ರೇವನೂರಲ್ಲಿ ಗಾಂಜಾ ಪತ್ತೆ: ವ್ಯಕ್ತಿ ಬಂಧನ
Team Udayavani, Dec 16, 2017, 10:38 AM IST
ಜೇವರ್ಗಿ: ಅಕ್ರಮವಾಗಿ ಹೊಲದಲ್ಲಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಶುಕ್ರವಾರ ಸ್ಥಳೀಯ ಪೊಲೀಸರು ತಾಲೂಕಿನ ರ್ಯಾವನೂರ ಗ್ರಾಮದಲ್ಲಿ ಬಂಧಿಸಿದ್ದಾರೆ. ಹೇಮು ಗಂಗಾರಾಮ ರಾಠೊಡ ಬಂಧಿತ ಆರೋಪಿ. ಈತ ತನ್ನ ಸರ್ವೇ ನಂ.95 ರ ಹೊಲದಲ್ಲಿ ತೊಗರಿ ಬೆಳೆಯ ಮಧ್ಯದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಮಂಜುನಾಥ ಹೂಗಾರ ಹಾಗೂ ಸಿಬ್ಬಂದಿ ದಾಳಿ ನಡೆಸಿ 15 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕು ದಿನಗಳ ನಂತರ ಶವ ಪತ್ತೆ : ಪಟ್ಟಣದ ಬಸ್ ನಿಲ್ದಾಣದ ಮೊದಲ ಮಹಡಿ ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಪಟ್ಟಣದ ಅಖಂಡೇಶ್ವರ ನಗರದ ನಿವಾಸಿ ಈಶಪ್ಪ (30) ಎನ್ನುವಾತ ಕಳೆದ ನಾಲ್ಕು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಶವ ಪತ್ತೆಯಾಗಿದೆ. ಪಿಎಸ್‌ಐ ಮಂಜುನಾಥ ಹೂಗಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.