ಸಿಪಿಐ ಕಚೇರಿಗೆ ಬೆಂಕಿ: ಕ್ರಮಕ್ಕೆ ಒತ್ತಾಯ
Team Udayavani, Jan 5, 2019, 6:26 AM IST
ಕಲಬುರಗಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸಿಪಿಐ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಜ.2 ರಂದು ರಾತ್ರಿ ಪಕ್ಷದ ಕಚೇರಿಗೆ ಬಾಗಿಲು ಒಡೆದು ದಾಖಲೆ ಪತ್ರಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಧ್ವಂಸಗೊಳಿಸಲಾಗಿದೆ ಎಂದು ಆರೋಪಿಸಿದರು.
ಈ ದುಷ್ಕೃತ್ಯಕ್ಕೆ ಕೇರಳದಲ್ಲಿರುವ ವಿದ್ಯಮಾನಗಳೇ ಕಾರಣ. ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರೇ ಇದಕ್ಕೆ ಹೊಣೆಯಾಗಿದ್ದಾರೆ. ಕೂಡಲೇ ಸರ್ಕಾರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಪ್ರಭುದೇವ ಯಳಸಂಗಿ, ಮಹೇಶಕುಮಾರ ರಾಠೊಡ, ಮೌಲಾಮುಲ್ಲಾ, ಎಚ್.ಎಸ್. ಪತಕಿ, ಶರಣಬಸಪ್ಪ ಗಣಜಲಖೇಡ, ಪಾಂಡುರಂಗ ಹಾಗೂ ಇತರ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.