ಫಸಲ್ ಬಿಮಾ : ರೈತರ ಗುರುತಿಸಿ
Team Udayavani, Jun 23, 2021, 5:47 PM IST
ಕಲಬುರಗಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಲಾಭ ಪಡೆದುಕೊಳ್ಳುವಂತೆ ಬೀದರ್ ಸಂಸದ ಭಗವಂತ ಖೂಬಾ ರೈತರಿಗೆ ಮನವಿ ಮಾಡಿದ್ದಾರೆ. ನಗರದ ಐವಾನ್-ಇ-ಶಾಹಿ ಅತಿಥಿಗೃಹದಲ್ಲಿ ಮಂಗಳವಾರ ಕಲಬುರಗಿ ಜಿಲ್ಲೆಯ ಬ್ಯಾಂಕ್ ಮ್ಯಾನೇಜರ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಬಗ್ಗೆ ಮಾಹಿತಿ ನೀಡಿ, ಅದರ ಪ್ರಯೋಜನ ತಿಳಿಸಬೇಕು. ಈ ಯೋಜನೆ ಲಾಭ ಪಡೆಯುವಂತಾಗಲು ನೋಂದಣಿಯಾಗದ ರೈತರನ್ನು ಗುರುತಿಸಿ, ನೋಂದಣಿ ಮಾಡಿಸಬೇಕು ಎಂದು ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಬೀದರ ಲೋಕಸಭೆ ವ್ಯಾಪ್ತಿಯಲ್ಲಿರುವ ಆಳಂದ ಮತ್ತು ಚಿಂಚೋಳಿ ತಾಲೂಕುಗಳಲ್ಲಿ ಕಳೆದ ವರ್ಷ ಅತೀ ಕಡಿಮೆ ಫಸಲ್ ಬಿಮಾ ಯೋಜನೆಯಲ್ಲಿ ರೈತರ ನೋಂದಣಿ ಮಾಡಲಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ತಾಲೂಕಿನ ಮ್ಯಾನೇಜರ್‌ಗಳು ಹೆಚ್ಚು ಶ್ರಮವಹಿಸಿ ರೈತರ ನೋಂದಣಿ ಮಾಡಿಸಬೇಕು ಎಂದು ತಾಕೀತು ಮಾಡಿದರು. ಜಿಲ್ಲೆ ಮತ್ತು ತಾಲೂಕಿನ ಎಲ್ಲ ಬ್ಯಾಂಕ್‌ಗಳ ಮುಂದೆ ರೈತರಿಗೆ ಫಸಲ ಬಿಮಾ ಯೋಜನೆ ನೋಂದಣಿ ಮಾಡಲಾಗುವುದು ಎನ್ನುವ ಫಲಕ ಹಾಕಬೇಕು. ಹಳ್ಳಿಗಳಲ್ಲಿ ಯೋಜನೆ ಮೇಳ ಆಯೋಜಿಸಬೇಕು.
ಪ್ರತಿ ತಾಲೂಕಿನಲ್ಲಿ ಎರಡು ವಾಹನಗಳ ಮೂಲಕ ಪ್ರಚಾರ ಮಾಡಬೇಕು. ಇನ್ನಿತರ ಜಾಗೃತಿ ಕಾರ್ಯಕ್ರಮಗಳ ಮೂಲಕ ಯೋಜನೆ ಉದ್ದೇಶ, ಲಾಭವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು. ಪ್ರತಿ ಮನೆ ಬಾಗಿಲಿಗೆ ಕರಪತ್ರ ನೀಡುವ ಮೂಲಕ ಮಾಹಿತಿ ನೀಡಿ ಅ ಧಿಕ ರೈತರು ಈ ಯೋಜನೆಯ ಲಾಭ ಪಡೆಯುವಂತೆ ಬ್ಯಾಂಕ್‌ಗಳ ಸಿಬ್ಬಂದಿ ಕ್ರಮ ನಿರ್ವಹಿಸಬೇಕು. ಪ್ರತಿ ಬ್ಯಾಂಕ್‌ನ ಶಾಖೆಯಲ್ಲಿ ಗ್ರಾಹಕರಾಗಿರುವ ರೈತರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಫಸಲ ಬಿಮಾ ಯೋಜನೆ ಬಗ್ಗೆ ಮಾಹಿತಿ ನೀಡಿ, ಅವರುಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಸೂಕ್ತ ಮಾಹಿತಿ ನೀಡಬೇಕು ಎಂದರು.
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸೂಗೂರು, ಲೀಡ್ ಬ್ಯಾಂಕ್ ಮ್ಯಾನೇಜರ್ ಇಂತೆಸಾರ್ ಹುಸೇನ್, ಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜರ್ ಮುತ್ತುರಾಜ ಹಾಗೂ ತಾಲೂಕಿನ ವಿವಿಧ ಬ್ಯಾಂಕ್ ಮ್ಯಾನೇಜರ್‌ಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.