ಪಂಚ ರಾಜ್ಯ ಚುನಾವಣೆ: ಬಿಜೆಪಿ ವಿಜಯೋತ್ಸವ
Team Udayavani, Mar 12, 2017, 1:15 PM IST
ಕಲಬುರಗಿ: ಪಂಚರಾಜ್ಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅದರಲ್ಲೂ ದೇಶದ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶ, ಉತ್ತರಖಂಡಾದಲ್ಲಿ ಜಯಭೇರಿ ಸಾಧಿಸಿದ್ದರಿಂದ ಪಕ್ಷದ ಕಾರ್ಯಕರ್ತರು ಶನಿವಾರ ನಗರದ ಸರ್ದಾರ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.
ಉತ್ತರಪ್ರದೇಶದಲ್ಲಿ ಬಿಜೆಪಿ ಸುನಾಮಿ ರೀತಿಯ ಗೆಲುವು ಸಾಧಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ-ಸಿಹಿ ಹಂಚಿ ಸಂಭ್ರಮಿಸಿದರು. ಪ್ರಧಾನಮಂತ್ರಿ ಅವರ ಅಭಿವೃದ್ಧಿ ಕೆಲಸಕ್ಕೆ ದೇಶದ ಜನತೆ ತಲೆತೂಗಿದ್ದಾರೆ ಎಂಬುದನ್ನು ಫಲಿತಾಂಶ ನಿರೂಪಿಸಿದೆ.
ಕಾಂಗ್ರೆಸ್ ಮುಕ್ತ ಭಾರತಕ್ಕೆ ಮತ್ತೂಂದು ಹೆಜ್ಜೆ ಇಟ್ಟಂತಾಗಿದೆ. ಈ ಗೆಲುವು ಮುಂದಿನ ವರ್ಷ ಚುನಾವಣೆ ನಡೆಯುವ ಕರ್ನಾಟಕ ರಾಜ್ಯದಲ್ಲೂ ಮುಂದುವರಿಯಲಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
ಪಕ್ಷದ ಮುಖಂಡರಾದ ಶಶೀಲ್ ನಮೋಶಿ, ಮಹಾಂತಗೌಡ ಪಾಟೀಲ, ಚಂದು ಪಾಟೀಲ, ನಾಮದೇವ ರಾಠೊಡ ಕರಹರಿ, ಸಂಗಮೇಶ ರಾಜೋಳೆ, ರಾಘವೇಂದ್ರ ಕುಲಕರ್ಣಿ, ಚನ್ನವೀರ ಲಿಂಗನವಾಡಿ, ವಿಜಯಕುಮಾರ ಹಳಕಟ್ಟಿ ಹಾಗೂ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.