ಕಲಬುರಗಿ ಸೋಂಕು ಪೀಡಿತ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದವರ ಮೇಲೂ ನಿಗಾ
Team Udayavani, Mar 14, 2020, 12:35 PM IST
ಕಲಬುರಗಿ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚಿದವರ ಸಂಖ್ಯೆ ಏರಿಕೆಯಾಗಿದ್ದು, 71 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಇವರಲ್ಲಿ ಹೈ-ರಿಸ್ಕ್ ನ ನಾಲ್ವರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಇಎಸ್ಐ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರದವರಗೆ ಕುಟುಂಬದವರು ಹಾಗೂ ನಾಲ್ವರು ಆಸ್ಪತ್ರೆಯ ಸೇರಿ ಒಟ್ಟು 46 ಜನರ ಮೇಲೆ ನಿಗಾ ವಹಿಸಲಾಗುತ್ತಿತ್ತು. ಈಗ ಸೋಂಕಿತ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರನ್ನೂ ಪತ್ತೆ ಹೆಚ್ಚಿ ಅವರನ್ನೂ ಮನೆಯಲ್ಲಿಟ್ಟು ನಿಗಾ ವಹಿಸಲಾಗುತ್ತಿದೆ ಎಂದರು.
ನಾಲ್ವರು ಶಂಕಿತರ ರಕ್ತ, ಕಫದ ಪರೀಕ್ಷೆಗಾಗಿ ಲ್ಯಾಬ್ ಕಳುಹಿಸಲಾಗಿದೆ. ಇನ್ನೂ ವರದಿ ಬಂದಿಲ್ಲ. ವರದಿಗಾಗಿ ಕಾಯುತ್ತಿದ್ದೇವೆ. ಇವರಲ್ಲಿ ಒಬ್ಬರು ಮಹಿಳೆಯರು, ಓರ್ವ ಪುರುಷ ಹಾಗೂ ಒಬ್ಬ ಐದು ವರ್ಷದ ಮಗುವಿದ್ದೇನೆ. ಇವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದರು.
ಮಾಹಿತಿ ಕೊಡುತ್ತಿಲ್ಲ: ಮೃತನ ನೇರ ಸಂಪರ್ಕ ಹಾಗೂ ಎರಡನೇ, ಮೂರನೇ ಸಂಪರ್ಕದಲ್ಲಿದವರ ಪತ್ತೆಗೆ ಶ್ರಮಿಸಲಾಗುತ್ತಿದೆ. ಆದರೆ, ಕೊರೊನಾ ಸೋಂಕಿನ ಭಯದಿಂದ ಮೃತನ ಕುಟುಂಬಸ್ಥರು ಹಾಗೂ ಆತನ ಸಂಪರ್ಕದಲ್ಲಿ ಇದ್ದರು ಸರಿಯಾದ ಮಾಹಿತಿ ಕೊಡುತ್ತಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.