Eshwar Khandre ಕಲ್ಯಾಣದಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ಸ್ಥಾಪನೆ
Team Udayavani, Jul 30, 2024, 1:11 AM IST
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ, ದೇಶ-ವಿದೇಶಗಳಲ್ಲಿರುವ ಸಂಪದ್ಭರಿತ ಮಾನವ ಸಂಪನ್ಮೂಲವನ್ನು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಅದರ ಸಾಮರ್ಥ್ಯ ಬಳಸಿಕೊಳ್ಳಲು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದಲ್ಲಿ ಸೋಮವಾರ ನಡೆದ ಶರಣಬಸವ ವಿಶ್ವವಿದ್ಯಾಲಯದ 7ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ 59ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಭಾಗದಲ್ಲಿ ಮಾನವ ಸಂಪನ್ಮೂಲ ಸಮೃದ್ಧವಾಗಿದೆ ಹಾಗೂ ಅದಕ್ಕೆ ಅವಕಾಶಗಳ ಕೊರತೆಯಿಂದ ಹಿಂದುಳಿಯುವಂತಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಮತ್ತು ತಾಂತ್ರಿಕ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರತಿಭೆ ಬಹಿರಂಗಪಡಿಸಲು ಉತ್ತಮ ಅವಕಾಶಗಳ ಹುಡುಕಾಟದಲ್ಲಿ ದೇಶ-ವಿದೇಶದ ಇತರ ನಗರಗಳಿಗೆ ಸ್ಥಳಾಂತರಗೊಂಡಿದ್ದಾರೆ. ಈ ದೇಶ ವಿದೇಶಗಳಲ್ಲಿ ನಮ್ಮ ಮಾನವ ಸಂಪನ್ಮೂಲ ಸ್ಥಳಾಂತರಗೊಳ್ಳುವ ಪ್ರಕ್ರಿಯೆ ತಡೆಗಟ್ಟುವ ತುರ್ತು ಅವಶ್ಯಕತೆಯಿದೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಕೈಗಾರಿಕಾ ವಲಯದಲ್ಲಿ ಹೂಡಿಕೆ ಉತ್ತೇಜಿಸಲು ಈ ಪ್ರದೇಶದ ಮಾನವ ಸಂಪನ್ಮೂಲಗಳಿಗೆ ಉದ್ಯೋಗದ ಮಾರ್ಗ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.