ಐತಿಹಾಸಿಕ ಬೌದ್ಧ ಸ್ತೂಪ ನೆಲೆ, ಚಂದ್ರಲಾ ಪರಮೇಶ್ವರಿ ದೇವಾಲಯ ಸಂಪೂರ್ಣ ಜಲಾವೃತ
Team Udayavani, Oct 16, 2020, 11:38 AM IST
ಕಲಬುರಗಿ: ಭೀಮಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಚಿತ್ತಾಪುರ ತಾಲೂಕಿನ ಸನ್ನತಿ ಬಳಿ ನದಿಯ ದಡದಲ್ಲಿರುವ ಕನಗನಹಳ್ಳಿ ಗ್ರಾಮ ಪರಿಸರದ ಐತಿಹಾಸಿಕ ಬೌದ್ಧ ಸ್ತೂಪ ನೆಲೆ ಹಾಗೂ ಚಂದ್ರಲಾ ಪರಮೇಶ್ವರಿ ದೇವಾಲಯ ಸಂಪೂರ್ಣ ಜಲಾವೃತಗೊಂಡಿದೆ.
ಭೀಮಾ ಬ್ಯಾರೇಜ್‍ನ ಎಲ್ಲಾ ಗೇಟ್‍ಗಳ ಮೂಲಕ ನೀರು ಹೊರ ಬಿಡಲಾಗುತ್ತಿರುವುದರಿಂದ ಉಂಟಾದ ಪ್ರವಾಹವು ವ್ಯಾಪಕವಾಗಿ ವಿಸ್ತರಿಸುತ್ತಿದೆ. ಕ್ರಿ.ಪೂ. 3ನೇ ಶತಮಾನಕ್ಕೆ ಸೇರಿದ ಮೌರ್ಯ ಸಾಮ್ರಾಜ್ಯದ ದೊರೆ ಸಾಮ್ರಾಟ್ ಅಶೋಕನ ಕಾಲದ ಬೌದ್ಧ ಚರಿತ್ರೆ ಸಾರುವ ಸಾವಿರಾರು ಬೌದ್ಧ ಶಿಲ್ಪಕಲೆಗಳು, ಬುದ್ಧ ವಿಹಾರ, ಬುದ್ಧನ ಮೂರ್ತಿಗಳು, ಪಾಲಿ ಭಾಷೆಯ ಶಿಲಾ ಶಾಸನ ಹೀಗೆ ಸಾವಿರಾರು ಬೌದ್ಧ ಕುರುಹುಗಳಿರುವ ಜಾಗಕ್ಕೆ ಪ್ರವಾಹದ ನೀರು ನುಗ್ಗಿದೆ . ಕೇಂದ್ರ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿರುವ ಈ ಬೌದ್ಧ ನೆಲೆಯೀಗ ಜಲಪ್ರವಾಹಕ್ಕೆ ಸಿಲುಕಿದೆ.
ಇದನ್ನೂ ಓದಿ:ಡೋಣಿ ನದಿ ಪ್ರವಾಹದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 7 ಜನ ಕಾರ್ಮಿಕರ ರಕ್ಷಣೆ
ಏಕಾಏಕಿ ಪ್ರವಾಹ ಉಂಟಾಗಿ ಬೌದ್ಧ ಸ್ತೂಪ ತಾಣವೀಗ ನೀರಿನಲ್ಲಿ ನಿಂತಿದೆ. ಸನ್ನತಿ ಗ್ರಾಮ ಮತ್ತು ಬೌದ್ಧ ಸ್ತೂಪ ಸ್ಥಳದ ಜತೆಗೆ ಶ್ರೀಚಂದ್ರಲಾ ಪರಮೇಶ್ವರಿ ದೇವಸ್ಥಾನ ಮುಳುಗಡೆಯಾಗಿದೆ. ಅದೇ ರೀತಿ ಇತರೆಡೆ ಪ್ರವಾಹ ಉಂಟಾಗಿದ್ದು, ಭೀಮಾ ನದಿ ದಡದ ಎಂಟು ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತಗೊಂಡಿದ್ದಾರೆ. ಕಂದಾಯ ಸಚಿವ ಆರ್. ಅಶೋಕ ಇಂದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.