ಸಿ.ಟಿ ಸ್ಕ್ಯಾನ್ ಗೆ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿ: ಸಚಿವ ಸುಧಾಕರ್
Team Udayavani, May 1, 2021, 11:05 AM IST
ಕಲಬುರಗಿ: ಕೋವಿಡ್ ಸೋಂಕು ಪತ್ತೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸುವ ಸಿ.ಟಿ. ಸ್ಕ್ಯಾನ್ ಗೆ ದರ ನಿಗದಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಖರ ತಪಾಸಣೆಗಾಗಿ ತಜ್ಞರ ತಂಡ ಸಿಟಿ ಸ್ಕ್ಯಾನ್ ಮಾಡಲು ಸಲಹೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳೆ ಅಧಿಕ ಶುಲ್ಕ ಪಡೆಯುವಂತಿಲ್ಲ ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ನಿಗದಿತ ದರಗಳನ್ನು ಮಾತ್ರ ಪಡೆಯುವಂತೆ ಆದೇಶ ಹೊರಡಿಸಲಾಗುವುದು ಎಂದರು.
ಇದನ್ನೂ ಓದಿ:ಕೊರೊನಾ ಜನಕ ಕತೆಗಳು: ಹುಲಿ ಇದ್ದಂಗೆ ಇದ್ದ ಅಪ್ಪನನ್ನು ಸಾಯಿಸಿಬಿಟ್ರು..
ವೈದ್ಯಕೀಯ ಕಾಲೇಜು ಹೊಂದಿರದ ಜಿಲ್ಲೆಗಳಿಗೆ ಸಮೀಪದ ಜಿಲ್ಲೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗುತ್ತದೆ. ಚಿಕ್ಕಬಳ್ಳಾಪುರದ ಜನರಿಗೆ ಶೇ.15ರಷ್ಟು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹಾಸಿಗೆ ನಿಗದಿಪಡಿಸಿದ್ದು ಅನಿವಾರ್ಯ. ಈ ಸಂದರ್ಭದಲ್ಲಿ ಜನರ ಜೀವ ಉಳಿಸುವುದು ಅಗತ್ಯ ಎಂದು ಸಚಿವ ಸುಧಾಕರ ಸಮರ್ಥಿಸಿಕೊಂಡರು.
ಅಲ್ಲದೇ, ಮೆಡಿಕಲ್ ಕಾಲೇಜುಗಳಿಲ್ಲದ ಚಿಕ್ಕಮಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಯಾದಗಿರಿ ಜಿಲ್ಲೆಗಳ ಕೋವಿಡ್ ರೋಗಿಗಳನ್ನು ಸಮೀಪದ ನಗರಗಳ ಮೆಡಿಕಲ್ ಕಾಲೇಜು ಹಾಗೂ ಪ್ರಮುಖ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಕಳೆದ ವರ್ಷವೂ ಹೀಗೆ ಮಾಡಿದ್ದೆವು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವರಿಗೆ ಮಾಹಿತಿ ಕೊರತೆ ಇದೆ ಎಂದರು.
ಎಲ್ಲ ಕೋವಿಡ್ ರೋಗಿಗಳಿಗೂ ರೆಮ್ ಡಿಸಿವಿರ್ ಇಂಜೆಕ್ಷನ್ ಅಗತ್ಯವಿಲ್ಲ. ಸ್ವಯಂ ನಿರ್ಧಾರ ಮಾಡಿ ಯಾರೂ ತೆಗೆದುಕೊಳ್ಳಬಾರದು. ಯಾವ ರೋಗಿಗಳಿಗೆ ನೀಡಬೇಕು ಎಂಬ ಬಗ್ಗೆ ವೈದ್ಯರಿಗೆ ತಾಂತ್ರಿಕ ಸಮಿತಿ ಸಲಹೆ ನೀಡಲಿದೆ. ರೆಮ್ ಡಿಸಿವಿರ್ ಹಾಗೂ ಆಕ್ಸಿಜನ್ ಸಿಲಿಂಡರ್ ಗಳನ್ನು ಜನರು ಆತಂಕದಿಂದ ಮುಂಚೆಯೇ ಸಂಗ್ರಹಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಕೃತಕ ಅಭಾವ ಸೃಷ್ಟಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.