71 ವರ್ಷದಲ್ಲಿ ಆಗಿಲ ನಿರೀಕ್ಷಿತ ಸಾಧನೆ


Team Udayavani, Aug 16, 2017, 10:28 AM IST

gulbarga.jpg

ಕಲಬುರಗಿ: ಕಳೆದ 71 ವರ್ಷಗಳಲ್ಲಿ ದೇಶ ಯಾವ ನಿರೀಕ್ಷಿತ ಪ್ರಮಾಣದಲ್ಲಿ ಸಾಧನೆ ಮಾಡಿಬೇಕಾಗಿತ್ತೋ, ಅದನ್ನು ಮಾಡಲು ಸಾಧ್ಯವಾಗಿಲ್ಲ. ಆದರೆ, ಸಾಕಷ್ಟು ಸಾಧನೆಗಳು ಆಗಿವೆ ಎನ್ನುವುದನ್ನು ನಾವು ಒಪ್ಪಿಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು. ಇಲ್ಲಿನ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಎಲ್ಲವನ್ನು ಸಾಧಿಸಿ ಬಿಟ್ಟಿದ್ದೇವೆ ಎನ್ನುವುದಕ್ಕೆ ಸಾಧ್ಯವಿಲ್ಲ. ಆದರೆ, ಇದೆಲ್ಲವನ್ನು ಸಾಧಿಸಿದ್ದೇವೆ, ಮಾಡಿದ್ದೇವೆ. ಅಭಿವೃದ್ಧಿಯಾಗಿದೆ ಎಂದು ಹೇಳಿಕೊಳ್ಳುವ ಸಮಯ ಇದಾಗಿದೆ. ಇವತ್ತು ಪ್ರಜಾಪ್ರಭುತ್ವ ಉಳಿದುಕೊಂಡಿದೆ ಎನ್ನುವುದಾದ್ರೆ, ರಾಜಕಾರಣ ನಡೆಯುತ್ತಿದೆ ಎನ್ನುವುದಾದ್ರೆ ಮತ್ತು ಜನರಿಗೆ ಅವರ ಇಚ್ಛೆಯಂತೆ ಎಲ್ಲವೂ ಸಿಗುತ್ತಿದೆ ಎಂದಾದರೆ ಅಲ್ಲಿ ಸಾಧನೆಯಾಗಿದೆ ಎಂತಲೇ ಅರ್ಥ. ಅದನ್ನು ನಾವು 90ರಿಂದ 100 ವರ್ಷದ ಹಿರಿಯರನ್ನು ಕೇಳಬೇಕಾಗುತ್ತದೆ. ನಿಮ್ಮ ಕಾಲದಲ್ಲಿ ಹೇಗಿತು, ಈಗ ಹೇಗಿದೆ ಎಂದು ಕೇಳಿದಾಗ ಅವರು ಹೇಳುತ್ತಾರಲ್ಲ. ಅದು ನಮ್ಮ ಸಾಧನೆಗೆ ಉತ್ತರ ಮತ್ತು ಗುರಿಯ ಸೌಧ ಎಂದರು. 1947ರಲ್ಲಿ ಉದ್ದೇಶವಿತ್ತು: 1947ರಲ್ಲಿ ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡಿದ ಹುತಾತ್ಮರಲ್ಲಿ ಸ್ವಾತಂತ್ರ್ಯ ಸಿಗುತ್ತದೆಯೋ ಇಲ್ಲವೋ ಎನ್ನುವ ಭರವಸೆ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ಸ್ವಾಭಿಮಾನ, ದೇಶಾಭಿಮಾನ, ಪ್ರಾಮಾಣಿಕತೆ ಹಾಗೂ ಒಂದು ದೊಡ್ಡ ಉದ್ದೇಶವಂತೂ ಇತ್ತು. ಅದಕ್ಕಾಗಿ ಹಲವಾರು ಮಹನೀಯರು ತಮ್ಮ ನೆತ್ತರು ಚೆಲ್ಲಿ ನಮಗೆ ಸ್ವಾತಂತ್ರ್ಯ ಗಳಿಸಿಕೊಟ್ಟಿದ್ದಾರೆ. ಗುಲಾಮಗಿರಿಯಿಂದ ನಮ್ಮನ್ನು ಮುಕ್ತರನ್ನಾಗಿಸಿದ್ದಾರೆ ಎಂದರು. ಸಹೋದರತ್ವ, ಸೌಹಾರ್ದತೆ ಮತ್ತು ಸ್ವಾಭಿಮಾನ, ದೇಶಾಭಿಮಾನದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ. ಮಹಾತ್ಮಾ ಗಾಂಧೀಜಿ, ನೆಹರು, ಲಾಲಬಹದ್ದೂರ್‌ ಶಾಸ್ತ್ರೀ, ಭಗತ್‌ಸಿಂಗ್‌, ಸುಭಾಷಚಂದ್ರ ಭೋಸ್‌ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ನೆನಪಾಗುತ್ತಾರೆ. ಅವರ ಸ್ಮರಣೆ ನಮ್ಮಲ್ಲಿ ದೇಶಾಭಿಮಾನ ಉಕ್ಕುವಂತೆ ಮಾಡಬೇಕು. ಇಂದಿನ ಯುವಕರಲ್ಲಿ ಇದು ಪ್ರಜ್ವಲಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು. ಧಜ್ವ ಹಿಡಿದರಷ್ಟೆ ಅಲ್ಲ: ಕೇವಲ ಧ್ವಜ ಹಿಡಿದು ಓಡಾಡುವುದು, ಕೂಗಾಡುವುದರಿಂದ ದೇಶಾಭಿಮಾನ ಹೆಚ್ಚಾಗುವುದಿಲ್ಲ. ಯಾವುದೋ ಒಂದು ಭಾವನೆ ಕೆರಳಿಸಿಕೊಂಡು ಹೊರಟು ನಿಲ್ಲುವುದರಿಂದ ದೇಶ ಬೆಳೆಯುವುದಿಲ್ಲ. ನಮ್ಮ ನಡೆ ನುಡಿಗಳಲ್ಲಿ, ಆಚಾರ, ವಿಚಾರಗಳಲ್ಲಿ ದೇಶಾಭಿಮಾನ ಇರಬೇಕು. ನಮ್ಮವರನ್ನು ಪ್ರೀತಿಯಿಂದ ಕಾಣುವ ಗುಣಬೇಕು. ಕೇವಲ ರಾಜಕಾರಣಿಗಳಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಇದಕ್ಕೆ ಎಲ್ಲರೂ ಬೇಕು. ಮನುಷ್ಯತ್ವದಿಂದ, ಸ್ವಾಭಿಮಾನದಿಂದ ದೇಶ ರಕ್ಷಣೆ ಹೊಣೆ ಹೊರಬೇಕು ಎಂದರು. ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಹಲವಾರು ಅಭಿವೃದ್ಧಿಗಳಾಗಿವೆ. ಹಸಿದ ಹೊಟ್ಟೆಗಳು ತುಂಬುತ್ತಿವೆ. ಬರಗಾಲದಲ್ಲೂ ಗುಳೆಹೋಗದಂತೆ ರೈತರಿಗೆ, ಕೃಷಿಕೂಲಿ ಕಾರ್ಮಿಕರಿಗೆ, ದುಡಿಯವ ವರ್ಗಕ್ಕೆ ಅನ್ನ ದೊರೆಯುವಂತೆ ಮಾಡಲಾಗಿದೆ. ನೀರಾವರಿ ಯೋಜನೆಗಳಿಗೆ ಹಣ ನೀಡಿ ಕಾಯಕಲ್ಪ ಮಾಡಲಾಗಿದೆ. ಆರೋಗ್ಯ ವಿಚಾರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಕಲಬುರಗಿಯಲ್ಲಿ ಟ್ರಾಮಾ ಸೆಂಟರ್‌ ಆರಂಭಿಸಲಾಗುವುದು. ಅಲ್ಲದೆ, ಮುಲ್ಲಾಮಾರಿ, ಗಂಡೋರಿ ನಾಲೆಗಳ ಆಧುನೀಕರಣ ಮಾಡಲಾಗುತ್ತಿದೆ. ಶೀಘ್ರವೇ ಕಲಬುರಗಿಗೆ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು ಎಂದರು. ಶಾಸಕ ಶರಣಪ್ಪ ಮಟ್ಟೂರ್‌, ದಕ್ಷಿಣ ಮತ ಕ್ಷೇತ್ರ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್‌, ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಡಿಎ ಅಧ್ಯಕ್ಷ ಅಸಗರ್‌ ಚುಲಬುಲ್‌, ಮೇಯರ್‌ ಶರಣಕುಮಾರ ಮೊದಿ, ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರು, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಪ್ರಾದೇಶಿಕ ಆಯುಕ್ತ ಹರ್ಷಾ ಗುಪ್ತಾ, ಐಜಿಪಿ ಅಲೋಕಕುಮಾರ, ಜಿಲ್ಲಾಧಿಕಾರಿ ವೆಂಕಟೇಶಕುಮಾರ, ಪಾಲಿಕೆ ಆಯುಕ್ತ ಸುನೀಲಕುಮಾರ, ಜಿಪಂ ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ, ಐಎಎಸ್‌ ಅಧಿಕಾರಿ ಡಾ| ರಾಘಪ್ರಿಯಾ, ಎಸ್ಪಿ ಎನ್‌.ಶಶಿಕುಮಾರ,ಐಎಎಸ್‌ ಪ್ರೋಭೆಷನರಿ ಆಕೃತಿ ಸಾಗರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ, ಡಿವೈಎಸ್ಪಿ ಜಾಹ್ನವಿ ಹಾಗೂ ಇನ್ನಿತರ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಶಾಲೆಗಳ ವಿದ್ಯಾರ್ಥಿನಿಯರು, ಶಿಕ್ಷಕರು ಹಾಜರಿದ್ದರು 

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

3

Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.