ಮಂತ್ರಾಲಯದಲ್ಲಿ ಶೀಘ್ರ 33 ಅಡಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ
Team Udayavani, Apr 5, 2018, 4:10 PM IST
ರಾಯಚೂರು: ಮಂತ್ರಾಲಯದ ಹೊರವಲಯದಲ್ಲಿ ಪ್ರತಿಷ್ಠಾಪಿಸಲು ನಿರ್ಮಿಸಿದ 33 ಅಡಿ ಎತ್ತರದ ಏಕಶಿಲಾ ಅಭಯಾಂಜನೇಯ ಮೂರ್ತಿಗೆ ಮಂತ್ರಾಲಯದಲ್ಲಿ ಬುಧವಾರ ಅದ್ದೂರಿ ಸ್ವಾಗತ ದೊರಕಿತು.
ಶ್ರೀಮಠದ ಗೋಶಾಲಾ ಬಳಿಯಿರುವ ಒಂದು ಎಕರೆ ಪ್ರದೇಶದಲ್ಲಿ ಈ ಏಕಶಿಲಾ ಮೂರ್ತಿಯನ್ನು ಪ್ರತಿಷ್ಠಾಪಿಸುವ ಉದ್ದೇಶ ಹೊಂದಿದ್ದು, ಕಳೆದ ಆರು ತಿಂಗಳಿಂದ ಕೆತ್ತನೆ ಕಾರ್ಯ ಆರಂಭಿಸಲಾಗಿತ್ತು. ಬೆಂಗಳೂರಿನ ಕೃಷ್ಣಮೂರ್ತಿ ಎನ್ನುವ ಉದ್ಯಮಿ ಮೂರ್ತಿ ದಾನ ನೀಡಿದ್ದಾರೆ. ಬಿಡದಿ ಸಮೀಪದ ಶಿಲ್ಪಾಕಲಾ ಕೇಂದ್ರದಲ್ಲಿ ಮೈಸೂರು ಮೂಲದ ಅಶೋಕ ಗುಡಿಹಾರ ನೇತೃತ್ವದಲ್ಲಿ 10 ಜನ ಶಿಲ್ಪಿಗಳು ಮೂರ್ತಿ ಕೆತ್ತನೆ ಮಾಡಿದ್ದಾರೆ. 90 ಟನ್‌ಗೂ ಅಧಿಕ ಭಾರದ ಮೂರ್ತಿಯನ್ನು 88 ಚಕ್ರಗಳ ಬೃಹದಾಕಾರದ ಲಾರಿಯಲ್ಲಿ ತರಲಾಗಿದೆ.
ಈ ವೇಳೆ ಆಶೀರ್ವಚನ ನೀಡಿದ ಶ್ರೀಮಠದ ಪೀಠಾ ಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಮಂತ್ರಾಲಯ ಬೃಹದಾಕಾರದಲ್ಲಿ ಬೆಳೆಯುತ್ತಿದೆ. ಈ ಅಭಯಾಂಜನೇಯ ಮೂರ್ತಿಯನ್ನು ಗೋಶಾಲೆ ಬಳಿ ಪ್ರತಿಷ್ಠಾಪಿಸಲಾಗುವುದು. ಅದೊಂದು ಧಾರ್ಮಿಕ ಕೇಂದ್ರವಾಗುವ ವಿಶ್ವಾಸವಿದೆ. ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಅದೊಂದು ಪ್ರೇಕ್ಷಣೀಯ ಸ್ಥಳವಾಗಲಿದೆ. ಅಲ್ಲಿ ಲ್ಯಾಂಡ್ ಸ್ಕೇಪ್ ನಿರ್ಮಿಸಿ, ಸುತ್ತಲೂ ನೀರಿನ ಕೊಳ ನಿರ್ಮಿಸುವ ಉದ್ದೇಶವಿದೆ. ಶೀಘ್ರದಲ್ಲೇ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.