ಸಮಾಜ ಸಮೃದ್ಧಗೊಳಿಸಿದ್ದು ಫುಲೆ

Team Udayavani, Jan 4, 2018, 11:51 AM IST

gul-7.jpg

ಶಹಾಬಾದ: ವೈಚಾರಿಕ ಚಿಂತನೆ, ತ್ಯಾಗ ಮನೋಭಾವನೆಯಿಂದ ಭಾರತೀಯ ಸಮಾಜವನ್ನು ಸಮೃದ್ಧಗೊಳಿಸಿದ ಸಾವಿತ್ರಿಬಾಯಿ ಪುಲೆ ದೇಶ ಕಂಡ ಮಹಾನ್‌ ಮಹಿಳೆ ಹಾಗೂ ಮೊದಲ ಶಿಕ್ಷಕಿ ಎಂದು ಎಐಎಂಎಸ್‌ಎಸ್‌ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಡಾ|
ಸೀಮಾ ದೇಶಪಾಂಡೆ ಹೇಳಿದರು.

ಬುಧವಾರ ನಗರದ ಆಸ್ಪಲ್ಲಿ ಪ್ರೌಢಶಾಲೆಯಲ್ಲಿ ಎಐಡಿವೈಒ ಸಂಘಟನೆ ವತಿಯಿಂದ ಆಯೋಜಿಸಲಾಗಿದ್ದ ಸಾವಿತ್ರಿಬಾಯಿ ಫುಲೆ ಅವರ 187ನೇ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ಕೇವಲ 13ನೇ ವಯಸ್ಸಿನಲ್ಲಿಯೇ ಮದುವೆಯಾದ ಸಾವಿತ್ರಿಬಾಯಿಗೆ ಅಕ್ಷರ, ಪುಸ್ತಕ ಜ್ಞಾನವಿರಲಿಲ್ಲ. ವಿದ್ಯೆ ಕಲಿಯಬೇಕೆಂಬ ಆಸೆ ಇತ್ತು. ಇವರ ಆಸೆಗೆ ಒತ್ತಾಸೆಯಾಗಿ ನಿಂತವರು ಆ ಕಾಲಕ್ಕೆ ಪ್ರಗತಿಪರ ಚಿಂತನೆಯ ಅವರ ಪತಿ ಜ್ಯೋತಿಬಾ ಫುಲೆ. ಇವರ ಪ್ರೋತ್ಸಾಹ ಮತ್ತು ಪ್ರೇರಣೆಯಿಂದ ಶಿಕ್ಷಣ ಪಡೆದರು. ಆಗಿನ ಬ್ರಿಟಿಷರ ಆಳ್ವಿಕೆಯ ಭಾರತದಲ್ಲಿ ಮೊದಲ ಶಿಕ್ಷಕಿಯ ತರಬೇತಿ ಪಡೆದು 17ನೇ ವಯಸ್ಸಿಗೆ ಶಿಕ್ಷಕಿಯಾದರು ಎಂದರು.

ಮಹಿಳೆ ಸಬಲಳಾಗಬೇಕೆಂದರೆ ಅವಳಿಗೆ ಶಿಕ್ಷಣ ನೀಡುವುದು ಅಗತ್ಯವೆಂದು ಅರಿತು ಶಿಕ್ಷಣ ನೀಡಲು ಪ್ರಾರಂಭಿಸಿದರು ಜ್ಯೋತಿಬಾ. ಆಗ ಪಟ್ಟಭದ್ರರಿಗೆ, ಸಂಪ್ರದಾಯಸ್ಥರು ಇವರ ಕಾರ್ಯ ಸಹಿಸಲಾಗದೇ ಕಾಟ ನೀಡಲು ಪ್ರಾರಂಭಿಸಿದರು. ಆದರೂ ಎದೆಗುಂದದೆ ಬಿಡೇವಾಡದಲ್ಲಿ ಭಾರತದಲ್ಲಿಯೇ ಮೊದಲ ಬಾರಿಗೆ ನಿರ್ಲಕ್ಷಿತ ಬಾಲಕಿಯರಿಗೆ, ಅವಕಾಶ ವಂಚಿತ ಹೆಣ್ಣು ಮಕ್ಕಳಿಗಾಗಿ ಹಾಗೂ ದಿಕ್ಕೆಟ್ಟ ಸ್ತ್ರೀಯರಿಗೆ ಶಾಲೆ ಆರಂಭಿಸಿ ಹೊಸ ಇತಿಹಾಸವನ್ನೇ ಬರೆದರು. ತಳವರ್ಗದ ಅನಕ್ಷರಸ್ಥ ಸಾವಿತ್ರಿಬಾಯಿ ಅಕ್ಷರ ಕಲಿತು, ಶಿಕ್ಷಣವಂಚಿತ ಮಹಿಳೆಯರಿಗೆ ಅಕ್ಷರ ಕಲಿಸಿದ ಕರುಣಾಮಯಿ ಎಂದರು.

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ನಿಂಗಣ್ಣ ಜಂಬಗಿ ಮಾತನಾಡಿ, ಸಾವಿತ್ರಿಬಾಯಿ ಫುಲೆ ಮೇಲ್ಜಾತಿಯಲ್ಲಿ ಜನಿಸಿದವರಲ್ಲ. ಶ್ರೀಮಂತ ಕುಟುಂಬದಿಂದ ಬಂದವರೂ ಅಲ್ಲ. ಆದರೂ ಶೋಷಿತ ಮಹಿಳೆಯರ ಶಿಕ್ಷಣಕ್ಕಾಗಿ, ಮಾನವೀಯ ಸಮಾಜ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟವರು. ಹಾಗಾಗಿಯೇ ಇವತ್ತಿಗೂ ಮಹಾರಾಷ್ಟ್ರದಲ್ಲಿ ಸಾವಿತ್ರಿಬಾಯಿ ಫುಲೆ ಎಂದರೆ ಕ್ರಾಂತಿಯ ಕಿಡಿ ಹೊತ್ತಿಸಿದ ಮಹಾಮಾತೆ ಎಂದು ನೆನೆಯುತ್ತಾರೆ ಎಂದು ಹೇಳಿದರು.

ಎಐಡಿವೈಒ ನಗರ ಅಧ್ಯಕ್ಷ ಜಗನ್ನಾಥ ಎಸ್‌.ಎಚ್‌. ಮಾತನಾಡಿ, ಸಾವಿತ್ರಿಬಾಯಿ ಜೀವನಗಾಥೆ ಶಾಲಾ-ಕಾಲೇಜುಗಳ ಪಠ್ಯವಾಗಬೇಕು ಎಂದರು. ಮುಖ್ಯಶಿಕ್ಷಕಿ ಶೋಭಾ ಅರಳಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ರಮೇಶ ಜೋಗದನಕರ್‌ ನಿರೂಪಿಸಿದರು, ವಿಶ್ವನಾಥ ಸಿಂಘೆ ಸ್ವಾಗತಿಸಿದರು, ಶಿಕ್ಷಕಿ ಶಿಲ್ಪಾ ವಂದಿಸಿದರು.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.