ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ
Team Udayavani, May 9, 2017, 4:49 PM IST
ಕಲಬುರಗಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 2 ಲಕ್ಷ ಮಕ್ಕಳು ಇದ್ದು, ಇವರಿಗೆ ಕಡ್ಡಾಯವಾಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ಕೊಡಿಸುವುದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಪಾಲಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್ ಹೇಳಿದರು.
ನಗರದ ಖಾದ್ರಿ ಚೌಕ್ ಪ್ರದೇಶದ ಜಾನಿ ರಜಾಕ್ ನಗರದ ಅಂಗನವಾಡಿ ಕೇಂದ್ರ-2ರಲ್ಲಿ ನಾಲ್ಕನೇ ಹಂತದ ಇಂದ್ರಧನುಷ್ ವಿಶೇಷ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಹಲವಾರು ಬಾರಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಲಾಗುವುದು.
ಆದರೂ ಅನೇಕ ಮಕ್ಕಳು ಲಸಿಕೆಯಿಂದ ವಂಚಿತರಾಗುತ್ತಾರೆ. ಅಂತವರನ್ನು ಗುರುತಿಸಿ ಇಂದ್ರಧನುಷ್ ವಿಶೇಷ ಲಸಿಕಾ ಕಾರ್ಯಕ್ರಮದಲ್ಲಿ ಲಸಿಕೆ ನೀಡಲಾಗುವುದು ಎಂದರು. ಎರಡು ವರ್ಷದೊಳಗಿನ 12,839 ಮಕ್ಕಳಿಗೆ ಮತ್ತು 2834 ಲಸಿಕೆ ವಂಚಿತ ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕಲಾಗುತ್ತಿದೆ.
ಮುಂದಿನ ನಾಲ್ಕು ತಿಂಗಳು ಕಾಲ ಪ್ರತಿ ತಿಂಗಳು 7ನೇ ತಾರೀಖೀನಿಂದ ಒಂದು ವಾರಗಳ ಕಾಲ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ಡಾ| ಶಿವರಾಜ ಸಜ್ಜನಶೆಟ್ಟಿ, ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಶಂಕರಸಿಂಗ್, ಜಿಪಂ ಸಿಇಒ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಡಾ| ಅನಿಲಕುಮಾರ ತಾಳಿಕೋಟಿ, ಡಾ| ಎಂ.ಕೆ. ಪಾಟೀಲ, ಡಾ| ರುಧ್ರವಾಡಿ, ಶ್ರೀಕಾಂತ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.