ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
Team Udayavani, Nov 17, 2018, 11:01 AM IST
ಕಲಬುರಗಿ: ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಮುಂಗಾರು ಬೆಳೆ ನಷ್ಟದ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ರೈತರ ಸಾಲದ ಜೊತೆಗೆ ಕೃಷಿ ಕಾರ್ಮಿಕರ, ಸ್ತ್ರೀ ಶಕ್ತಿ ಸಂಘಗಳ, ನಿರುದ್ಯೋಗಿ ರೈತ ಮಕ್ಕಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು, ಬೆಳೆ ನಷ್ಟ ಪರಿಹಾರವನ್ನು ಕೆಲ ಬ್ಯಾಂಕ್‌ಗಳು ಸಾಲಕ್ಕೆ ವಜಾ ಮಾಡಿಕೊಳ್ಳುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು. ಬರ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕೆಂದು ಒತ್ತಾಯಿಸಿದರು.
ಕೃಷಿ ಕಾರ್ಮಿಕರು ಪಟ್ಟಣಗಳಿಗೆ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಒದಗಿಸಬೇಕು. ಉದ್ಯೋಗ ಖಾತ್ರಿ
ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಪಡಿಸಬೇಕು. ಗ್ರಾಮಗಳ ಜನರಿಗೆ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿವ ನೀರು ಒದಗಿಸಬೇಕು. ಗ್ರಾ.ಪಂ. ಮಟ್ಟದಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅವಶ್ಯವಿದ್ದ ಕಡೆ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು, ಉಚಿತ ಮೇವು ಒದಗಿಸಬೇಕು, ಕುಸಿದಿರುವ
ಅಂತರ್‌ಜಲಮಟ್ಟ ಹೆಚ್ಚಿಸಲು ಕೆರೆ, ಕಾಲುವೆಗಳ ದುರಸ್ತಿ ಹಾಗೂ ಹೂಳೆತ್ತುವ ಕೆಲಸಗಳನ್ನು ಕೈಗೊಳ್ಳಬೇಕು, ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಗುಣಮಟ್ಟ ಖಾತ್ರಿ ಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾ ಸಂಚಾಲಕ ಗಣಪತರಾವ್ ಕೆ. ಮಾನೆ, ದಿವಾಕರ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.