ನಮ್ ಹೆಣದ್ ಮ್ಯಾಲ್ ಕಾರ್ಖಾನೆ ಕಟ್ರಿ : ಶ್ರೀ ಸಿಮೆಂಟ್ ಕಾರ್ಖಾನೆ ವಿರುದ್ಧ ರೈತರ ಆಕ್ರೋಶ
Team Udayavani, Mar 30, 2022, 4:02 PM IST
ಸೇಡಂ : ನಮ್ಮೂರಿಗಿ ಬರ ನಲ್ಲಿ ನೀರಾಗ ವಿಷ ಹಾಕ್ರಿ. ಎಲ್ಲೋರ್ ಕುಡ್ದು ಸಾಯ್ತೀವಿ. ನಮ್ ಹೆಣದ್ ಮ್ಯಾಲ್ ಸಿಮೆಂಟ್ ಫ್ಯಾಕ್ಟ್ರಿ ಕಟ್ರಿ… ಇದು ಶ್ರೀ ಸಿಮೆಂಟ್ ಕಾರ್ಖಾನೆ ವಿರುದ್ಧ ರೈತರು ದಂಗೆ ಎದ್ದು ಆಕ್ರೋಶ ವ್ಯಕ್ತಪಡಿಸಿದ ಪರಿ.
ಕೆಲ ವರ್ಷಗಳ ಹಿಂದಷ್ಟೇ ತಾಲೂಕಿನ ಕೋಡ್ಲಾ-ಬೆನಕನಹಳ್ಳಿ ಸಿವಾರದಲ್ಲಿ ಶ್ರೀಸಿಮೆಂಟ್ ಕಾರ್ಖಾನೆ ಸ್ಥಾಪಿಸಲಾಗಿ, ಈಗ ಅದಕ್ಕೆ ಹೆಚ್ಚುವರಿ ಕಲ್ಲು ಗಣಿಗಾರಿಕೆ ಪರವಾನಿಗೆ ಸಂಬಂಧ ಬುಧವಾರ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅಧ್ಯಕ್ಷತೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕರೆದ ಸಾರ್ವಜನಿಕ ಸಭೆಯಲ್ಲಿ ರೈತರು ಕಾರ್ಖಾನೆ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಕೆಲ ವರ್ಷಗಳ ಹಿಂದೆ ಬಂದ ಶ್ರೀಸಿಮೆಂಟ್ ಈಗಾಗಲೇ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಈಗಾಗಲೇ ಸುತ್ತಮುತ್ತಲಿನ ಗ್ರಾಮಸ್ಥರು ಉಸಿರಾಟ, ಹೃದಯ ಸಂಬಂಧಿ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಕಾರ್ಖಾನೆಯ ಆಡಳಿತ ಮಂಡಳಿ ಒಂದಾಗಿ ಜನರ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.
ಇದರಿಂದ ಕೆಲಹೊತ್ತು ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಕಾರ್ಖಾನೆಯು ಪರಿಸರ ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾಗಿದೆ. ನೀರು, ಗಾಳಿ ಕಲುಷಿತವಾಗುತ್ತಿದೆ. ರೋಗ ರುಜಿನಗಳು ಗ್ರಾಮಗಳಲ್ಲಿ ತಲೆದೋರಿವೆ. ಭಾರಿ ಪ್ರಮಾಣದ ರಾಸಾಯನಿಕ ಮಿಶ್ರಿತ ಧೂಳು ಹೊರಹಾಕಲಾಗುತ್ತಿದೆ. ರೈತರ ಜಮೀನುಗಳು ಹಾಳಾಗಿದ್ದು, ಬೆಳೆ ನಾಶವಾಗಿವೆ. ಯಾವುದೇ ಕಾರಣಕ್ಕೂ ಹೆಚ್ಚುವರಿ ಗಡಿಗಾರಿಕೆಗೆ ಅವಕಾಶ ನೀಡಬಾರದು ಎಂದು ರೈತರು ಎಚ್ಚರಿಸಿದ್ದಾರೆ.
ಇದನ್ನೂ ಓದಿ : ಜಮ್ಮು-ಕಾಶ್ಮೀರ: ಸಿಸಿಟಿವಿಯಲ್ಲಿ ಸೆರೆ-ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಬಾಂಬ್ ಎಸೆದ ಮಹಿಳೆ
ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾತನಾಡಿ ಜಮೀನು ಕಳೆದು ಕೊಂಡವರಿಗೆ ಸರಿಯಾದ ನೌಕರಿ ನೀಡಿಲ್ಲ. ನೀಡಿದವರಿಗೆ ಸರಿಯಾದ ಸಂಬಳವಿಲ್ಲ. ಸರೋಜಿನಿ ಮಹಿಷಿ ವರದಿ ಪ್ರಕಾರ ನೌಕರಿ ನೀಡದೆ ಕಾನೂನು ಪಾಲಿಸುತ್ತಿಲ್ಲ. ಸಿಎಸ್ಆರ್ ಅಡಿ ಸಣ್ಣ ಪುಣ್ಣ ಕೆಲಸ ಮಾಡಲಾಗಿದೆ. ಕುಡಿವ ನೀರಿನ ಸಮಸ್ಯೆ ಕಂಪನಿ ಪೂರೈಸುತ್ತಿಲ್ಲ ಎಂದು ದೂರಿದರು.
ಮುಖಂಡ ಮುಕ್ರಂಖಾನ್ ಮಾತನಾಡಿ ಪರಿಸರ ಹಾನಿಯಾದರೂ ಸಹ ಮಾಲಿನ್ಯ ನಿಯಂತ್ರಣ ಮಂಡಳಿ ಎಂದೂ ಸಹ ಬಂದಿಲ್ಲ ಎಂದು ಆಕ್ರೋಶಗೊಂಡರು.
ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಮಾತನಾಡಿ, ಇಲ್ಲಿನ ಸಿಮೆಂಟ್ ಕಾರ್ಖಾನೆಗಳಿಂದ ಪ್ರತಿನಿತ್ಯ ನೂರಾರು ಜನ ಅಸ್ತಮಾ, ಅಲರ್ಜಿ, ಹೃದಯರೋಗಕ್ಕೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಗೂ ಗೊತ್ತಿದೆ. ಕಾರ್ಖಾನೆ ಸ್ಥಾಪಿಸುವುದೇ ಆದಲ್ಲಿ ಹೊರದೇಶಗಳಲ್ಲಿ ಇರುವಂತೆ ಶೆಡ್ ನಲ್ಲಿ ಕಾರ್ಖಾನೆ ನಡೆಸಬೇಕು ಎಂದು ಒತ್ತಾಯಿಸಿದರು.
ನಂತರ ಮಾತಮಾಡಿದ ಜಿಲ್ಲಾಧಿಕಾರಿ ಯಶವಂತ ಗುರುಕರ್ ಸರೋಜಿನಿ ಮಹಿಷಿ ವರದಿ ಪ್ರಕಾರ ನೌಕರಿ ಪಡೆಯಬೇಕು. ಜಾಬಕಾರ್ಡ್ ವಾಪಸ್ ಕೊಟ್ಟರೆ ಕಠಿಣ ಕ್ರಮ ಕೈಗೊಳ್ಳುವೆ. ಕಂಪನಿ ಕೊಡುವ ಪಿಪಿಟಿ ನೋಡಿ ಬಕ್ರಾ ಆಗಲ್ಲ. ಪ್ರತಿಯೊಂದು ಜನರ ದೂರು, ಕರಾರುಗಳನ್ನು ವಾಟ್ಸಪನಲ್ಲಿ ಕೊಡ್ತೀನಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.