ಬೆಳೆಹಾನಿ ಪರಿಹಾರಕ್ಕೆ ರೈತ ಸಂಘ ಒತ್ತಾಯ
Team Udayavani, Aug 6, 2022, 4:19 PM IST
ಆಳಂದ: ಸತತ ಮಳೆಯಿಂದಾಗಿ ಆದ ಬೆಳೆ ಹಾನಿಗೆ ಪರಿಹಾರ ಒದಗಿಸುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ವಿ.ಕೆ. ಸಲಗರ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿತು.
ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮನಶೆಟ್ಟಿ ಮಾತನಾಡಿ, ಆಳಂದ ಹಾಗೂ ಕಮಲಾಪುರ ತಾಲೂಕಿನಲ್ಲಿ ಮುಂಗಾರಿನಲ್ಲಿ ರೈತರು ಸಾಲಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಕೈಗೊಂಡ ಮೇಲೆ ಸತತ ಮಳೆಯಿಂದಾಗಿ ವಾಣಿಜ್ಯ ಬೆಳೆ ತೊಗರಿ, ಉದ್ದು, ಹೆಸರು ಸೋಯಾ ಹೀಗೆ ಇನ್ನಿತರ ಬೆಳೆ ಸಂಪೂರ್ಣ ಹಾಳಾಗಿದೆ. ಕೂಡಲೇ ಜಿಲ್ಲಾಡಳಿತ ಬೆಳೆಹಾನಿ ವರದಿ ಸಲ್ಲಿಸಿ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಕರೆ 25ಸಾವಿರ ರೂ. ಹಾನಿಯ ಪರಿಹಾರ ನೀಡಬೇಕು. ರೈತರ ಸಾಲಮನ್ನಾ ಮಾಡಬೇಕು. ಹೊಸ ಸಾಲ ನೀಡಬೇಕು ಎಂದು ಒತ್ತಾಯಿಸಿದರು.
ಮುಖಂಡ ಸಂತೋಷಕುಮಾರ, ಶಿವುಕುಮಾರ, ಬಾಬು ವಡೆಯರಾಜ, ಆಳಂದ ತಾಲೂಕಾಧ್ಯಕ್ಷ ಪ್ರಕಾಶ ಮಾನೆ, ಪಾಂಡುರಂಗ ಮಾವೀನಕರ್, ಶಿವಶರಣಪ್ಪ ಧನ್ನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.