ಕಲಬುರಗಿ: ಸೊನ್ನ ಬ್ಯಾರೇಜ್ ನಿಂದ 2,500 ಕ್ಯೂಸೆಕ್ಸ್ ನೀರು ಬಿಡುಗಡೆ ; ರೈತರಿಗೆ ಎಚ್ಚರಿಕೆ
Team Udayavani, Jul 6, 2020, 8:13 PM IST
ಕಲಬುರಗಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್ ಗೆ ನೀರಿನ ಒಳ ಹರಿವು ಹೆಚ್ಚಾಗಿದೆ.
ಈ ಕಾರಣದಿಂದಾಗಿ ಸೋಮವಾರ ಬ್ಯಾರೇಜ್ ನಿಂದ 2,500 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.
ಬ್ಯಾರೇಜ್ ಗೆ ನೀರಿನ ಒಳ ಹರಿವಿನ ಪ್ರಮಾಣ 2500 ಕ್ಯೂಸೆಕ್ಸ್ ಇದ್ದು, ಅಷ್ಟೆ ಪ್ರಮಾಣದ ನೀರನ್ನು ಇದೀಗ ನದಿಗೆ ಬಿಡಲಾಗುತ್ತಿದೆ. ಹಾಗಾಗಿ, ನದಿ ದಂಡೆಯ ಇಕ್ಕೆಲಗಳಲ್ಲಿ ವಾಸವಾಗಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ನದಿ ಭಾಗಕ್ಕೆ ಹೋಗಲು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್.ಕಲಾಲ್ ಅವರು ಈ ಮೂಲಕ ರೈತರಿಗೆ ಸೂಚಿಸಿದ್ದಾರೆ.
ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿಎಂಸಿ. ಇದ್ದು, ಸೋಮವಾರ ಬೆಳಿಗ್ಗೆ 2.8 ಟಿ.ಎಂ.ಸಿ. ನೀರು ಸಂಗ್ರಹಗೊಂಡಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ನೀರಿನ ಸಂಗ್ರಹಣೆ ಪ್ರಮಾಣ ಹೆಚ್ಚಿದೆ. ಕಳೆದ ವರ್ಷದ ಆಗಸ್ಟ್ 2ನೇ ವಾರದಲ್ಲಿ ಈ ಪ್ರಮಾಣದ ನೀರು ಬ್ಯಾರೇಜ್ ನಲ್ಲಿ ಸಂಗ್ರಹವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಆಗ ನೀರಿನ ಒಳಹರಿವು ಇನ್ನೂ ಹೆಚ್ಚಾಗಲಿದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ 2,500 ಕ್ಯೂಸೆಕ್ಸ್ ನೀರು ನದಿಗೆ ಹರಿಸಲಾಗಿದೆ ಎಂಬ ಮಾಹಿತಿಯೂ ಲಭಿಸಿದೆ.
ಇದಲ್ಲದೆ 3.5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯವಿರುವ ಮೂರು ಘಟಕಗಳ ಪೈಕಿ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.