ಹಿಂಗಾರು ಬಿತ್ತನೆ ಕಾರ್ಯದಲ್ಲಿ ಕೃಷಿಕರು
Team Udayavani, Oct 28, 2021, 10:59 AM IST
ಚಿಂಚೋಳಿ: ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಅತಿ ಹೆಚ್ಚು ಮಳೆ ಸುರಿದ ಪರಿಣಾಮದಿಂದ ಮುಂಗಾರು ಬೆಳೆಯ ಹಾನಿ ಅನುಭವಿಸಿದ ರೈತರು ಇದೀಗ ಹಿಂಗಾರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.
ತಾಲೂಕಿನ ಐನಾಪುರ, ಸುಲೇಪೇಟ, ಕೋಡ್ಲಿ, ರಟಕಲ್, ನಿಡಗುಂದಾ, ಮಿರಿಯಾಣ, ಕುಂಚಾವರಂ, ವೆಂಕಟಾಪುರ, ಚಿಮ್ಮನಚೋಡ, ಗಡಿಕೇಶ್ವಾರ, ಕನಕಪುರ,ದೇಗಲಮಡಿ, ಸಾಲೇಬೀರನಳ್ಳಿ, ಹಸರಗುಂಡಗಿ, ಶಿರೋಳಿ, ಶಾದೀಪುರ, ನಾಗಾಇದಲಾಯಿ, ಚಂದನಕೇರಾ, ಗಡಿಲಿಂಗದಳ್ಳಿ, ಬಸಂತಪುರ ಗ್ರಾಮಗಳಲ್ಲಿ ಹಿಂಗಾರು ಜೋಳ, ಕಡಲೆ ಬೀಜಗಳನ್ನು ಬಿತ್ತನೆ ಮಾಡುವ ಕಾರ್ಯದಲ್ಲಿ ರೈತರು ತೊಡಗಿದ್ದಾರೆ.
ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಆಗಿರುವುದರಿಂದ ಕೆಲವು ಹೊಲಗಳಲ್ಲಿ ಇನ್ನು ಮಳೆ ನೀರು ಹಾಗೇ ನಿಂತುಕೊಂಡಿದೆ. ಇನ್ನು ಭೂಮಿಗಳು ಬಿಸಿಲಿನಿಂದ ಆರಿಲ್ಲ, ಹೆಚ್ಚು ಮಳೆ ಆಗಿರುವುದರಿಂದ ಹೊಲಗಳಲ್ಲಿ ಹುಲುಸಾಗಿ ಹುಲ್ಲು ಬೆಳೆದಿದೆ. ಅದನ್ನು ಕೊಯ್ಯುವ ಕಾರ್ಯದಲ್ಲಿ ರೈತರು ತೊಡಗಿದ್ದಾರೆ. ತಗ್ಗು ಪ್ರದೇಶದ ಜಮೀನುಗಳು ಮಳೆ ನೀರಿನಿಂದ ಕೆಸರಾಗಿದ್ದು, ಬಿತ್ತನೆಗೆ ಬಾರದಂತಾಗಿವೆ.
ಇದನ್ನೂ ಓದಿ: ಎನ್‌ಇಪಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಪ್ರಮುಖ
ಜೋಳ, ಕಡಲೆ ಬೀಜಗಳನ್ನು ರೈತರು ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಮಾಡಲಿದ್ದಾರೆ. ಏಕೆಂದರೆ ಮಳೆಯಿಂದಾಗಿ ಹೆಸರು, ಉದ್ದು, ಸೋಯಾಬಿನ್ ಬೆಳೆಗಳ ಹೂವು ಕಾಯಿ ಬಿಡುವ ಹಂತದಲ್ಲಿ ಮತ್ತು ಕಾಯಿ ರಾಶಿ ಮಾಡುವ ಸಂದರ್ಭದಲ್ಲಿ ಅತಿ ಹೆಚ್ಚಿನ ಮಳೆ ಸುರಿದ್ದರಿಂದ ರೈತರು ರಾಶಿ ಮಾಡದೇ ಹೊಲದಲ್ಲಿಯೇ ಬಿಟ್ಟಿದ್ದಾರೆ. ಹೀಗಾಗಿ ಹೆಚ್ಚು ಪ್ರದೇಶದಲ್ಲಿ ಜೋಳ, ಕಡಲೆ ಬಿತ್ತನೆ ಕಾರ್ಯ ನಡೆಯಲಿದೆ. ಕೃಷಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಕಡಲೆ, ಜೋಳ ಮತ್ತು ರಸಗೊಬ್ಬರ ಖರೀದಿಸಿದ್ದಾರೆ.
ಐನಾಪುರ, ಚಿಂಚೋಳಿ, ಕೋಡ್ಲಿ, ಸುಲೇಪೇಟ, ಕುಂಚಾವರಂ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಸಂಗ್ರಹಣೆ ಮಾಡಿರುವುದರಿಂದ ರೈತರಿಗೆ ಯಾವುದೇ ಬೀಜದ ಕೊರತೆಯಿಲ್ಲ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೊಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.