ಕಲಬುರಗಿಯಲ್ಲಿ ವಿಮಾನ ಬಿಡಿ ಭಾಗ ತಯಾರಿಕೆ ಘಟಕ
Team Udayavani, Nov 1, 2021, 11:10 AM IST
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೋದ್ಯಮ ಬೆಳವಣಿಗೆ ನಿಟ್ಟಿನಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ವಿಮಾನಗಳ ಬಿಡಿಭಾಗ ಉತ್ಪಾದನಾ ಘಟಕ ಮತ್ತು ದುರಸ್ತಿಗೊಳಿಸುವ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.
ರವಿವಾರ ನಗರದ ಬಿಜೆಪಿ ಕಚೇರಿಗೆ ರವಿವಾರ ಸಂಜೆ ಭೇಟಿ ನೀಡಿ ಗ್ರಾಮಾಂತರ ಜಿಲ್ಲಾ ಮತ್ತು ಮಹಾನಗರ ಜಿಲ್ಲಾ ಘಟಕದ ಪದಾಧಿಕಾರಿಗಳ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿ, ಕಲಬುರಗಿಯಲ್ಲಿ ವಿಮಾನ ಬಿಡಿ ಭಾಗಗಳ ಉತ್ಪಾದನಾ ಘಟಕ ಹಾಗೂ ಸೆಮಿಕಂಡಕ್ಟರ್‌ಗಳ ಉತ್ಪಾದನ ವಲಯ ಆರಂಭಗೊಂಡರೆ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ. ಬೆಂಗಳೂರು ಸಿಲಿಕಾನ್ ಸಿಟಿ ಆದಂತೆ, ಕಲಬುರಗಿ ಸೆಮಿ ಕಂಡಕ್ಟರ್ ಹಬ್ ಆಗಲಿದೆ. ಜತೆಗೆ ಸಾಕಷ್ಟು ಪ್ರಗತಿ ಸಹ ಆಗಲಿದೆ ಎಂದರು.
ಜಿಲ್ಲೆಯಲ್ಲಿ ಮತ್ತು ಈ ವಿಭಾಗದ ಜಿಲ್ಲೆಗಳಲ್ಲಿ ಹೆಚ್ಚು ಉದ್ಯಮಗಳನ್ನು ಸ್ಥಾಪನೆ ಮಾಡಲು ಹಲವು ಕಂಪನಿಗಳಿಗೆ ಆಹ್ವಾನಿಸುವ ಮೂಲಕ ಕೈಗಾರಿಕೆಗಳನ್ನು ಆರಂಭಿಸುವ ಮೂಲಕ ಇಲ್ಲಿನವರಿಗೆ ಉದ್ಯೋಗ ಕಲ್ಪಿಸಲು ಕ್ರಮ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡಲಾಗುವುದು ಎಂದು ಸಚಿವರು ಪ್ರಕಟಿಸಿದರು.
ದೇಶದಲ್ಲಿಯೇ ಮೊದಲು ಎನ್ನುವಂತೆ “ಸೆಮಿಕಂಡಕ್ಟರ್ ಪಾಲಿಸಿ’ (ಅರೆವಾಹಕ ನೀತಿ)ಯನ್ನು (ವಾಹಕಗಳು ಮತ್ತು ಅವಾಹಕಗಳ ನಡುವಣ ವಿದ್ಯುತ್ ವಾಹಕತೆ ಹೊಂದಿರುವ ಘನ ವಸ್ತುಗಳು ಅರೆವಾಹಕ) ರಾಜ್ಯದಲ್ಲಿ ಜಾರಿಗೆ ತರಲು ನಿರ್ಧರಿಸಲಾಗಿದೆ. ಹೊಸ ನೀತಿಯಡಿ ಕಲಬುರಗಿಯಲ್ಲಿ ಅರೆವಾಹಕ ಉತ್ಪಾದನಾ ವಲಯ ಸ್ಥಾಪಿಸಲು ಕೆಲವು ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ. ಅಲ್ಲದೇ ಸೆಮಿಕಂಡಕ್ಟರ್‌ಗಳನ್ನು ಹಾಗೂ ವಿಮಾನ ಬಿಡಿ ಭಾಗಗಳನ್ನು ಉತ್ಪಾದನೆ ಮಾಡಲು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 500 ಎಕರೆ ಜಮೀನು ನೀಡಲು ಉದ್ಯಮಿಗಳು ಬೇಡಿಕೆಯಿಟ್ಟಿದ್ದಾರೆ. ಅಲ್ಲಿ ಜಮೀನು ಸಿಗುವುದು ಕಷ್ಟ. ಹೀಗಾಗಿ ಕಲಬುರಗಿಗೆ ಬರಲು ಆಹ್ವಾನಿಸಿದ್ದೇನೆ. ಬೇಕಾದಷ್ಟು ಜಮೀನು ನೀಡುವುದರ ಜತೆಗೆ ಹಲವು ಸಬ್ಸಿಡಿ ಸಹ ನೀಡುವುದಾಗಿ ಭರವಸೆ ನೀಡಿ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಬೆಳಗಾವಿ ಮತ್ತು ಹುಬ್ಬಳ್ಳಿ ನಡುವೆ ಕಿತ್ತೂರು ರಾಣಿ ಚನ್ನಮ್ಮ ಹೆಸರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೂರು ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಬೆಂಗಳೂರಿನಲ್ಲಿ ವಿಮಾನ ಬಿಡಿ ಭಾಗಗಳ ಉತ್ಪಾದನೆ ಮಾಡಲು ಘಟಕಗಳನ್ನು ಸ್ಥಾಪಿಸಲು ಹಲವು ವಿದೇಶಿ ಕಂಪನಿಗಳು ಮುಂದೆ ಬಂದಿವೆ. ಆದರೆ, ಕಲಬುರಗಿಗೆ ಮೊದಲ ಆದ್ಯತೆ ನೀಡಿದ ನಂತರ ಹುಬ್ಬಳ್ಳಿ-ಧಾರವಾಡಕ್ಕೆ ಎಂದು ಹೇಳಿದರು.
ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಿದ್ಧಾಜಿ ಪಾಟೀಲ ಸ್ವಾಗತಿಸಿದರು. ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕರ್ತರ ಬೇಡಿಕೆ ಮಂಡಿಸಿದರು. ಶಾಸಕರಾದ ಬಸವರಾಜ ಮತ್ತಿಮಡು, ಶಶೀಲ್ ನಮೋಶಿ, ಡಾ| ಅವಿನಾಶ ಜಾಧವ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ, ಅಮರನಾಥ ಪಾಟೀಲ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಧರ್ಮಣ್ಣ ದೊಡ್ಡಮನಿ, ಮಹಿಳಾ ಘಟಕದ ಅಧ್ಯಕ್ಷೆ ಭಾಗೀರಥಿ ಗುನ್ನಾಪುರ, ಪ್ರಮುಖರಾದ ಲಿಂಗರಾಜ ಬಿರಾದಾರ, ಪರಸರಡ್ಡಿ, ಡಾ| ಮಹೇಂದ್ರ ಕೋರಿ, ಸಿದ್ಧು ಪಾಟೀಲ ಮುಂತಾದವರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.