಿಕೆ ನಡೆಯುತ್ತಿದೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕುತ್ತು ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವುದರಿಂದ ಮಕ್ಕಳನ್ನು ಸೆಳೆಯಬಹುದಾಗಿದೆ. ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಓಡಿಶಾ ಹಾಗೂ ಮಹಾರಾಷ್ಟ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಜಾರಿಯಲ್ಲಿದೆ. ನೆರೆ-ಹೊರೆ ರಾಜ್ಯಗಳಲ್ಲಿ ಅಧ್ಯಯನ ಮಾಡಿ ರಾಜ್ಯದಲ್ಲೂ ಇಂಗ್ಲಿಷ್ ಮಾಧ್ಯಮ ಆರಂಭಿಸಬೇಕು. ಮೊದಲ ಹಂತವಾಗಿ ಹೋಬಳಿಗೊಂದು ಶಾಲೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಈಗ ಕಲಿಸುತ್ತಿರುವ ಇಂಗ್ಲಿಷ್ ಭಾಷಾ ಕಲಿಕಾ ಮಟ್ಟವನ್ನು ಇನ್ನಷ್ಟು ಕ್ರಮಬದ್ಧಗೊಳಿಸಿ ಉತ್ತಮ ಮಾಡಬೇಕು. ಕನ್ನಡ ಹಾಗೂ ಇಂಗ್ಲಿಷ್ ಸಮರ್ಥವಾಗಿ ಬೋಧಿಸಬಲ್ಲ ಶಿಕ್ಷಕರಿಗೆ ತರಬೇತಿಗೆ ಪ್ರತಿ ವರ್ಷ ಹೆಚ್ಚಿನ ಅವಧಿ ಮೀಸಲಿಡಬೇಕು. ಆರ್‌ಟಿಇ ಕಾಯ್ದೆದಡಿ 1.5 ಲಕ್ಷ ಮಕ್ಕಳು ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೆ ವಾರ್ಷಿಕ 11 ಸಾವಿರಕ್ಕೂ ಅಧಿಕ ಅನುದಾನ ನೀಡಲಾಗುತ್ತಿದೆ. ಇದಕ್ಕೆ ಸಮನಾದ ಅನುದಾನವನ್ನು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಬಳಕೆ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಭಾಷಾ ಮಾಧ್ಯಮ ಕುರಿತಂತೆ ಫೆಬ್ರವರಿಯಲ್ಲಿ ರಾಜ್ಯ ಮಟ್ಟದ ವಿಚಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಕಾರಳ್ಳಿ ಶ್ರೀನಿವಾಸ, ಅರ್ಜುನ ಗೊಬ್ಬೂರು, ಜೇತೇಂದ್ರ ಕಾಂಬಳೆ, ಶ್ರೀನಿವಾಸ ಖೇಳಗಿ, ವಿಜಯಕುಮಾರ ಅಂಕಲಗಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.